ಕೂಡಲಸಂಗಮದಲ್ಲಿ ಅನುಭವ ಮಂಟಪ-ಬಸವಾದಿ ಶರಣರ ವೈಭವ: ಸಚಿವ ತಿಮ್ಮಾಪೂರ

KannadaprabhaNewsNetwork |  
Published : Apr 22, 2025, 01:50 AM IST
ಬಸವ ಜಯಂತಿ ಅಂಗವಾಗಿ ಕೂಡಲ ಸಂಗಮದಲ್ಲಿ ಎಪ್ರೀಲ್ 29 ಮತ್ತು 30 ರಂದು ಎರಡು ದಿನಗಳ ಕಾಲ ಅನುಭವ ಮಂಟಪ-ಬಸವಾದಿ ಶರಣರ ವೈಭವ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಬಾಗಲಕೋಟೆ ಜಿಲ್ಲಾ ಸಭಾಂಗಣದಲ್ಲಿ ಇಂದು ಸಿದ್ದತೆ ಹಾಗೂ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅಬಕಾರಿ ಸಚಿವರಾದ ಆರ್.ಬಿ.ತಿಮ್ಮಾಪೂರ, ಬೀಳಗಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ, ವಿಧಾನ ಪರಿಷತ್ ಶಾಸಕ ಪಿ.ಎಚ್.ಪೂಜಾರ, ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಕೂಡಲ ಸಂಗಮ ಅಭಿವೃದ್ದಿ ಪ್ರಾಧಿಕಾರದ ಆಯುಕ್ತ ಮಹಾದೇವ ಮುರಗಿ, ಜಿ.ಪಂ ಉಪಕಾರ್ಯದಶರ್ಿ ಎನ್.ವಾಯ್.ಬಸರಿಗಿಡದ ಸೇರಿದಂತೆ ವಿವಿಧ ಸಮಿತಿಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು | Kannada Prabha

ಸಾರಾಂಶ

ಬಸವ ಜಯಂತಿ ಅಂಗವಾಗಿ ಕೂಡಲ ಸಂಗಮದಲ್ಲಿ ಏ.29 ಮತ್ತು 30ರಂದು ಎರಡು ದಿನಗಳ ಕಾಲ ಅನುಭವ ಮಂಟಪ-ಬಸವಾದಿ ಶರಣರ ವೈಭವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮ ಯಶಸ್ವಿಗೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಬಸವ ಜಯಂತಿ ಅಂಗವಾಗಿ ಕೂಡಲ ಸಂಗಮದಲ್ಲಿ ಏ.29 ಮತ್ತು 30ರಂದು ಎರಡು ದಿನಗಳ ಕಾಲ ಅನುಭವ ಮಂಟಪ-ಬಸವಾದಿ ಶರಣರ ವೈಭವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮ ಯಶಸ್ವಿಗೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಕರೆ ನೀಡಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಅನುಭವನ ಮಂಟಪ-ಬಸವಾದಿ ಶರಣರ ವೈಭವ ಕಾರ್ಯಕ್ರಮದ ಸಿದ್ಧತೆ ಹಾಗೂ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಸವಣ್ಣನವರ ಬದುಕು, ಸಂದೇಶ ಹಾಗೂ ಚಿಂತನೆಗಳನ್ನು ವ್ಯಾಪಕವಾಗಿ ಪಸರಿಸುವ ನಿಟ್ಟಿನಲ್ಲಿ ಕೂಡಲಸಂಗಮದಲ್ಲಿ ಎರಡು ದಿನ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಿದ್ಧತೆಗಳು ನಡೆಯುತ್ತಿದ್ದು, ಎಲ್ಲರೂ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಲು ತಿಳಿಸಿದರು.

ಮೊದಲ ದಿನ 29ರಂದು ಬೆಳಗ್ಗೆ ಎರಡು ಹಾಗೂ ಮಧ್ಯಾಹ್ನ ಎರಡು ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಜೊತೆಗೆ ಸ್ಥಳೀಯ ಕಲಾವಿದರಿಂದ ಸಂಗೀತ ಹಾಗೂ ನೃತ್ಯ ರೂಪಕ ಕಾರ್ಯಕ್ರಮ ಸಹ ಆಯೋಜಿಸಲಾಗಿದೆ. ಸಂಜೆ ಶಿವರಾತ್ರಿ ನಾಟಕ ಪ್ರದರ್ಶನಗೊಳ್ಳಲಿದೆ. ಗೋಷ್ಠಿಗಳಲ್ಲಿ ಖ್ಯಾತ ಸಾಹಿತಿಗಳು, ಕವಿಗಳು ಹಾಗೂ ಕಲಾವಿದರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಎರಡನೇ ದಿನ 30ರಂದು ಬೆಳಗ್ಗೆ ಸ್ಥಳೀಯ ಹಾಗೂ ವಿವಿಧ ಜಿಲ್ಲೆಗಳ ಕಲಾತಂಡ ಹಾಗೂ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯಲಿದೆ. ವೇದಿಕೆ ಕಾರ್ಯಕ್ರಮ ನಂತರ ಸಂಗೀತ, ನಾಟಕ ಹಾಗೂ ವೈವಿಧ್ಯಮಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡುವಂತೆ ಸಚಿವರು ತಿಳಿಸಿದರು. ಎರಡನೇ ದಿನದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ 1500ಕ್ಕೂ ಅಧಿಕ ಸಾಹಿತಿಗಳು,ಕಲಾವಿದರು ಪಾಲ್ಗೊಳ್ಳಲಿದ್ದು, ಜಿಲ್ಲೆಯ ಪ್ರತಿ ತಾಲೂಕಿನಿಂದ ಸಾರ್ವಜನಿಕರು ಆಗಮಿಸಲು ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಕಾರ್ಯಕ್ರಮಕ್ಕೆ ಆಗಮಿಸುವರಿಗೆ ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆ ಸಹ ಮಾಡಲಾಗುತ್ತಿದೆ ಎಂದರು. ಕಾರ್ಯಕ್ರಮ ಯಶಸ್ವಿಗೆ 11 ಸಮಿತಿಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಚನ್ನೂರ ಕಾರ್ಯಕ್ರಮದ ರೂಪುರೇಷೆಗಳನ್ನು ಸಭೆಗೆ ವಿವರಿಸಿದರು. ಶಾಸಕ ಜೆ.ಟಿ. ಪಾಟೀಲ, ವಿಧಾನ ಪರಿಷತ್ ಶಾಸಕ ಪಿ.ಎಚ್. ಪೂಜಾರ, ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಎಸ್ಪಿ ಅಮರನಾಥ ರೆಡ್ಡಿ, ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮಹಾದೇವ ಮುರಗಿ, ಜಿಪಂ ಉಪಕಾರ್ಯದರ್ಶಿ ಎನ್.ವೈ.ಬಸರಿಗಿಡದ ಸೇರಿದಂತೆ ವಿವಿಧ ಸಮಿತಿಯ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ