ಗಾಣಿಗ ಸಮಾಜ ಇನ್ನೂ ಸಂಘಟಿತರಾಗಬೇಕಿದೆ: ಬಿ.ಎಸ್ ಗಣೇಶ್

KannadaprabhaNewsNetwork |  
Published : Aug 24, 2026, 01:45 AM IST
ಭದ್ರಾವತಿ ನಗರದ ಹೊಸ ಬುಳ್ಳಾಪುರ, ಗಾಣಿಗರ ಸಂಘದಿಂದ ಭಾನುವಾರ ಆಯೋಜಿಸಲಾಗಿದ್ದ ಗಾಣಿಗರ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣಸ್ವಾಮಿ ಪೂಜೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗು ಸಮುದಾಯ ಭವನದ ಪ್ರಥಮ ಹಂತದ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್ ಮತ್ತು ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. | Kannada Prabha

ಸಾರಾಂಶ

ಗಾಣಿಗರ ಸಮಾಜ ಇನ್ನೂ ಹೆಚ್ಚು ಸಂಘಟಿತರಾಗುವ ಮೂಲಕ ಸದೃಢಗೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಸಮಾಜದವರು ಹೆಚ್ಚಿನ ಗಮನ ಹರಿಸಬೇಕಾಗಿದೆ ಎಂದು ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್ ಹೇಳಿದರು.

ಕನ್ನಡಪ್ರಭ ವಾರ್ತೆ ಭದ್ರಾವತಿ

ಗಾಣಿಗರ ಸಮಾಜ ಇನ್ನೂ ಹೆಚ್ಚು ಸಂಘಟಿತರಾಗುವ ಮೂಲಕ ಸದೃಢಗೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಸಮಾಜದವರು ಹೆಚ್ಚಿನ ಗಮನ ಹರಿಸಬೇಕಾಗಿದೆ ಎಂದು ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್ ಹೇಳಿದರು.

ಅವರು ನಗರದ ಹೊಸ ಬುಳ್ಳಾಪುರ, ಗಾಣಿಗರ ಸಂಘದಿಂದ ಭಾನುವಾರ ಆಯೋಜಿಸಲಾಗಿದ್ದ ಗಾಣಿಗರ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣಸ್ವಾಮಿ ಪೂಜೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಮುದಾಯ ಭವನದ ಪ್ರಥಮ ಹಂತದ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಶಾಸಕರು ಗಾಣಿಗರ ಸಮಾಜದ ಅಭಿವೃದ್ಧಿಗೆ ಬದ್ದರಾಗಿದ್ದು, ಸಮಾಜದ ಮುಖ್ಯ ವಾಹಿನಿಯಲ್ಲಿ ಗಾಣಿಗರು ಸಹ ಗುರುತಿಸಿಕೊಳ್ಳುವ ಮೂಲಕ ಹೆಚ್ಚು ಸಂಘಟಿತರಾಗಬೇಕು. ಶಾಸಕರು ಹಾಗೂ ಅವರ ಕುಟುಂಬದವರಿಗೆ ಇದೇ ರೀತಿ ನಿಮ್ಮೆಲ್ಲರ ಸಹಕಾರ ಮುಂದಿನ ದಿನಗಳಲ್ಲೂ ಅಗತ್ಯವಾಗಿದೆ ಎಂದರು.

ಗಾಣಿಗರ ಸಮಾಜದ ಶ್ರೀ ಅನಂತಾನಂದ ಸ್ವಾಮೀಜಿ ದಿವ್ಯ ಸಾನ್ನಿಧ್ಯವಹಿಸಿದ್ದರು. ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(ಪಿಎಲ್‌ಡಿ ಬ್ಯಾಂಕ್) ತಾಲೂಕು ಅಧ್ಯಕ್ಷ ಬಿ.ಕೆ ಶಿವಕುಮಾರ್, ಗಾಣಿಗ ಸಂಘದ ಮಾರ್ಗದರ್ಶಕ ಬಿ.ಕೆ ಜಗನ್ನಾಥ್, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ಗಾಣಿಗ ಸಮಾಜದ ಮುಖಂಡ ಆರ್. ವರದರಾಜ್, ಯತೀಶ್ ಕುಮಾರ್ ಮತ್ತು ಗಾಣಿಗರ ಸಂಘದ ಜಿಲ್ಲಾಧ್ಯಕ್ಷ ಎಂ. ನಾಗರಾಜ್, ತಾಲೂಕು ಸಂಘದ ಪ್ರಮುಖರಾದ ಅಧ್ಯಕ್ಷ ಟಿ. ವೆಂಕಟೇಶ್, ಉಪಾಧ್ಯಕ್ಷರಾದ ರಾಮ ಶೆಟ್ಟರು, ಶಶಿಕುಮಾರ್, ಕಾರ್ಯಾಧ್ಯಕ್ಷ ಟಿ. ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಬಸವರಾಜ್, ಖಜಾಂಚಿ ಎಸ್. ಚಂದ್ರು, ಪ್ರಚಾರ ಸಮಿತಿ ಅಧ್ಯಕ್ಷ ಶಿವಕುಮಾರ್, ಬಾಗಲಕೋಟೆ, ಹಾಸನ, ರಾಣೇಬೆನ್ನೂರು, ಶಿವಮೊಗ್ಗ, ಹುಬ್ಬಳ್ಳಿ, ಬೆಂಗಳೂರು ಮತ್ತು ಯಡಿಯೂರು ಗಾಣಿಗರ ಸಮಾಜದ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.೭೦ಕ್ಕಿಂತ ಹೆಚ್ಚಿನ ಅಂಕ ಪಡೆದಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೇಮಾವತಿ ಜಲಾಶಯದಿಂದ ಕೆರೆಕಟ್ಟೆಗಳಿಗೆ ನೀರು: ಶಾಸಕ ಎಚ್.ಟಿ.ಮಂಜು ಪರಿಶೀಲನೆ
ಎಚ್ಡಿಕೆಯಿಂದ ಶ್ರೀಅಭಯ ಆಂಜನೇಯಸ್ವಾಮಿ ದೇಗುಲ ಲೋಕಾರ್ಪಣೆ