ಎಲ್ಲರಿಗೂ ಕುಡಿಯುವ ನೀರು ಒದಗಿಸುವ ಗುರಿ

KannadaprabhaNewsNetwork |  
Published : Jul 27, 2025, 01:52 AM IST
26ಜಿಯುಡಿ3 | Kannada Prabha

ಸಾರಾಂಶ

ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ಪ್ರತಿ ಮನೆ ಮನೆಗೂ ನಲ್ಲಿ ಮೂಲಕ ನೀರು ಕೊಡುವಂತಹ ಕೆಲಸ ಬಹುತೇಕ ಪೂರ್ಣಗೊಳ್ಳುತ್ತಿದೆ. ಅದರ ಮುಂದುವರೆದ ಭಾಗವಾಗಿ ನಗರ ಹಾಗೂ ಪಟ್ಟಣದ ವ್ಯಾಫ್ತಿಯಲ್ಲಿ ವಾಸಿಸುವಂತಹ ಜನರಿಗ ಅನುಕೂಲವಾಗುವ ನಿಟ್ಟಿನಲ್ಲಿ ಅಮೃತ್ 2.0 ಯೋಜನೆಯ ಮೂಲಕ ನಲ್ಲಿ ಮೂಲಕ ನೀರು ಒದಗಿಸಲಾಗುವುದು.

ಕನ್ನಡಪ್ರಭ ವಾರ್ತೆ ಗುಡಿಬಂಡೆ

ದೇಶದ ಪ್ರತಿಯೊಂದು ಮನೆಗೂ ನಲ್ಲಿ ಮೂಲಕ ನೀರು ಕೊಡುವಂತಹ ಮಹದಾಸೆಯನ್ನು ಹೊಂದಿರುವಂತಹ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಿಂದ ಸಾಕಷ್ಟು ಯೋಜನೆಗಳನ್ನು ಜಾರಿ ಮಾಡುತ್ತಿದ್ದು, ಅದರ ಭಾಗವಾಗಿಯೇ ಜಲಜೀವನ್ ಮಿಷನ್ ಯೋಜನೆ ಹಾಗೂ ಅಮೃತ್ 2.0 ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಸಂಸದ ಡಾ.ಕೆ.ಸುಧಾಕರ್ ತಿಳಿಸಿದರು.

ಕೇಂದ್ರ ಪುರಸ್ಕೃತ ಅಮೃತ್ 2.0 ಯೋಜನೆಯಡಿ ಅಮಾನಿಬೈರಸಾಗರ ಕೆರೆಯ ಮೂಲದಿಂದ ಗುಡಿಬಂಡೆ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಯೋಜನೆಯ ಶಂಕುಸ್ಥಾಪನೆಯ ಬಳಿಕ ಮಾದ್ಯಮಗಳೊಂದಿಗೆ ಅವರು ಮಾತನಾಡಿದರು.

ಬಡವರ ಪರ ಕೆಲಸ ಮಾಡುವ ಮೋದಿ

ಇಂದು ದೇಶದ ಬಡವರ ಪರ ಕೆಲಸ ಮಾಡುವ ಏಕೈಕ ಸರ್ಕಾರ ನರೇಂದ್ರ ಮೋದಿ ಸರ್ಕಾರ ಎಂದು ಹೇಳಬಹುದು. ಈಗಾಗಲೇ ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ಪ್ರತಿ ಮನೆ ಮನೆಗೂ ನಲ್ಲಿ ಮೂಲಕ ನೀರು ಕೊಡುವಂತಹ ಕೆಲಸ ಬಹುತೇಕ ಪೂರ್ಣಗೊಳ್ಳುತ್ತಿದೆ. ಅದರ ಮುಂದುವರೆದ ಭಾಗವಾಗಿ ನಗರ ಹಾಗೂ ಪಟ್ಟಣದ ವ್ಯಾಫ್ತಿಯಲ್ಲಿ ವಾಸಿಸುವಂತಹ ಜನರಿಗ ಅನುಕೂಲವಾಗುವ ನಿಟ್ಟಿನಲ್ಲಿ ಅಮೃತ್ 2.0 ಯೋಜನೆಯ ಮೂಲಕ ನಲ್ಲಿ ಮೂಲಕ ನೀರು ಒದಗಿಸುವ ಯೋಜನೆಯಾಗಿದೆ ಎಂದರು

ಈ ಯೋಜನೆಗೆ ಕೇಂದ್ರ ಸರ್ಕಾರದಿಂದ ಶೇ.50 ರಷ್ಟು, ರಾಜ್ಯ ಸರ್ಕಾರದಿಂದ ಶೇ.40 ಹಾಗೂ ಸ್ಥಳೀಯ ಸಂಸ್ಥೆಗಳಿಂದ ಶೇ.10 ರಷ್ಟು ಅನುದಾನ ಒದಗಿಸಲಾಗುತ್ತದೆ. ಈಗಾಗಲೇ ಈ ಯೋಜನೆಗಳು ಪೂರ್ಣಗೊಳ್ಳಬೇಕಾಗಿತ್ತು. ಆದರೆ ನರೇಂದ್ರ ಮೋದಿ ಸರ್ಕಾರ ಬಂದ ಮೇಲೆ ಗ್ರಾಮೀಣ ಅಥವಾ ನಗರ ಭಾಗಗಳಲ್ಲಿ ಮೂಲಭೂತ ಸೌಕರ್ಯಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದರು.

ಭರವಸೆ ಈಡೇರಿಸಿದ್ದೇನೆ

ಲೋಕಸಭಾ ಚುನಾವಣೆ ಸಮಯದಲ್ಲಿ ನಾನೂ ಸಹ ನೀರು ಒದಗಿಸುವ ಯೋಜನೆಯನ್ನು ತರುತ್ತೇನೆ ಎಂದು ಭರವಸೆ ನೀಡಿದ್ದೆ. ಅದರಂತೆ ಇಂದು ಚಿಕ್ಕಬಳ್ಳಾಪುರ ಜಿಲ್ಲೆಗೆ ಸುಮಾರು 300 ಕೋಟಿಯಷ್ಟು ಅನುದಾನವನ್ನು ಕೇಂದ್ರ ಸರ್ಕಾರ ಕುಡಿಯುವ ನೀರಿನ ಯೋಜನೆಗೆ ನೀಡಿದೆ. ಈ ಯೋಜನೆಯನ್ನು ಒಂದೂವರೆ ವರ್ಷದೊಳಗೆ ಮುಗಿಸುತ್ತೇವೆ. ಜನರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಈ ಯೋಜನೆಗೆ ಸ್ಥಳೀಯ ಸಚಿವರು, ಶಾಸಕರು ಬೆಂಬಲ ಹಾಗೂ ಸಹಕಾರ ನೀಡಿದ್ದಾರೆ ಅವರಿಗೆ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದರು.

PREV

Recommended Stories

ರಾಜ್ಯದಲ್ಲಿ 3 ದಿನ ಭಾರೀ ಮಳೆ: 15 ಜಿಲ್ಲೆಗೆ ಯೆಲ್ಲೋ ಅಲರ್ಟ್‌
ವರ್ಗಾವಣೆ ಬಳಿಕ ಪೊಲೀಸರು ವರದಿ ಮಾಡಿಕೊಳ್ಳದಿದ್ದರೆ ಸಂಬಳ ಕಟ್‌ : ವೈದ್ಯಕೀಯ ರಜೆಗೆ ಬ್ರೇಕ್