ಉನ್ನತ ವ್ಯಕ್ತಿತ್ವ ನಿರ್ಮಾಣವೇ ಶಿಕ್ಷಣದ ಗುರಿ: ಡಾ. ಉಳ್ಳಾಗಡ್ಡಿ

KannadaprabhaNewsNetwork |  
Published : Jun 01, 2026, 02:00 AM IST
ಡಿಡಿಪಿಐ ಕಚೇರಿಯ ಶಿಕ್ಷಣಾಧಿಕಾರಿ ಪ್ರಭಯ್ಯ ಕೆ. ಚಿಕ್ಕಮಠ ಅವರ ಸೇವಾ ನಿವೃತ್ತಿ ಹಿನ್ನೆಲೆಯಲ್ಲಿ ಚಿಕ್ಕಮಠ ದಂಪತಿಗೆ ಸನ್ಮಾನಿಸಲಾಯಿತು.  | Kannada Prabha

ಸಾರಾಂಶ

ಜೀವನ ಮೌಲ್ಯಗಳೊಂದಿಗೆ ಉನ್ನತ ವ್ಯಕ್ತಿತ್ವ ನಿರ್ಮಾಣವೇ ಶಿಕ್ಷಣದ ಗುರಿ ಎಂದು ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಪ್ರತಿಪಾದಿಸಿದರು.

ಧಾರವಾಡ: ಕೇವಲ ಉದ್ಯೋಗ ಸಂಪಾದನೆಯಷ್ಟೇ ವಿದ್ಯಾರ್ಜನೆಯ ಉದ್ದೇಶವಲ್ಲ. ಮಾನವನು ತನ್ನ ಬದುಕನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಲು ಅಗತ್ಯವಾಗಿರುವ ಜೀವನ ಮೌಲ್ಯಗಳೊಂದಿಗೆ ಉನ್ನತ ವ್ಯಕ್ತಿತ್ವ ನಿರ್ಮಾಣವೇ ಶಿಕ್ಷಣದ ಗುರಿ ಎಂದು ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಪ್ರತಿಪಾದಿಸಿದರು.

ಇಲ್ಲಿಯ ಡಿಡಿಪಿಐ ಕಚೇರಿಯ ಶಿಕ್ಷಣಾಧಿಕಾರಿ ಪ್ರಭಯ್ಯ ಕೆ. ಚಿಕ್ಕಮಠ, ವೃತ್ತಿಶಿಕ್ಷಣ ವಿಭಾಗದ ವಿಷಯ ಪರಿವೀಕ್ಷಕ ಬಿ.ವೈ. ಭಜಂತ್ರಿ ಹಾಗೂ ಪ್ರಥಮ ದರ್ಜೆ ಸಹಾಯಕ ಶಶಿಧರ ಕಟ್ಟಿಮನಿ ನಿವೃತ್ತಿಯ ಸಂದರ್ಭದಲ್ಲಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆಯಲ್ಲಿ ಅವರು ಮಾತನಾಡಿದರು.

ಶಾಲಾ ಶಿಕ್ಷಣ ಇಲಾಖೆಯ ಎಲ್ಲ ಭಾಗೀದಾರರು ರಾಷ್ಟ್ರವನ್ನು ಸಮರ್ಥವಾಗಿ ಮುನ್ನಡೆಸಲು ಅಗತ್ಯ ಮಾನವಸಂಪನ್ಮೂಲ ನಿರ್ಮಾಣಕ್ಕೆ ತೆರೆದುಕೊಳ್ಳಬೇಕು ಎಂದರು.

ಇಲಾಖೆಯ ನಿರ್ದೇಶಕ ಈಶ್ವರ ನಾಯಕ, ಉಪನಿರ್ದೇಶಕ ಗಿರೀಶ ಪದಕಿ, ಡಯಟ್ ಪ್ರಾಚಾರ್ಯ ಬಸವರಾಜ ನಾಲತವಾಡ, ಸಹಾಯಕ ನಿರ್ದೇಶಕ ಪ್ರಕಾಶ ಹೊಸಮನಿ, ಪ್ರಭುಕುಮಾರ ಅಗಡಿ, ವೀರೇಶ ಕಲಬುರ್ಗಿ ಸೇರಿದಂತೆ ಇತರರು ಇದ್ದರು.

ಡಯಟ್ ಸಭಾಭವನದಲ್ಲಿ ನಡೆದ ಪ್ರತ್ಯೇಕ ಸಮಾರಂಭದಲ್ಲಿ ಶಿಕ್ಷಣಾಧಿಕಾರಿ ಪ್ರಭಯ್ಯ ಚಿಕ್ಕಮಠ ಅವರನ್ನು ಇಲಾಖೆ ವತಿಯಿಂದ ಗೌರವಿಸಿ ಬೀಳ್ಕೊಡಲಾಯಿತು. ಅಭಿವೃದ್ಧಿ ಉಪನಿರ್ದೇಶಕ ಬಸವರಾಜ ನಾಲತವಾಡ, ಪ್ರಭಾರಿ ಡಿಡಿಪಿಐ ಉಮೇಶ ಬೊಮ್ಮಕ್ಕನವರ, ಇಲಾಖೆಯ ಅಧಿಕಾರಿಗಳಾದ ಎಸ್.ಎಂ. ಹುಡೇದಮನಿ, ಡಾ. ರೇಣುಕಾ ಅಮಲಝರಿ, ನಫೀಜಾ ದಾವಲಸಾಬನವರ, ನಿವೃತ್ತ ಉಪನಿರ್ದೇಶಕರಾದ ಎಸ್.ಎಸ್. ಕೆಳದಿಮಠ, ಡಾ. ಗುರುನಾಥ ಹೂಗಾರ, ವಿರೂಪಾಕ್ಷಯ್ಯ ಚಿಕ್ಕಮಠ, ಕಾರ್ತಿಕ ಚಿಕ್ಕಮಠ, ಅನೂಷಾ ಚಿಕ್ಕಮಠ, ಜಯಶ್ರೀ ಕಲ್ಮಠ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಸವಣ್ಣನ ಹೆಸರಿನಲ್ಲಿ ಹಿಂದೂ ಸಮಾಜ ಒಡೆಯುವ ಷಡ್ಯಂತ್ರ
ಭಾರತ ಏಕತೆ, ಶಾಂತಿಯ ಸುಂದರ ತೋಟ: ಡಾ. ಅನ್ನದಾನೀಶ್ವರ ಶ್ರೀ