ಗ್ಯಾರಂಟಿ ಯೋಜನೆ ಜಾರಿಗೊಳಿಸಿ ಕೊಟ್ಟ ಮಾತಿನಂತೆ ನಡೆದುಕೊಂಡ ಸರ್ಕಾರ

KannadaprabhaNewsNetwork |  
Published : Mar 08, 2024, 01:48 AM IST
ವಿಧಾನ ಪರಿಷತ್‌ ಸದಸ್ಯ ಹರೀಶ್‌ ಕುಮಾರ್‌ ಉದ್ಘಾಟಿಸುತ್ತಿರುವುದು | Kannada Prabha

ಸಾರಾಂಶ

ಚುನಾವಣೆ ಸಂದರ್ಭ ಐದು ಗ್ಯಾರಂಟಿಯನ್ನು ಕಾಂಗ್ರೆಸ್‌ ನೀಡಿತ್ತು. ಅಧಿಕಾರಕ್ಕೆ ಬಂದ ಮೂರು ತಿಂಗಳಲ್ಲೇ ನಾಲ್ಕು ಗ್ಯಾರಂಟಿಯನ್ನು ಅನುಷ್ಠಾನಗಳಿಸಿದೆ. ಅದೇ ರೀತಿ ಐದನೇ ಯೋಜನೆಯಾದ ಯುವನಿಧಿಯೂ ಈಗ ಅನುಷ್ಠಾನವಾಗಿದ್ದು, ಸರ್ಕಾರ ತನ್ನ ಮಾತು ಉಳಿಸಿಕೊಂಡಿದೆ. ಮುಖ್ಯಮಂತ್ರಿ ನುಡಿದಂತೆ ನಡೆದಿದ್ದಾರೆ ಎಂದು ಹರೀಶ್‌ ಕುಮಾರ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಮಂಗಳೂರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ 8 ತಿಂಗಳಲ್ಲಿಯೇ ಎಲ್ಲ ಗ್ಯಾರಂಟಿ ಯೋಜನೆಯನ್ನು ಅನುಷ್ಠಾನಗೊಳಿಸಿ ಕೊಟ್ಟ ಮಾತಿನಂತೆ ನಡೆದುಕೊಂಡಿದೆ ಎಂದು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಹೇಳಿದರು.ದ.ಕ.ಜಿಲ್ಲಾ ಆಡಳಿತ ಹಾಗೂ ಮಂಗಳೂರು ತಾಲೂಕು ಆಡಳಿತದಿಂದ ಗುರುವಾರ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಆಯೋಜಿಸಿದ್ದ ಮಂಗಳೂರು ತಾಲೂಕು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.ಚುನಾವಣೆ ಸಂದರ್ಭ ಐದು ಗ್ಯಾರಂಟಿಯನ್ನು ಕಾಂಗ್ರೆಸ್‌ ನೀಡಿತ್ತು. ಅಧಿಕಾರಕ್ಕೆ ಬಂದ ಮೂರು ತಿಂಗಳಲ್ಲೇ ನಾಲ್ಕು ಗ್ಯಾರಂಟಿಯನ್ನು ಅನುಷ್ಠಾನಗಳಿಸಿದೆ. ಅದೇ ರೀತಿ ಐದನೇ ಯೋಜನೆಯಾದ ಯುವನಿಧಿಯೂ ಈಗ ಅನುಷ್ಠಾನವಾಗಿದ್ದು, ಸರ್ಕಾರ ತನ್ನ ಮಾತು ಉಳಿಸಿಕೊಂಡಿದೆ. ಮುಖ್ಯಮಂತ್ರಿ ನುಡಿದಂತೆ ನಡೆದಿದ್ದಾರೆ ಎಂದರು.ಶಕ್ತಿ ಯೋಜನೆಯಿಂದಾಗಿ ರಾಜ್ಯದ ಎಲ್ಲ ವರ್ಗದ ಜನತೆಗೆ ಪ್ರಯೋಜನವಾಗಿದೆ. ಮಹಿಳೆಯರು ಹರ್ಷದಿಂದ ಸರ್ಕಾರಿ ಬಸ್ ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯಿಂದ ಕೋಟ್ಯಂತರ ಮಹಿಳೆಯರಿಗೆ ಲಾಭವಾಗಿದೆ. ಗೃಹ ಜ್ಯೋತಿ ಯೋಜನೆ ಕೂಡ ಯಶಸ್ವಿಯಾಗಿದ್ದು, ಜನತೆ ನೆಮ್ಮದಿಯ ಬದುಕು ಕಾಣುವಂತಾಗಿದೆ ಎಂದು ಹರೀಶ್ ಕುಮಾರ್ ಯೋಜನೆಗಳ ವಿವರ ನೀಡಿದರು.ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಮೆಸ್ಕಾಂ ಎಂಡಿ ಪದ್ಮಾವತಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ್, ಗೇರು ಅಭಿವೃದ್ಧಿ ನಿಗಮದ ಅದ್ಯಕ್ಷೆ ಮಮತಾ ಗಟ್ಟಿ, ಮುಡಾ ಅಧ್ಯಕ್ಷ‌ ಸದಾಶಿವ ಉಳ್ಳಾಲ, ಕಾರ್ಪೋರೇಟರ್‌ಗಳಾದ ಶಶಿಧರ ಹೆಗ್ಡೆ, ಎ.ಸಿ.ವಿನಯರಾಜ್, ಅನಿಲ್ ಕುಮಾರ್ , ಭಾಸ್ಕರ ಮೊಯಿಲಿ ಮತ್ತಿತರರು ಇದ್ದರು.ತಾ.ಪಂ. ಕಾರ್ಯ ನಿರ್ವಾಹಕ ಅಧಿಕಾರಿ ಮಹೇಶ್ ಕುಮಾರ್ ಪ್ರಸ್ತಾವಿಕ ಮಾತನಾಡಿ, ಮಂಗಳೂರು ತಾಲೂಕಿನಲ್ಲಿ 3,524 ಮಂದಿ ಅಂತ್ಯೋದಯ ಪಡಿತರ ಚೀಟಿಯ ಲಾಭ ಪಡೆಯುತ್ತಿದ್ದಾರೆ. ಆದ್ಯತಾ ಪಡಿತರ ಚೀಟಿ 42,642 ಮಂದಿ ಪಡಿತರ ಚೀಟಿಗಳನ್ನು ಹೊಂದಿದವರಿದ್ದಾರೆ. ತಾಲೂಕಿನಲ್ಲಿ ಗೃಹ ಲಕ್ಷ್ಮಿ ಯೋಜನೆಯಡಿಯಲ್ಲಿ 77,573 ಮಂದಿಗೆ ತಲುಪಿದೆ. 1, 41,873 ಮನೆಗಳಿಗೆ ಗೃಹ ಜ್ಯೋತಿ ತಲುಪಿದೆ ಎಂದರು.

ಇದೇ ಸಂದರ್ಭ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ತಮ್ಮ ಅನಿಸಿಕೆ ಹಂಚಿಕೊಂಡರು. ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ ಸ್ವಾಗತಿಸಿದರು.

-------------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಲ್‌ ಟಿಕೆಟ್‌ ಸಿಗದೆ 25 ವಿದ್ಯಾರ್ಥಿಗಳು ಪರೀಕ್ಷೆ ವಂಚಿತ
ನೈತಿಕ ಮೌಲ್ಯ ಕಾಪಾಡಿದ ಅವಿಭಕ್ತ ಕುಟುಂಬಗಳು