ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬಕ್ಕೆ ಸರ್ಕಾರ ಕಾರಣವಲ್ಲ

KannadaprabhaNewsNetwork |  
Published : Oct 09, 2026, 01:45 AM IST
ಫಲಾನುಭವಿಗಳಿಗೆ ಮನೆ ಹಸ್ತಾಂತರ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. | Kannada Prabha

ಸಾರಾಂಶ

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರಕ್ಕೆ ಆಸಕ್ತಿ ಇಲ್ಲ, ಸೋಲಿನ ಭಯದಿಂದ ಚುನಾವಣೆ ಮುಂದೂಡಲಾಗುತ್ತಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಕರ್ನಾಟಕದಲ್ಲಿ ನಡೆದ ಉಪಚುನಾವಣೆಗಳಲ್ಲಿ ಆಡಳಿತ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿಯೂ ನಾವು ಗೆಲುವು ಸಾಧಿಸುತ್ತೇವೆ. ವಿಪಕ್ಷಗಳು ಹತಾಶೆಯಿಂದ ಇಂತಹ ಆರೋಪಗಳನ್ನು ಮಾಡುತ್ತಿವೆ ಎಂದರು. ಎಸ್‌ಐಆರ್‌ ಪ್ರಕ್ರಿಯೆಯ ಹೆಸರಿನಲ್ಲಿ ಬಡವರು, ರೈತರು ಹಾಗೂ ಶೋಷಿತರ ಮತದಾನದ ಹಕ್ಕು ಕಸಿದುಕೊಳ್ಳುವಂತಹ ಯಾವುದೇ ಅಕ್ರಮ ನಡೆಯಬಾರದು. ಕಾನೂನುಬಾಹಿರವಾಗಿ ಫಾರ್ಮ್ ನಂಬರ್ 7 ಬಳಸಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ ಪ್ರಯತ್ನ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ಈ ಕುರಿತು ವಿಪಕ್ಷಗಳನ್ನು ಪ್ರಶ್ನಿಸಬೇಕು ಎಂದು ಸಚಿವರು ಹೇಳಿದರು

ಕನ್ನಡಪ್ರಭ ವಾರ್ತೆ ಬೇಲೂರು ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬಕ್ಕೆ ಸರ್ಕಾರ ಕಾರಣವಲ್ಲ ಎಂದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು.

ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಬೇಲೂರಿನಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿಗಳು ಮೇಲ್ದರ್ಜೆಗೇರಿರುವುದು, ಪಟ್ಟಣ ಪಂಚಾಯಿತಿಗಳಾಗಿ ಪರಿವರ್ತನೆ, ಕ್ಷೇತ್ರ ಪುನರ್ವಿಂಗಡಣೆ ಹಾಗೂ ಪ್ರಸ್ತುತ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆ ಸೇರಿದಂತೆ ಹಲವು ಕಾರಣಗಳಿಂದ ಚುನಾವಣಾ ಪ್ರಕ್ರಿಯೆಯಲ್ಲಿ ಕಾಲಾವಕಾಶ ಬೇಕಾಗಿದೆ ಎಂದರು. ಕ್ಷೇತ್ರ ಪುನರ್ವಿಂಗಡಣೆ ಪೂರ್ಣಗೊಂಡಿದ್ದು, ಎಲ್ಲಾ ಕ್ಷೇತ್ರಗಳಿಗೆ ಮೀಸಲಾತಿ ನಿಗದಿಪಡಿಸಲಾಗಿದೆ. ಶೀಘ್ರದಲ್ಲೇ ಕರಡು ಮೀಸಲಾತಿ ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಲಾಗುವುದು. ಬಳಿಕ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು. ಅದರ ಆಧಾರದ ಮೇಲೆ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳು ನಡೆಯಲಿವೆ ಎಂದು ತಿಳಿಸಿದರು.ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರಕ್ಕೆ ಆಸಕ್ತಿ ಇಲ್ಲ, ಸೋಲಿನ ಭಯದಿಂದ ಚುನಾವಣೆ ಮುಂದೂಡಲಾಗುತ್ತಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಕರ್ನಾಟಕದಲ್ಲಿ ನಡೆದ ಉಪಚುನಾವಣೆಗಳಲ್ಲಿ ಆಡಳಿತ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿಯೂ ನಾವು ಗೆಲುವು ಸಾಧಿಸುತ್ತೇವೆ. ವಿಪಕ್ಷಗಳು ಹತಾಶೆಯಿಂದ ಇಂತಹ ಆರೋಪಗಳನ್ನು ಮಾಡುತ್ತಿವೆ ಎಂದರು. ಎಸ್‌ಐಆರ್‌ ಪ್ರಕ್ರಿಯೆಯ ಹೆಸರಿನಲ್ಲಿ ಬಡವರು, ರೈತರು ಹಾಗೂ ಶೋಷಿತರ ಮತದಾನದ ಹಕ್ಕು ಕಸಿದುಕೊಳ್ಳುವಂತಹ ಯಾವುದೇ ಅಕ್ರಮ ನಡೆಯಬಾರದು. ಕಾನೂನುಬಾಹಿರವಾಗಿ ಫಾರ್ಮ್ ನಂಬರ್ 7 ಬಳಸಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ ಪ್ರಯತ್ನ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ಈ ಕುರಿತು ವಿಪಕ್ಷಗಳನ್ನು ಪ್ರಶ್ನಿಸಬೇಕು ಎಂದು ಸಚಿವರು ಹೇಳಿದರು.ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುತ್ತಿದೆ. ಸರ್ಕಾರದ ವತಿಯಿಂದ ಸುಮಾರು 72 ಸಾವಿರ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿಯೂ ನೇಮಕಾತಿ ಪ್ರಕ್ರಿಯೆ ಮುಂದುವರಿದಿದ್ದು, ತಮ್ಮ ಅವಧಿಯಲ್ಲಿ ಸುಮಾರು 79 ಪಿಡಿಒ ಹುದ್ದೆಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ. ಇನ್ನೂ 149 ಪಿಡಿಒ ಹುದ್ದೆಗಳ ನೇಮಕಾತಿಗೆ ಸಿದ್ಧತೆ ನಡೆದಿದೆ ಎಂದು ಸಚಿವರು ತಿಳಿಸಿದರು.

11ಎ ಸೇರಿದಂತೆ ನಿಯಮಾನುಸಾರ ದಾಖಲೆಗಳನ್ನು ಹೊಂದಿರುವವರಿಗೆ ಸ್ವತ್ತು ಖಾತೆ ನೀಡಲಾಗುತ್ತಿದೆ. ಪ್ಲಾನಿಂಗ್ ಅಪ್ರೂವಲ್ ಇಲ್ಲದೆ ನಿವೇಶನ ಅಥವಾ ಮನೆ ನಿರ್ಮಿಸಿಕೊಂಡಿರುವವರಿಗೂ ನಿಯಮಾನುಸಾರ ಬಿ-ಖಾತೆ ನೀಡುವ ಕುರಿತು ಕ್ರಮ ಕೈಗೊಳ್ಳಲಾಗುತ್ತಿದೆ. ಇದಕ್ಕಾಗಿ ಸಮೀಕ್ಷೆ ನಡೆಸಿ, ಕಂದಾಯ ಇಲಾಖೆಯ ಸಹಕಾರ ಪಡೆಯಲಾಗುವುದು.ಗ್ರಾಮಠಾಣದಲ್ಲಿ ತಲೆತಲಾಂತರಗಳಿಂದ ವಾಸಿಸುತ್ತಿರುವವರಿಗೆ ಸಹ ಸ್ವತ್ತು ಖಾತೆ ನೀಡುವ ಕುರಿತು ಸರ್ಕಾರ ತೀರ್ಮಾನ ಕೈಗೊಂಡಿದೆ. ಸ್ಥಳ ಮಹಜರು ಹಾಗೂ ಸಮೀಕ್ಷೆ ನಡೆಸಿ, ಅಗತ್ಯ ದಾಖಲೆಗಳ ಪರಿಶೀಲನೆಯ ಬಳಿಕ ಸೇಲ್ ಡೀಡ್ ಇಲ್ಲದಿದ್ದರೂ ನಿಯಮಾನುಸಾರ ಖಾತೆ ನೀಡುವ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಅರುಣ್ ಕುಮಾಸ್ವಾಮಿ, ಪುರಸಭಾ ಮಾಜಿ ಉಪಾಧ್ಯಕ್ಷೆ ಉಷಾ ಸತೀಶ್, ವಿಕ್ರಂಕೌರಿ, ಪ್ರದೀಪ್, ಮದನ್, ಪರಮೇಶ್, ಕರವೇ ಚಂದ್ರಶೇಖರ್, ಹೆಬ್ಬಾಳು ಹಾಲಪ್ಪ, ಬಿಬಿ ಶಿವರಾಜ್ ಚಿಕ್ಕಬೇಡಗೆರೆ ಮಂಜುನಾಥ್, ಕಾರ್ಯಕರ್ತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭ್ರೂಣಪತ್ತೆ ನಡೆಸುವ ಸ್ಕ್ಯಾನಿಂಗ್‌ ಸೆಂಟರ್‌ಗಳ ವಿರುದ್ಧ ಕ್ರಮ ಜರುಗಿಸಿ
ನೆಲ-ಜಲ ರಕ್ಷಣೆ, ಒತ್ತುವರಿ ತೆರವು, ಪಹಣಿ ಇಂಡೀಕರಣ ತ್ವರಿತಗೊಳಿಸಿ