ಭಾರತದ ಹಿರಿಮೆ ಇತರ ರಾಷ್ಟ್ರಗಳಿಗೆ ಮಾದರಿ: ಗೌರವಶೆಟ್ಟಿ

KannadaprabhaNewsNetwork |  
Published : Jan 28, 2024, 01:15 AM IST
ಮಧುಗಿರಿಯ ಲಾಜೀವ್‌ಗಾಂಧಿ ಕ್ರೀಡಾಂಗಣದಲ್ಲಿ  ನಡೆದ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ  ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ತಾಲೂಕು ಆಡಳಿತದಿಂದ ಸನ್ಮಾನಿಸಲಾಯಿತು.  | Kannada Prabha

ಸಾರಾಂಶ

ಭಾರತ ಹಲವು ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದ್ದು ಭಾರತ ದೇಶದ ಹಿರಿಮೆ ಇತರ ರಾಷ್ಟ್ರಗಳಿಗೆ ಮಾದರಿಯಾಗಿದ್ದು, ಈ ಸಾಧನೆಗೆ ಅಂಬೇಡ್ಕರ್‌ ರಚಿಸಿರುವ ಸಂವಿಧಾನವೇ ಕಾರಣ ಎಂದು ಪ್ರಭಾರ ಉಪವಿಭಾಗಾಧಿಕಾರಿ ಕುಮಾರ್‌ ಗೌರವಶೆಟ್ಟಿ ತಿಳಿಸಿದರು

ಕನ್ನಡಪ್ರಭ ವಾರ್ತೆ ಮಧುಗಿರಿ

ಭಾರತ ಹಲವು ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದ್ದು ಭಾರತ ದೇಶದ ಹಿರಿಮೆ ಇತರ ರಾಷ್ಟ್ರಗಳಿಗೆ ಮಾದರಿಯಾಗಿದ್ದು, ಈ ಸಾಧನೆಗೆ ಅಂಬೇಡ್ಕರ್‌ ರಚಿಸಿರುವ ಸಂವಿಧಾನವೇ ಕಾರಣ ಎಂದು ಪ್ರಭಾರ ಉಪವಿಭಾಗಾಧಿಕಾರಿ ಕುಮಾರ್‌ ಗೌರವಶೆಟ್ಟಿ ತಿಳಿಸಿದರು.

ಇಲ್ಲಿನ ರಾಜೀವ್‌ ಗಾಂಧಿ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಪುರಸಭೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಡಾ.ಬಿ.ಆರ್‌. ಅಂಬೇಡ್ಕರ್‌ ರಚಿಸಿ ಕೊಟ್ಟಿರುವ ಸಂವಿಧಾನ ವಿಶ್ವದಲ್ಲಿಯೇ ಅತಿ ದೊಡ್ಡ ಜನ ತಂತ್ರ ಸಂವಿಧಾನ ನಮ್ಮದು. ಇದರ ಸ್ವಾರಸ್ಯವನ್ನು ಎಲ್ಲರೂ ಗ್ರಹಿಸಿ ಪಾಲಿಲಸಿದರೆ ಅಭಿವೃದ್ಧಿ ಸುಲಭ ಸಾಧ್ಯವಾಗುತ್ತದೆ ಎಂದರು.

ಭಾರತ ವಿವಿಧತೆಯಲ್ಲಿ ಏಕತೆ ಹೊಂದಿದೆ. ತನ್ನ ದೇಶದ ಜನರ ಹಿತ ಮತ್ತು ಹಕ್ಕು ಕಾಪಾಡಲು ಸಂವಿಧಾನ ಆಧಾರ ಗ್ರಂಥ, ಇದನ್ನು ಅಳವಡಿಸಿದ ದಿನವೇ ಗಣರಾಜ್ಯ, ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯಾತೀತ, ಪ್ರಜಾಸತ್ತಾತ್ಮಕ ಗಣರಾಜ್ಯವಾಗಿದೆ. ಬಾಹ್ಯಾಕಾಶ, ಮಾಹಿತಿ ತಂತ್ರಜ್ಞಾನ, ವೈದ್ಯಕೀಯ ಸೇರಿ ಹತ್ತಾರು ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿರುವ ಭಾರತ ಇತರ ರಾಷ್ಟ್ರಗಳಿಗೆ ಮಾದರಿ, ಸಾಂಸ್ಕೃತಿಕ , ಧಾರ್ಮಿಕ, ಸಾಮಾಜಿಕ ಸಮಗ್ರತೆ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಬಲಿಷ್ಠ ಅಭಿವೃದ್ಧಿಶೀಲ ಪತದತ್ತ ನಮ್ಮ ದೇಶ ಕೊಂಡೊಯ್ಯಲು ಎಲ್ಲರೂ ಕೈ ಜೋಡಿಸಬೇಕು ಎಂದು ಕರೆ ನೀಡಿದರು

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲ ವಿದ್ಯಾರ್ಥಿಗಳಿಗೂ ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಮತ್ತು ಎಂಎಲ್‌ಸಿ ಆರ್‌. ರಾಜೇಂದ್ರ ನೀಡಿದ್ದ ಸಿಹಿ ತಿನಿಸು ಮತ್ತು ನೀರಿನ ಬಾಟಲ್‌ ಆಯೋಜಕರು ವಿತರಿಸಿದರು.

ಸಮಾರಂಭದಲ್ಲಿ ಪ್ರಭಾರ ತಹಸೀಲ್ದಾರ್‌ ಶ್ರೀನಿವಾಸ್‌, ಪುರಸಭೆ ಮಾಜಿ ಅಧ್ಯಕ್ಷ ಎನ್‌. ಗಂಗಣ್ಣ, ಟಿಎಪಿಸಿಎಂಎಸ್‌ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಟೌನ್‌ ಸೊಸೈಟಿ ಅಧ್ಯಕ್ಷ ಎಂ.ಆರ್‌. ಜಗನ್ನಾಥ್‌, ಡಿಡಿಪಿಐ ಮಂಜುನಾಥ್‌, ಬಿಇಒ ಹನುಮಂತರಾಯಪ್ಪ, ಡಿವೈಎಸ್‌ಪಿ ರಾಮಚಂದ್ರಪ್ಪ, ಸಿಪಿಐ ಹನುಮಂತರಾಯಪ್ಪ, ನೌಕರರ ಸಂಘದ ಅಧ್ಯಕ್ಷ ಜಿ. ಜಯರಾಮಯ್ಯ, ಪಿಎಸ್‌ಐ ವಿಜಯ್‌ ಕುಮಾರ್‌, ಉಪ ವಲಯ ಅರಣ್ಯಾಧಿಕಾರಿ ಮುತ್ತು ರಾಜ್‌, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಟಿ. ಲಕ್ಷ್ಮೀನರಸಯ್ಯ, ಲೋಕೋಪಯೋಗಿ ಇಇ ಸುರೇಶ್‌ ರೆಡ್ಡಿ, ಪುರಸಭೆ ಮುಖ್ಯಾಧಿಕಾರಿ ಸುರೇಶ್‌, ಇಒ ಲಕ್ಷ್ಮಣ್‌, ಪತ್ರಕರ್ತರ ಸಂಘದ ಅಧ್ಯಕ್ಷ ಚಂದ್ರಕಾಂತ್‌, ದಲಿತ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ. ಮಹಾರಾಜು, ಎಡಿಒ ಮಧುಸೂದನ್‌ ಸೇರಿದಂತೆ ಅನೇಕರಿದ್ದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.

PREV

Recommended Stories

ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!