ಭಾಗ್ಯಲಕ್ಷ್ಮೀ ಯೋಜನೆ ನಿಲ್ಲಿಸಿ ಸರ್ಕಾರ ಅನ್ಯಾಯ ಮಾಡಿದೆ: ಬಿ.ವೈ. ವಿಜಯೇಂದ್ರ

KannadaprabhaNewsNetwork |  
Published : Jun 04, 2025, 01:03 AM IST
ಪೊಟೊ-3ಕೆಎನ್‌ಎಲ್‌ಎಮ್‌1-ನೆಲಮಂಗಲ ನಗರದ ಶ್ರೀ ಜಯದೇವ ನಗರ ಭವನ ಬಿಜೆಪಿ ಹಮ್ಮಿಕೊಂಡಿದ್ದ ಗ್ರಾಮಾಂತರಜಿಲ್ಲಾ ಮಟ್ಟದ ಅಹಲ್ಯಾಬಾಯಿ ಹೋಳ್ಕರ್‌ 300ನೇ ಜನ್ಮದಿನಾಚರಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಉದ್ಘಾಟಿಸಿದರು. | Kannada Prabha

ಸಾರಾಂಶ

36 ಲಕ್ಷಕ್ಕೂ ಹೆಚ್ಚು ಹೆಣ್ಣು ಮಕ್ಕಳು ಯೋಜನೆಯ ಪ್ರಯೋಜನ ಪಡೆದಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಈ ಯೋಜನೆಯನ್ನು ನಿಲ್ಲಿಸಿ ಹೆಣ್ಣುಮಕ್ಕಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.

ಕನ್ನಡಪ್ರಭ ವಾರ್ತೆ ನೆಲಮಂಗಲ

ಬಡ ಕುಟುಂಬಗಳಲ್ಲಿ ಹೆಣ್ಣುಮಕ್ಕಳು ಹುಟ್ಟುವುದೇ ಶಾಪ ಎನ್ನುತ್ತಿದ್ದ ಕಾಲದಲ್ಲಿ ಯಡಿಯೂರಪ್ಪ ಸರ್ಕಾರ ಭಾಗ್ಯಲಕ್ಷ್ಮೀ ಯೋಜನೆ ನೀಡುವುದರ ಮೂಲಕ ವರವನ್ನಾಗಿ ಪರಿಣಮಿಸಿದರು. 36 ಲಕ್ಷಕ್ಕೂ ಹೆಚ್ಚು ಹೆಣ್ಣು ಮಕ್ಕಳು ಯೋಜನೆಯ ಪ್ರಯೋಜನ ಪಡೆದಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಈ ಯೋಜನೆಯನ್ನು ನಿಲ್ಲಿಸಿ ಹೆಣ್ಣುಮಕ್ಕಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.

ನಗರದ ಶ್ರೀ ಜಯದೇವ ನಗರ ಭವನ ಬಿಜೆಪಿ ಹಮ್ಮಿಕೊಂಡಿದ್ದ ಗ್ರಾಮಾಂತರ ಜಿಲ್ಲಾ ಮಟ್ಟದ ಅಹಲ್ಯಾಬಾಯಿ ಹೋಳ್ಕರ್‌ 300ನೇ ಜನ್ಮದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಅಹಲ್ಯಬಾಯಿ ಅವರು ಸಣ್ಣ ವಯಸ್ಸಿನಲ್ಲೇ ಪತಿಯನ್ನು ಕಳೆದುಕೊಂಡು ಧೃತಿಗೆಡದೆ ಸೈನ್ಯ ಕಟ್ಟಿ, ಹಿಂದು ದೇವಾಲಯಗಳನ್ನು ರಕ್ಷಿಸಿ ಔರಂಗಜೇಬನನ್ನು ಹಿಮ್ಮೆಟ್ಟಿಸಿದ್ದಳು. ಹಿಂದು ಹೆಣ್ಣುಮಕ್ಕಳಿಗೆ ಹಿಂದು ಕಾರ್ಯಕರ್ತರಿಗೆ ರಕ್ಷಣೆ ಇಲ್ಲದಂತಹ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೊಗೆಯಲು ಪ್ರತಿಯೊಬ್ಬ ಹೆಣ್ಣುಮಕ್ಕಳು ಪಣತೊಡಬೇಕು, ಆದ್ದರಿಂದಲೇ ಇದನ್ನು ಮಹಿಳಾ ಸಮಾವೇಶದ ರೀತಿಯಲ್ಲಿ ದೇಶಾದ್ಯಂತ ಆಚರಿಸಲಾಗುತ್ತಿದೆ ಎಂದರು.

ಮಂಗಳೂರಿನಲ್ಲಿ ಪೊಲೀಸರ ಮೂಲಕ ಹಿಂದುಗಳನ್ನು ಬೆದರಿಸಿ ದುಂಡಾವರ್ತನೆ ತೋರುತ್ತಿದೆ, ಕೇಸ್‌ಗಳನ್ನು ದಾಖಲಿಸುತ್ತಿದೆ, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದೆ ಎಂದರು. ತಮಿಳಿನಿಂದ ಕನ್ನಡ ಹುಟ್ಟಿದೆ ಎನ್ನುವ ತಮಿಳು ನಟ ಕಮಲಹಾಸನ್‌ ಉಚ್ಚನ್ಯಾಯಾಲಯದ ನಿರ್ದೇಶನದಂತೆ ಕೂಡಲೆ ಕ್ಷಮೆ ಯಾಚಿಸಬೇಕು ಎಂದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಅಹಲ್ಯಾಬಾಯಿ ಹೋಳ್ಕರ್‌ ಅವರ ಭಾವಚಿತ್ರವನ್ನು ಪ್ರವಾಸಿ ಮಂದಿರದಿಂದ ಜಯದೇವ ಭವನದ ವರೆಗೆ ಮೆರವಣಿಗೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ವಿಜಯೇಂದ್ರ ಅವರಿಗೆ ಕ್ರೇನ್‌ ಮೂಲಕ ಬೃಹತ್‌ ಹಾರ ಹಾಕಿ ಸ್ವಾಗತಿಸಲಾಯಿತು. ಕಾಂಗ್ರೆಸ್‌ ಯುವಮುಖಂಡ ಅರುಣ್‌ಕಮಾರ್‌ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು.

ದೊಡ್ಡಬಳ್ಳಾಪುರ ಶಾಸಕ ಧೀರಜ್‌ ಮುನಿರಾಜು ಬಿಜೆಪಿ ಮುಖಂಡ ಸಪ್ತಗಿರಿ ಶಂಕರ್‌ ನಾಯಕ್ ಮಾಜಿ ಶಾಸಕ ಎಂ.ವಿ.ನಾಗರಾಜು ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ, ತಾಲ್ಲೂಕು ಅಧ್ಯಕ್ಷ ಜಗದೀಶ್‌ ಚೌಧರಿ, ಮುಖಂಡ ಎಸ್‌.ಮಲ್ಲಯ್ಯ, ರಾಜ್ಯ ವಕ್ತಾರ ವೆಂಕಟೇಶ್‌ ದೊಡ್ಡೇರಿ, ನಗರಸಭೆ ಸದಸ್ಯರಾದ ರಾಮಮೂರ್ತಿ, ಮುನಿರಾಜು ಇದ್ದರು. ಗ್ರಾಮಾಂತರ ಜಿಲ್ಲೆಯ ಎಲ್ಲ ತಾಲ್ಲೂಕುಗಳಿಂದ ಕಾರ್ಯಕರ್ತರು ಆಗಮಿಸಿದ್ದರು.

ಪೊಲೀಸರು ಮುಖಂಡರ ನಡುವೆ ಮಾತಿನ ಚಕಮಕಿ:

ಮೆರವಣಿಗೆಯಲ್ಲಿ ಡಿ.ಜೆ.ಬಳಸುತ್ತಿರುವುದನ್ನು ನಿಲ್ಲಿಸುವಂತೆ ಪೊಲೀಸರು ತಡೆಯಲು ಬಂದಾಗ ಬಿಜೆಪಿ ಮುಖಂಡರು ಹಾಗು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಡಿಜೆ ಬದಲಾಗಿ ಮೈಕ್‌ ಬಳಸುವಂತೆ ಸೂಚಿಸಿದರೂ ಡಿಜೆ ನಿಲ್ಲಿಸದೆ ಮೆರವಣಿಗೆ ನಡೆಯಿತು.

ಪೊಟೊ-3ಕೆಎನ್‌ಎಲ್‌ಎಮ್‌1-ನೆಲಮಂಗಲ ನಗರದ ಶ್ರೀ ಜಯದೇವ ನಗರ ಭವನ ಬಿಜೆಪಿ ಹಮ್ಮಿಕೊಂಡಿದ್ದ ಗ್ರಾಮಾಂತರಜಿಲ್ಲಾ ಮಟ್ಟದ ಅಹಲ್ಯಾಬಾಯಿ ಹೋಳ್ಕರ್‌ 300ನೇ ಜನ್ಮದಿನಾಚರಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ