ಕನ್ನಡಪ್ರಭ ವಾರ್ತೆ ಚಾಮರಾಜನಗರ
ನಗರದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟ, ಗಡಿ ಕಟ್ಟೆ ಯಜಮಾನರುಗಳ ಹಾಗೂ ಆದಿ ಕರ್ನಾಟಕ ಅಭಿವೃದ್ಧಿ ಸಂಘದ ಆಸ್ತಿ ಸಂರಕ್ಷಣಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ನ್ಯಾ.ನಾಗಮೋಹನ ದಾಸ್ ರವರ ಒಳಮೀಸಲಾತಿ ವರದಿಯ ಸಾಧಕ - ಬಾಧಕಗಳ ಕುರಿತು ಆಯೋಜಿಸಿದ್ದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಕ್ತಿ ತುಂಬಿದ್ದೇ ಬಲಗೈ ಸಮುದಾಯ ಎಂಬುದನ್ನು ಅವರು ಮರೆತಿಲ್ಲ. ಚಾಮುಂಡೇಶ್ವರಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲ್ಲಲು ಬಲಗೈ ಸಮುದಾಯ ಕಾರಣ. ಇಲ್ಲದಿದ್ದರೆ ರಾಜಕೀಯ ಭವಿಷ್ಯವೇ ಮಾಸಿ ಹೋಗುತ್ತಿತ್ತು. ಅಂದು ಶ್ರೀನಿವಾಸ್ ಪ್ರಸಾದ್ ನಾಯಕತ್ವದಲ್ಲಿ ನಡೆದ ಚುನಾವಣೆಯನ್ನು ಅವರು ನೆನಪು ಮಾಡಿಕೊಳ್ಳಬೇಕು. ಈಗಾಗಲೇ ಸಿದ್ದರಾಮಯ್ಯ ಪೆನ್ನು ಸ್ವಲ್ಪ ಹಿಂದೆ ಸರಿಸಿದೆ. ಮಾ. ೨೫ರಂದು ಫ್ರೀಡಂ ಪಾರ್ಕ್‌ನಲ್ಲಿ ನಡೆಯುವ ನಮ್ಮ ಬಲಗೈ ಸಮುದಾಯದ ಶಕ್ತಿ ಪ್ರದರ್ಶನವು ಮತ್ತೊಂದು ಎಚ್ಚರಿಕೆ ಗಂಟೆಯಾಗಬೇಕು ಎಂದು ತಿಳಿಸಿದರು.ಅಲ್ಲದೇ ವಿಶೇಷ ಸಂಪುಟ ಸಭೆಯಲ್ಲಿ ಸಿದ್ದರಾಮಯ್ಯ ಮತ್ತು ಅವರ ನೇತೃತ್ವದ ಸಚಿವರು ತೆಗೆದುಕೊಳ್ಳುವ ತೀರ್ಮಾನದಲ್ಲಿ ನಿಮ್ಮ ಸರ್ಕಾರ ಉಳಿಯಲಿದೆ ಎಂದು ಈಗಾಗಲೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹೇಳಿದ್ದೇನೆ. ಇಷ್ಟಾಗಿಯೂ ಒಳ ಮೀಸಲಾತಿ ವಿಚಾರದಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯವಾಗುವುದಕ್ಕೆ ಬಿಡುವುದಿಲ್ಲ. ಮೀಸಲಾತಿ ವಿಚಾರದಲ್ಲಿ ಬಲಗೈ ಮತ್ತು ಎಡಗೈ ಭಿನ್ನ ಮಾಡಿ, ನಮ್ಮಲ್ಲಿಯೇ ವೈಮನಸ್ಸು ಉಂಟು ಮಾಡುವ ಕುತಂತ್ರ ನಡೆದಿದೆ. ಇದನ್ನು ಭೇದಿಸುವ ಶಕ್ತಿ ನಮ್ಮಲ್ಲಿದೆ. ನಾವು ಅಂಬೇಡ್ಕರ್, ಬುದ್ದನ ಅನುಯಾಯಿಗಳು. ಹೀಗಾಗಿ ನಮ್ಮ ಹೋರಾಟ ನಿರಂತರವಾಗಿರಲಿ ಎಂದರು.
ಕೇಂದ್ರ ಸರ್ಕಾರ ನರೇಗಾವನ್ನು ಬದಲಾಯಿಸಿದ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಅವರು ವಿಶೇಷ ಅಧಿವೇಶ ಕರೆದಿದ್ದು. ಇದರ ಪರ ಹಾಗೂ ವಿರೋಧ ಚರ್ಚೆ ನಡೆಯುತ್ತಿತ್ತು. ಈ ಮಧ್ಯೆಯೇ ಒಳ ಮೀಸಲಾತಿಯನ್ನು ನೀಡುವ ಬಿಲ್ ಅನ್ನು ಈ ಸಭೆಯಲ್ಲಿ ಮಂಡಿಸಿ ಒಪ್ಪಿಗೆ ಪಡೆದುಕೊಳ್ಳುವ ಹುನ್ನಾರವನ್ನು ಸರ್ಕಾರ ಹಾಗೂ ವಿರೋಧ ಪಕ್ಷಗಳಲ್ಲಿರುವವರು ಮಾಡಿದರು. ಇದರ ಫಲವಾಗಿ ಈ ಬಿಲ್‌ಗೆ ಚರ್ಚೆ ಇಲ್ಲದೇ ಪಾಸ್ ಆಯಿತು. ಎಲ್ಲದಕ್ಕೂ ವಿರೋಧ ವ್ಯಕ್ತಪಡಿಸುತ್ತಿದ್ದ ವಿರೋಧ ಪಕ್ಷದವರು ಒಳ ಮೀಸಲಾತಿ ವಿಚಾರದಲ್ಲಿ ನಮ್ಮ ಸಮುದಾಯದ ಪರವಾಗಿ ಇರಲಿಲ್ಲ. ಇದೊಂದು ಪಿತೂರಿ ಮತ್ತು ಹುನ್ನಾರವಾಗಿದೆ. ಹೀಗಾಗಿ ಬಲಗೈ ಸಮುದಾಯದವರಿಗೆ ಇದು ಎಚ್ಚರಿಕೆಯಾಗಿದೆ. ಇನ್ನಾದರೂ ಯಾರು ನಮ್ಮ ಪರ ಧ್ವನಿಯಾಗುತ್ತಾರೆ ಎಂಬುದನ್ನು ಅರ್ಥೈಯಿಸಿಕೊಳ್ಳಬೇಕು ಎಂದು ಕೃಷ್ಣಮೂರ್ತಿ ತಿಳಿಸಿದರು.
ಸಭೆಯಲ್ಲಿ ಅಂಬೇಡ್ಕರ್ ವಿಚಾರವಾದಿ ಡಾ.ಪಿ.ದೇವರಾಜು ಮಾತನಾಡಿದರು. ಛಲವಾದಿ ಗುರುಪೀಠ ಶ್ರೀ ಬಸವರಾಜ ಸ್ವಾಮೀಜಿ, ನಗರಸಭಾ ಮಾಜಿ ಸದಸ್ಯ ಅರ್.ಪಿ.ನಂಜುಂಡಸ್ವಾಮಿ ಪ್ರಾಸ್ತಾವಿಕ ಮಾತನಾಡಿದರು. ತಾಪಂ ಮಾಜಿ ಅಧ್ಯಕ್ಷ ಆರ್.ಮಹದೇವ್ ಸ್ವಾಗತಿಸಿದರು.