ನೌಕರರ ಬೇಡಿಕೆ ಈಡೇರಿಕೆಗೆ ಸರ್ಕಾರ ಬದ್ಧ

KannadaprabhaNewsNetwork |  
Published : Jan 23, 2024, 01:50 AM IST
೨೨ಕೆಎಲ್‌ಆರ್-೧ಕೋಲಾರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುರೇಶ್‌ಬಾಬು ನೇತೃತ್ವದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್‌ರನ್ನು ಭೇಟಿ ಮಾಡಿ ನೌಕರರ ಬೇಡಿಕೆಗಳ ಈಡೇರಿಕೆಗೆ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಸರ್ಕಾರಿ ನೌಕರರ ಅತಿ ಪ್ರಮುಖ ಬೇಡಿಕೆಗಳಾದ ೭ನೇ ವೇತನ ಆಯೋಗದ ವರದಿ ಅನುಷ್ಠಾನ, ಹಳೆ ಪಿಂಚಣಿ ಜಾರಿ ಪರಿಶೀಲನೆಯಲ್ಲಿದ್ದು, ಉಳಿದಂತೆ ನಗದು ರಹಿತ ಚಿಕಿತ್ಸೆ ಆರೋಗ್ಯ ಸಂಜೀವಿನಿ ತಕ್ಷಣ ಜಾರಿಗೆ ಸರ್ಕಾರ ಬದ್ದವಾಗಿದೆ

ಕನ್ನಡಪ್ರಭ ವಾರ್ತೆ ಕೋಲಾರ

ಸರ್ಕಾರಿ ನೌಕರರ ಬೇಡಿಕೆಗಳ ಈಡೇರಿಕೆ ಸಂಬಂಧ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಸುರೇಶ್‌ಬಾಬು ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ನೀಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ತಕ್ಷಣ ಆರೋಗ್ಯ ಇಲಾಖೆ ಆಯುಕ್ತ ತ್ರಿಲೋಕ್ ಚಂದ್ರರಿಗೆ ದೂರವಾಣಿ ಕರೆ ಮಾಡಿ ಶೀಘ್ರ ಆರೋಗ್ಯ ಸಂಜೀವಿನಿ ನಗದು ರಹಿತ ಆರೋಗ್ಯ ಸೇವೆ ಜಾರಿಗಾಗಿ ಮುಖ್ಯಮಂತ್ರಿಗಳಿಗೆ ಕಡತ ಮಂಡಿಸುವಂತೆ ಸೂಚಿಸಿದರು.

ಮನವಿ ಸ್ವೀಕರಿಸಿ ಮಾತನಾಡಿ, ಸರ್ಕಾರಿ ನೌಕರರ ಅತಿ ಪ್ರಮುಖ ಬೇಡಿಕೆಗಳಾದ ೭ನೇ ವೇತನ ಆಯೋಗದ ವರದಿ ಅನುಷ್ಠಾನ, ಹಳೆ ಪಿಂಚಣಿ ಜಾರಿ ಪರಿಶೀಲನೆಯಲ್ಲಿದ್ದು, ಉಳಿದಂತೆ ನಗದು ರಹಿತ ಚಿಕಿತ್ಸೆ ಆರೋಗ್ಯ ಸಂಜೀವಿನಿ ತಕ್ಷಣ ಜಾರಿಗೆ ಸರ್ಕಾರ ಬದ್ದವಾಗಿದೆ ಎಂದು ತಿಳಿಸಿದರು.

7ನೇ ವೇತನ ಆಯೋಗ ವರದಿಗೆ ಅಸ್ತು

೭ನೇ ವೇತನ ಆಯೋಗದ ವರದಿ ಜಾರಿಗೆ ಈಗಾಗಲೇ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದಾರೆ, ನಾನೂ ಸಿಎಂ ಜತೆಗೆ ಮಾತನಾಡುವೆ ಎಂದು ತಿಳಿಸಿ, ನೌಕರರಿಗೆ ನಗದು ರಹಿತ ಆರೋಗ್ಯ ಸೇವೆ ಒದಗಿಸುವ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಸೂಚಿಸಿರುವುದರಿಂದ ಆರೋಗ್ಯ ಇಲಾಖೆ ಆಯುಕ್ತರು ಕೂಡಲೇ ಕಡತ ಮಂಡಿಸಲು ಸೂಚಿಸಿದ್ದಾಗಿ ತಿಳಿಸಿದರು.

ಮನವಿ ಸಲ್ಲಿಸಿ ಮಾತನಾಡಿದ ಸುರೇಶ್‌ಬಾಬು, ನೌಕರರ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಮೇಲೆ ಒತ್ತಡ ತನ್ನಿ ಹಾಗೂ ಬಜೆಟ್‌ನಲ್ಲೇ ನಮ್ಮ ಬೇಡಿಕೆಗಳ ಈಡೇರಿಕೆಗೆ ಮುಖ್ಯಮಂತ್ರಿಗಳಿಗೆ ಒತ್ತಡ ಹಾಕಿ ಸ್ಪಂದಿಸಿ ಎಂದು ಕೋರಿದರು.

ಹಳೆ ಪಿಂಚಣಿ ಯೋಜನೆ ಜಾರಿಯಾಗಲಿ

ಅದರಂತೆ ನಮ್ಮ ಪ್ರಮುಖ ಬೇಡಿಕೆಗಳಾದ ರಾಜ್ಯ ೭ನೇ ವೇತನ ಆಯೋಗದಿಂದ ಶೀಘ್ರ ವರದಿ ಪಡೆದು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳನ್ನು ಪೂರ್ಣ ಪ್ರಮಾಣದಲ್ಲಿ ಪರಿಷ್ಕರಿಸಿ ಆದೇಶ ಹೊರಡಿಸುವುದು, ಹಳೇ ಪಿಂಚಣೆ ಯೋಜನೆಯನ್ನು ಮರು ಜಾರಿಗೊಳಿಸುವುದು ಮತ್ತು ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸಲು ಕೋರಲಾಗಿದ್ದು, ಈಗಾಗಲೇ ಮುಖ್ಯಮಂತ್ರಿಗಳು ಧನಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸರ್ವೇ ಇಲಾಖೆ ರಾಜ್ಯಾಧ್ಯಕ್ಷ ಶ್ರೀಕಂಠ, ಕಾರ್ಯಾಧ್ಯಕ್ಷ ಲೋಕೇಶ್,ವೆಂಕಟರಾವ್ ಇಟಗಿ, ಪದಾಧಿಕಾರಿಗಳಾದ ಚೇತನ್,ರಂಗಸ್ವಾಮಿ, ನೌಕರರ ಸಂಘದ ಕಾರ್ಯಾಧ್ಯಕ್ಷ ಎನ್.ಶ್ರೀನಿವಾಸರೆಡ್ಡಿ, ಶಿಕ್ಷಕ ಗೆಳೆಯರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಸಂಘದ ನಿಕಟಪೂರ್ವ ಅಧ್ಯಕ್ಷ ಕೆ.ಎನ್.ಮಂಜುನಾಥ್, ಶಿಕ್ಷಕ ಮಂಜುನಾಥ್, ಗೆಳೆಯರ ಬಳಗದ ವೆಂಕಟಾಚಲಪತಿಗೌಡ,ಸೋಮಶೇಖರ್, ಸರ್ವೇ ಇಲಾಖೆ ರವಿ ಇದ್ದರು.

PREV

Recommended Stories

ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಖರ್ಗೆ ಕುಟುಂಬದ ವಿರುದ್ಧ ಕೋರ್ಟ್‌ಗೆ ಖಾಸಗಿ ದೂರು