- ಶೇ.80 ಕಮಿಷನ್ ಆರೋಪಕ್ಕೆ ರಾಗಾ, ಸಿಎಂ, ಡಿಸಿಎಂ ಉತ್ತರಿಸಲಿ: ರೇಣುಕಾಚಾರ್ಯ
ಕನ್ನಡಪ್ರಭ ವಾರ್ತೆ ಹೊನ್ನಾಳಿ
ರಾಜ್ಯ ಕಾಂಗ್ರೆಸ್ ಸರ್ಕಾರ ಕೊಟ್ಟ ಭರವಸೆಗಳನ್ನು ಬಂದ್ ಮಾಡಲು ಬಿಪಿಎಲ್ ಪಡಿತರ ಕಾರ್ಡ್‌ಗಳನ್ನು ಏಕಾಎಕಿಯಾಗಿ ರದ್ದುಪಡಿಸುವ ಮೂಲಕ ಬಡವರ ಮೇಲೆ ಗದಾಪ್ರಹಾರ ಮಾಡಲು ಹೊರಟಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದರು.ಮಂಗಳವಾರ ಹೊನ್ನಾಳಿಯ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆಯರು ಧರ್ಮಸ್ಥಳ ಸ್ವಸಹಾಯ ಸಂಘಗಳಲ್ಲಿ ಕೆಲಸ ಮಾಡುತ್ತಿದ್ದು, ತಿಂಗಳಿಗೆ ಗೌರವಧನ ಕೇವಲ ₹300, ವರ್ಷಕ್ಕೆ ₹3600 ಬರುತ್ತಿದೆ. ಕೇಂದ್ರ ಸರ್ಕಾರದಿಂದ 5 ಕೆ.ಜಿ., ರಾಜ್ಯ ಸರ್ಕಾರದಿಂದ ಈ ಮೊದಲು ಅಕ್ಕಿಯ ಹಣ ಕೊಟ್ಟು, ಇದೀಗ ಅಕ್ಕಿ ನೀಡಲಾಗುತ್ತಿದೆ. ಹೀಗಿರುವಾಗ ಬಿಪಿಲ್ ಕಾರ್ಡ್‌ಗಳ ರದ್ದು ಮಾಡಲಾಗುತ್ತಿದೆ. ಈ ಬಗ್ಗೆ ಹಲವಾರು ಫಲಾನುಭವಿಗಳು ಅಳಲು ತೋಡಿಕೊಂಡಿದ್ದಾರೆ ಎಂದರು.
ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ (ಎನ್.ಆರ್. ಎಂ,ಎಲ್.) ಇಲಾಖೆಯಡಿಯಲ್ಲಿ ಕರ್ನಾಟಕಕ್ಕೆ 2018ರಿಂದ 62.72 ಕೋಟಿ ಬಿಡುಗಡೆಯಾಗಿದೆ. ಈ ಪೈಕಿ ದಾವಣಗೆರೆ ಜಿಲ್ಲೆಯಲ್ಲಿ 10 ಸಾವಿರ ಸಂಜೀವಿನಿ ಸ್ವಸಹಾಯ ಗುಂಪುಗಳಿವೆ. ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡವರಿಗೆ ಬಿಜೆಪಿ ಸರ್ಕಾರದ ಕಾಲದಲ್ಲಿ ಕೋಟಿಗಟ್ಟಲೇ ಹಣ ಬಿಡುಗಡೆ ಮಾಡಲಾಗಿತ್ತು. ಆದರೆ ಇನ್ನೂ 3 ಮತ್ತು 4ನೇ ಹಂತದ ಹಣ ಬಿಡುಗಡೆಯಾಗಿಲ್ಲ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಆಭಿವೃದ್ಧಿ ನಡೆಯುತ್ತಿಲ್ಲ. ರಸ್ತೆಯಲ್ಲಿ ಗುಂಡಿಗಳು ತುಂಬಿವೆ ಎಂದರು.
ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ಜೆ.ಕೆ.ಸುರೇಶ್, ಸಿ.ಆರ್. ಶಿವಾನಂದ, ಬಡಾವಣೆ ರಂಗಪ್ಪ, ಕರಿಬಸಪ್ಪ ರೆಡ್ಡಿ, ತಿಮ್ಲಾಪುರ ಶಿವನಗೌಡ ಮುಂತಾದವರು ಇದ್ದರು.
-30ಎಚ್.ಎಲ್.ಐ1.ಜೆಪಿಜಿ: