ಸದೃಢ ಭಾರತ ನಿರ್ಮಿಸುವ ಗುರಿ ಯುವಜನತೆ ಮೇಲಿದೆ: ತಸ್ನೀಮ್ ಕೌಸರ್

KannadaprabhaNewsNetwork |  
Published : Mar 10, 2026, 02:15 AM IST
ಸಸಸ | Kannada Prabha

ಸಾರಾಂಶ

ಚಿಕ್ಕಮಗಳೂರುಸದೃಢ ಭಾರತ ನಿರ್ಮಿಸುವ ಜವಾಬ್ದಾರಿ ಯುವಜನತೆಯ ಮೇಲಿದೆ ಎಂದು ಐಡಿಎಸ್‌ಜಿ ಸರ್ಕಾರಿ ಕಾಲೇಜು ಪ್ರಾಂಶುಪಾಲೆ ತಸ್ನೀಮ್ ಕೌಸರ್ ಮನಿಯಾರ್ ಹೇಳಿದರು.

‘ವಿಕಸಿತ್ ಭಾರತ್ ಯುವ ಸಂಸತ್-2026’ ಜಿಲ್ಲಾ ಮಟ್ಟದ ಸ್ಪರ್ಧೆಗೆ ಚಾಲನೆ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಸದೃಢ ಭಾರತ ನಿರ್ಮಿಸುವ ಜವಾಬ್ದಾರಿ ಯುವಜನತೆಯ ಮೇಲಿದೆ ಎಂದು ಐಡಿಎಸ್‌ಜಿ ಸರ್ಕಾರಿ ಕಾಲೇಜು ಪ್ರಾಂಶುಪಾಲೆ ತಸ್ನೀಮ್ ಕೌಸರ್ ಮನಿಯಾರ್ ಹೇಳಿದರು.

ನಗರದ ಐಡಿಎಸ್ ಕಾಲೇಜಿನಲ್ಲಿ ಸೋಮವಾರ ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ ಪ್ರಾಂತೀಯ ನಿರ್ದೇಶನಾಲಯ, ಕಾಲೇಜು ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ‘ವಿಕಸಿತ್ ಭಾರತ್ ಯುವ ಸಂಸತ್-2026’ ಜಿಲ್ಲಾ ಮಟ್ಟದ ಸ್ಪರ್ಧೆಗೆ ಚಾಲನೆ ನೀಡಿದ ಮಾತನಾಡಿ ಯುವಸಂಸತ್ ಒಂದು ಸ್ಪರ್ಧೆಯಲ್ಲ. ಸಂಸತ್ತಿನ ವ್ಯವಸ್ಥೆ, ಪ್ರಜಾಪ್ರಭುತ್ವದ ಮೌಲ್ಯ ಮತ್ತು ಆಡಳಿತ ಕ್ರ ಮಗಳನ್ನು ತಿಳಿಸುವ ವೇದಿಕೆಯಾಗಿದೆ ಎಂದರು.

ಕಾಲೇಜು ದಿನಗಳಿಂದಲೇ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವ ನಿಟ್ಟಿನಲ್ಲಿ ಪ್ರತಿ ವರ್ಷ ಕೇಂದ್ರ ಸರ್ಕಾರ ಯುವ ಸಂಸತ್ ಸ್ಪರ್ಧೆ ನಡೆಸುತ್ತಿದೆ. ಭವಿಷ್ಯದ ಭಾರತದ ನಿರ್ಮಾಣ ಹಾಗೂ ರಾಜಕೀಯ ಕ್ಷೇತ್ರದ ಬಗ್ಗೆ ವಿದ್ಯಾರ್ಥಿಗಳಲ್ಲಿ ಚಿಂತನೆ ಆಲೋಚನೆ ಬೆಳೆಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ವಿವರಿಸಿದರು.

ಯುವಜನತೆ ರಾಷ್ಟ್ರದ ಶಕ್ತಿ, ವಿದ್ಯಾರ್ಥಿಗಳು ಪ್ರಜಾಪ್ರಭುತ್ವ, ಸಂವಿಧಾನ ಆಶಯಗಳನ್ನು ಅರ್ಥೈಸಿಕೊ ಳ್ಳಬೇಕು. ರಾಜಕೀಯ ವ್ಯವಸ್ಥೆ ಬಳಸಿಕೊಂಡು ಆಡಳಿತಾತ್ಮಕ ಚಿಂತನೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ರಾಜ್ಯಾದ್ಯಂತ ಪ್ರತಿ ಜಿಲ್ಲಾ ಕೇಂದ್ರದಲ್ಲಿ ನಡೆಯುತ್ತಿದೆ. ಭಾರತ ಜಾಗತಿಕ ಮಟ್ಟದಲ್ಲಿ ವೇಗವಾಗಿ ಬೆಳೆಯುತ್ತಿರುವ ಸಂದರ್ಭ ದಲ್ಲಿ ದೇಶದ ಯುವಜನಸಂಖ್ಯೆ ದೊಡ್ಡ ಶಕ್ತಿಯಾಗಿದೆ. ಈ ಶಕ್ತಿಯನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳಬೇಕಿದೆ ಎಂದು ಹೇಳಿದರು.

ಕುವೆಂಪು ವಿಶ್ವವಿದ್ಯಾಲಯ ಎನ್‌ಎಸ್‌ಎಸ್ ಸಂಯೋಜಕಿ ಡಾ.ಶುಭಾ ಮರವಂತೆ ಮಾತನಾಡಿ, ಯುವ ಸಂಸತ್ ಜಿಲ್ಲಾ ಸ್ಪರ್ಧೆಯಲ್ಲಿ ವಿವಿಧ ಕಾಲೇಜುಗಳಿಂದ ಅನೇಕ ವಿದ್ಯಾರ್ಥಿಗಳು ಭಾಗವಹಿಸುತ್ತಾರೆ. ಈ ಪೈಕಿ 10 ವಿದ್ಯಾರ್ಥಿಗಳು ಮಾತ್ರ ರಾಜ್ಯಮಟ್ಟಕ್ಕೆ ಆಯ್ಕೆಯಾಗುತ್ತಾರೆ. ಅಲ್ಲಿಂದ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಯಾಗುವ ಕೆಲವು ವಿದ್ಯಾರ್ಥಿಗಳು ಮಾತ್ರ ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಸಂಸತ್‌ನಲ್ಲಿ ಭಾಗವಹಿಸುವ ಅವಕಾಶ ಪಡೆದುಕೊಳ್ಳಲಿದ್ದಾರೆ ಎಂದರು.ಕಾಲೇಜು ಸಹಾಯಕ ಪ್ರಾಧ್ಯಾಪಕ ಗಿರೀಶ್‌ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಾದ ಎನ್‌ಎಸ್‌ಎಸ್, ಕ್ರೀಡೆ, ಕೌಶಲ್ಯ ತರಬೇತಿ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ದೇಶದ ಪ್ರಜಾ ಪ್ರಭುತ್ವ ವ್ಯವಸ್ಥೆ, ಸಂಸತ್ ಕಲಾಪಗಳು ಮತ್ತು ತುರ್ತು ಪರಿಸ್ಥಿತಿ ಸಂದರ್ಭಗಳ ಕುರಿತು ಅರಿವು ಮೂಡಿಸಲು ಇಂತಹ ಕಾರ್ಯಕ್ರಮಗಳು ಸಹಾಯಕವಾಗುತ್ತವೆ ಎಂದರು.ಸ್ಪರ್ಧೆಯಲ್ಲಿ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದರು. ಈ ಸಂದರ್ಭದಲ್ಲಿ ಕಾಲೇಜು ಪ್ರಾಧ್ಯಾಪಕ ಡಾ.ಕೆ.ಎನ್.ಲಕ್ಷ್ಮೀಕಾಂತ್‌, ಅಭಿವೃದ್ದಿ ಸಮಿತಿ ಸದಸ್ಯ ಆದಿಲ್, ತೀರ್ಪುಗಾರರಾಗಿ ಪದವಿ ಪೂರ್ವ ಶಿಕ್ಷಣ ಮಂಡಳಿ ಇಲಾಖೆ ನಿವೃತ್ತ ಪ್ರಾಂಶುಪಾಲ ಬಿ.ತಿಪ್ಪೇರುದ್ರಪ್ಪ, ಕಾಲೇಜು ಶಿಕ್ಷಣ ನಿರ್ದೇಶನಾಲಯ ಪ್ರಾಂಶುಪಾಲ ತ್ರಿಪುರಾ ಮಹೇಶ್ವರ, ಸರ್ಕಾರಿ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜು ಸಹ ಪ್ರಾಧ್ಯಾಪಕ ಡಾ.ಶ್ರೀನಿವಾಸ್, ಗ್ಲೋಬಲ್ ಮತ್ತು ಸೋಷಿಯಲ್ ವೆಲ್ಫೇರ್ ಪೌಂಡೇಷನ್ ರಾಜ್ಯಾಧ್ಯಕ್ಷ ಇಮ್ರಾಮ್ ಅಹ್ಮದ್ ಬೇಗ್ ಉಪಸ್ಥಿತರಿದ್ದರು.

ಫೋಟೋ

ನಗರದ ಐಡಿಎಸ್ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ‘ವಿಕಸಿತ್ ಭಾರತ್ ಯುವ ಸಂಸತ್-2026’ ಜಿಲ್ಲಾ ಮಟ್ಟದ ಸ್ಪರ್ಧೆಗೆ ಪ್ರಾಂಶುಪಾಲೆ ತಸ್ನೀಮ್ ಕೌಸರ್ ಮನಿಯಾರ್ ಚಾಲನೆ ನೀಡಿದರು. ಕುವೆಂಪು ವಿವಿ ಎನ್‌ಎಸ್‌ಎಸ್ ಸಂಯೋಜಕಿ ಡಾ.ಶುಭ ಮರವಂತೆ, ನಿವೃತ್ತ ಪ್ರಾಂಶುಪಾಲ ಬಿ.ತಿಪ್ಪೇರುದ್ರಪ್ಪ ಸೇರಿದಂತೆ ಮೊದಲಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉನ್ನತ ಹುದ್ದೆ ಕನಸು ಈಡೇರಿಸಲು ಅಧ್ಯಯನ ಅವಶ್ಯಕ : ಶ್ರೀನಿವಾಸ್
ಕೆ.ಆರ್. ಆಸ್ಪತ್ರೆಯಲ್ಲಿ 100 ಹಾಸಿಗೆವುಳ್ಳ ಐ.ಸಿ.ಯು ಘಟಕ ಸ್ಥಾಪಿಸಿ: ಕೆ. ಶಿವಕುಮಾರ್