ಶಿಕ್ಷಕರ ತರಬೇತಿ ಕಾರ್ಯಕ್ರಮದಲ್ಲಿ ಟಿ.ಎಂ.ಕುಮಾರ್ ಹೇಳಿಕೆಕನ್ನಡಪ್ರಭ ವಾರ್ತೆ ಚಳ್ಳಕೆರೆ:
ರಾಜ್ಯದ ಶಿಕ್ಷಣ ಇಲಾಖೆಗೆ ಕಾಯಕಲ್ಪ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ. ಶಿಕ್ಷಣ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಯಾವುದೇ ರೀತಿಯ ಪ್ರಾಮಾಣಿಕ ಪ್ರಯತ್ನ ನಡೆಯುತ್ತಿಲ್ಲ. ಸರ್ಕಾರ ಶಿಕ್ಷಣ ಇಲಾಖೆಯ ಮುನ್ನಡೆಗೆ ಅವಶ್ಯವಿರುವ ಯೋಜನೆ ರೂಪಿಸಿಲ್ಲ, ಶಿಕ್ಷಣ ಇಲಾಖೆಯ ದೂರುದೃಷ್ಠಿಯ ಕೊರತೆಯಿಂದ ಸರ್ಕಾರಿ ಶಾಲೆಗಳು ವಿನಾಶದತ್ತ ಹೆಜ್ಜೆ ಹಾಕಿವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯಮಂಡಳಿ ನಿವೃತ್ತ ನಿರ್ದೇಶಕ ಟಿ.ಎಂ.ಕುಮಾರ್ ತಿಳಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆ ಹಾಗೂ ಆಡಳಿತಾತ್ಮಕ ವೃತ್ತಿಕ್ಷಮತೆ ವೃದ್ಧಿ ಕುರಿತು ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರ ಶಾಲೆಗಳು ವಿದ್ಯಾರ್ಥಿಗಳ ದಾಖಲಾತಿ ಕೊರತೆಯಿಂದ ಡೋಲಾಯಮಯವಾಗಿವೆ. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕ್ಷೀಣಿಸುತ್ತಿದೆ. ರಾಜ್ಯದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಪ್ರಾಥಮಿಕ ಶಾಲೆಗಳಿದ್ದು ಆ ಪೈಕಿ 30 ವಿದ್ಯಾರ್ಥಿಗಳ ಇರುವ ಶಾಲೆಗಳು 14 ಸಾವಿರ, 10 ಕ್ಕಿಂತ ಕಡಿಮೆ ಇರುವ ಶಾಲೆಗಳ ಸಂಖ್ಯೆ 4 ಸಾವಿರ ಹೆಚ್ಚು ಎಂದರು.ನಿವೃತ್ತ ಉಪ ನಿರ್ದೇಶಕ ಕೆ.ವಿ.ವೆಂಕಟಚಲಪತಿ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಶ್ರಮಪಟ್ಟು ಓದಿ ಪರೀಕ್ಷೆ ಬರೆಯಬೇಕಿದೆ. ಆದರೆ, ಪರೀಕ್ಷಾ ಕೇಂದ್ರಗಳಲ್ಲಿ ನಿರೀಕ್ಷೆಗೂ ಮೀರಿ ಹೆಚ್ಚು ವಿದ್ಯಾರ್ಥಿಗಳು ಕಾಫಿಹೊಡೆಯುವುದರಲ್ಲಿ ಆಸಕ್ತರಾಗಿರುತ್ತಾರೆ. ಇದರಿಂದ ಶೈಕ್ಷಣಿಕ ಮಟ್ಟ ಕುಸಿಯುತ್ತದೆ ಎಂದು ಹೇಳಿದರು.
ನಿವೃತ್ತ ಸಹ ನಿರ್ದೇಶಕ ಎಂ.ರೇವಣಸಿದ್ದಪ್ಪ, ನಿವೃತ್ತ ವಿಷಯ ಪರಿವೀಕ್ಷಕ ಎಚ್.ಆರ್.ಬಸವರಾಜಯ್ಯ, ಬಿಇಒ ಕೆ.ಎಸ್.ಸುರೇಶ್, ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅದ್ಯಕ್ಷ ಡಿ.ಟಿ.ಶ್ರೀನಿವಾಸನ್, ಕಾರ್ಯದರ್ಶಿ ಡಿ.ಎಸ್.ಪಾಲಯ್ಯ, ಶಿಕ್ಷಣ ಸಂಯೋಜಕ ಜೆ.ತಿಪ್ಪೇಸ್ವಾಮಿ ಮುಂತಾದವರು .