ಸರ್ಕಾರ ಶಿಕ್ಷಣ, ಪೌಷ್ಟಿಕ ಆಹಾರ ಸೌಲಭ್ಯಕ್ಕೂ ನೀಡಿದೆ ಆದ್ಯತೆ: ಶಾಸಕ ಜಿ.ಎಚ್.ಶ್ರೀನಿವಾಸ್

KannadaprabhaNewsNetwork |  
Published : Dec 03, 2025, 01:04 AM IST
ತಾಲೂಕು ಮಟ್ಟದ ಪ್ರಾಥಮಿಕ ಹಾಗೂ  ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ | Kannada Prabha

ಸಾರಾಂಶ

ತರೀಕೆರೆಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ, ಉಚಿತ ಪುಸ್ತಕ, ಶೂ ಸಾಕ್ಸ್ ಸೇರಿ ಇನ್ನಿತರ ಸೌಲಭ್ಯ ಕಲ್ಪಿಸಿದೆ. ಮುಂದಿನ ಸಾಲಿನಿಂದ ಉಚಿತ ನೋಟ್ ಪುಸ್ತಕ ವಿತರಿಸಲು ಎಲ್ಲಾ ತಯಾರಿ ನಡೆದಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

- ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ

ಕನ್ನಡಪ್ರಭ ವಾರ್ತೆ ತರೀಕೆರೆ

ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ, ಉಚಿತ ಪುಸ್ತಕ, ಶೂ ಸಾಕ್ಸ್ ಸೇರಿ ಇನ್ನಿತರ ಸೌಲಭ್ಯ ಕಲ್ಪಿಸಿದೆ. ಮುಂದಿನ ಸಾಲಿನಿಂದ ಉಚಿತ ನೋಟ್ ಪುಸ್ತಕ ವಿತರಿಸಲು ಎಲ್ಲಾ ತಯಾರಿ ನಡೆದಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.ಲಕ್ಕವಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ತಾಲೂಕು ಆಡಳಿತ, ತಾಪಂ, ಗ್ರಾಪಂ, ಕ್ಷೇತ್ರ ಶಿಕ್ಷಣಾ ಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಉದ್ಘಾಟಿಸಿ ಮಾತನಾಡಿದರು.ಶಿಕ್ಷಕರು ಗುಣಮಟ್ಟದ ಶಿಕ್ಷಣ ಮಕ್ಕಳಿಗೆ ನೀಡುವ ಜೊತೆ ಅವರಲ್ಲಿರುವ ಕಲೆ, ಸಾಹಿತ್ಯ ಇನ್ನಿತರ ಚಟುವಟಿಕೆ ಗಮನಿಸಿ, ಕೌಶಲ ಅಭಿವೃದ್ಧಿ ಕುರಿತು ಅರಿವು ಸಹ ಮೂಡಿಸಬೇಕು. ರಾಜ್ಯದ ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಬೇಡಿಕೆ ಅನುಸಾರ ತರೀಕೆರೆಯಲ್ಲಿ ಐಟಿಐ ಹೊಸ ಕಾಲೇಜು, ಅಜ್ಜಂಪುರ ತಾಲೂಕಿನ ತಡಗ ಗ್ರಾಮದ ಐಟಿಐ ಕಾಲೇಜಿಗೆ ಕಟ್ಟಡ ನಿರ್ಮಿಸಿಕೊಟ್ಟಿದೆ ಎಂದು ಹೇಳಿದರು.ಕೆಲವರಿಂದ ಒತ್ತುವರಿಯಾದ ಲಕ್ಕವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ 13.5 ಎಕರೆ ಜಾಗ ಶಾಲೆ ಹೆಸರಿಗೆ ಮಾಡಿ ಸಲು ಕ್ರಮವಹಿಸಲಾಗುವುದು, ಒತ್ತುವರಿ ಜಾಗ ತೆರವುಗೊಳಿಸಿದ ಕೂಡಲೇ ಶಾಲೆಗೆ ಆದಾಯ ತಂದುಕೊಳ್ಳುವಂತೆ ಅಡಕೆ ತೋಟ ನಿರ್ಮಿಸಲು ಬೋರ್‌ವೆಲ್ ಕೊರೆಸಿಕೊಡಲಾಗುವುದು ಎಂದು ಹೇಳಿದರು.ಅಜ್ಜಂಪುರ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಿಜಯಕುಮಾರ್ ಮಾತನಾಡಿ, ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಸರಿ ಸಮಾನವಾಗಿ ಪ್ರಗತಿ ಕಂಡಿದೆ. ಶಿಕ್ಷಕರು ಮಕ್ಕಳಲ್ಲಿ ಅಡಗಿರುವ ವಿವಿಧ ಕೌಶಲ ಹೊರತೆಗೆಯ ಬೇಕು. ಮಕ್ಕಳು ಸಮಾಜದಲ್ಲಿ ತೊಡಗಿಕೊಳ್ಳಲು ಬೇಕಾದ ಶಿಕ್ಷಣ ನೀಡಬೇಕು ಎಂದು ಹೇಳಿದರು.ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಅನಂತಪ್ಪ ಮಾತನಾಡಿ, ಜ್ಯೋತಿ ಸಂಜೀವಿನಿ ಯೋಜನೆ ಸರಿ ಯಾಗಿ ಅನುಷ್ಟಾನವಾಗದ ಕಾರಣ ವೈದ್ಯಕೀಯ ಮರು ವೆಚ್ಚ ಪಾವತಿಗೆ ಸಹಕರಿಸಬೇಕು ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಗೆ ಮನವಿ ಮಾಡಿದರು.ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಅಬ್ದುಲ್ ರೆಹಮಾನ್, ಉಪಾಧ್ಯಕ್ಷೆ ಭವಾನಿ, ಮಾಜಿ ಅಧ್ಯಕ್ಷ ಹೇಮಣ್ಣ, ಕ್ಷೇತ್ರ ಶಿಕ್ಷಣಾಧಿ ಕಾರಿ ಪರಶುರಾಮಪ್ಪ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಧರಣೇಶ್, ಪ್ರಧಾನ ಕಾರ್ಯದರ್ಶಿ ಆನಂದ ಕುಮಾರ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ವೆಂಕಟೇಶ್ ಭಾಗವಹಿಸಿದ್ದರು.-

2ಕೆಟಿಆರ್.ಕೆ.6ಃ

ತಾಲೂಕಿನ ಲಕ್ಕವಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವವನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣಕ್ಕೆ ಸಿದ್ಧಗಂಗಾ ಮಠದ ಕೊಡುಗೆ ಅನನ್ಯ
ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರ ಹಿತ ಕಾಪಾಡಿ