ರಾಜ್ಯ ಮಾರಾಟ ಮಾಡಲು ಹೊರಟ ಸರ್ಕಾರ: ನವೀನ್ ಗುಳಗಣ್ಣವರ

KannadaprabhaNewsNetwork |  
Published : Jun 20, 2024, 01:05 AM IST
19ಕೆಪಿಎಲ್26 ಕೊಪ್ಪಳ ನಗರದ ಮೀಡಿಯಾ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣವರ | Kannada Prabha

ಸಾರಾಂಶ

ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರ ರಾಜ್ಯವನ್ನೇ ಮಾರಾಟ ಮಾಡಲು ಹೊರಟಿದೆ.

ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಪೆಟ್ರೋಲ್, ಡೀಸೆಲ್ ದರ ಏರಿಕೆ

ಸುದ್ದಿಗೋಷ್ಠಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶಕನ್ನಡಪ್ರಭ ವಾರ್ತೆ ಕೊಪ್ಪಳ

ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರ ರಾಜ್ಯವನ್ನೇ ಮಾರಾಟ ಮಾಡಲು ಹೊರಟಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣವರ ಆರೋಪಿಸಿದರು.ನಗರದ ಮೀಡಿಯಾ ಕ್ಲಬ್‌ನಲ್ಲಿ ಬುಧುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಮುಗಿಯುತ್ತಿದ್ದಂತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಕೆ ಮಾಡಲಾಗಿದೆ. ರಾಜ್ಯದ ಇತಿಹಾಸದಲ್ಲಿಯೇ ಇಷ್ಟೊಂದು ದೊಡ್ಡ ಪ್ರಮಾಣದ ಏರಿಕೆಯಾಗಿದ್ದು, ಇದೇ ಮೊದಲು. ಅಷ್ಟೇ ಅಲ್ಲ, ರಾಜ್ಯ ಸರ್ಕಾರ ಹೆಚ್ಚುವರಿ ಸುಂಕ ವಿಧಿಸಿ ಹೆಚ್ಚಳ ಮಾಡಿರುವುದು ಇದೇ ಮೊದಲು ಎಂದರು.

ಹಿಂದೆ ಯಾವ ಸರ್ಕಾರವೂ ರಾಜ್ಯದ ಸುಂಕ ಹೆಚ್ಚಳ ಮಾಡಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರಲಿಲ್ಲ. ಆದರೆ, ಗ್ಯಾರಂಟಿ ಯೋಜನೆಗಳಿಂದ ಆರ್ಥಿಕವಾಗಿ ಸಂಕಷ್ಟದಲ್ಲಿ ಇರುವುದರಿಂದ ಸಿದ್ದರಾಮಯ್ಯ ಅವರು ಬೆಲೆ ಏರಿಕೆ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಈಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಕೆ ಮಾಡಿಯೇ ಇಲ್ಲ. ಆದರೂ ರಾಜ್ಯ ಸರ್ಕಾರ ಈಗ ಏಕಾಏಕಿ ಏರಿಕೆ ಮಾಡಿ, ಜನರಿಗೆ ಬರೆ ಎಳೆದಿದೆ ಎಂದರು.

ಈ ಎಲ್ಲ ವಿಷಯವನ್ನು ಮುಂದಿಟ್ಟುಕೊಂಡು ವಿಧಾನಸಭಾ ಕ್ಷೇತ್ರವಾರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು. ವಿಪ ಸದಸ್ಯೆ ಹೇಮಲತಾ ನಾಯಕ, ಮುಖಂಡರಾದ ಡಾ. ಕೆ. ಬಸವರಾಜ. ಮಹೇಶ ಹಾದಿಮನಿ ಹಾಗೂ ಪ್ರಸಾದ ಗಾಳಿ ಇದ್ದರು.

ಕೊಪ್ಪಳದಲ್ಲಿ ಹಾಡುಹಗಲೇ ಸರಗಳ್ಳತನ:

ಕೊಪ್ಪಳ ನಗರದ ಶಿಕ್ಷಕರ ಕಾಲನಿಯ ಮನೆಯ ಮುಂದೆ ಕಸಗುಡಿಸುತ್ತಿದ್ದ ಮಹಿಳೆಯ ಕೊರಳಿನಲ್ಲಿನ ಮಾಂಗಲ್ಯ ಸರ ಕಿತ್ತುಕೊಂಡು ಹೋಗಿರುವ ಘಟನೆ ಬುಧವಾರ ನಡೆದಿದೆ. ಅಚ್ಚರಿ ಎಂದರೇ ಮಾಂಗಲ್ಯ ಚೈನ್ ಕಿತ್ತುಕೊಂಡ ಖದೀಮರು ತಾಳಿಗಳನ್ನು ಮರಳಿ ಎಸೆದು, ಕೇವಲ ಬಂಗಾರದ ಚೈನ್ ಮಾತ್ರ ಕದ್ದೊಯಿದಿದ್ದಾರೆ. ಇದು ನಗರದ ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.ಮಂಜುಳಾ ಹಿರೇಮಠ ಸರ ಕಳೆದುಕೊಂಡವರು. ಐವತ್ತು ಗ್ರಾಮನ ಚಿನ್ನದ ಮಾಂಗಲ್ಯ ಸರ ಕಳ್ಳತನವಾಗಿದೆ. ಬೈಕ್‌ನಲ್ಲಿ ಹೆಲ್ಮೆಟ್ ಧರಿಸಿ ಬಂದು ಸರಗಳ್ಳತನ ಮಾಡಿ ಪರಾರಿಯಾಗಿದ್ದಾರೆ. ಒಂಟಿಯಾಗಿ ಇರುವ ಮಹಿಳೆಯರನ್ನು ಟಾರ್ಗೇಟ್ ಮಾಡಿ ಸರಗಳ್ಳತನ ಮಾಡಲಾಗುತ್ತಿದೆ.ಈ ಕುರಿತು ಕೊಪ್ಪಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

Recommended Stories

ವೈದ್ಯರ ಕೊರತೆಗೆ ನಲುಗಿದ ಸಾರ್ವಜನಿಕ ಆಸ್ಪತ್ರೆ
ಸತ್ಯಕಾಮರ ಸುಮ್ಮನೆಯಲ್ಲಿ ಕಸಾಪ ವಾರ್ಷಿಕ ಸಭೆ: ಡಾ.ಮಹೇಶ ಜೋಷಿ