ಕಂಟ್ರಾಕ್ಟರ್, ಅಧಿಕಾರಿಗಳ ಆತ್ಮಹತ್ಯೆಗೆ ಸರ್ಕಾರ ಕಾರಣ: ಬಿ.ವೈ. ವಿಜಯೇಂದ್ರ

KannadaprabhaNewsNetwork |  
Published : Jan 16, 2025, 12:46 AM IST
ಫೋಟೊ ಶೀರ್ಷಿಕೆ: 15ಆರ್‌ಎನ್‌ಆರ್3ರಾಣಿಬೆನ್ನೂರು ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕರ್ತರ ಸಭೆ ಹಾಗೂ ಇತ್ತೀಚಿಗೆ ನಿಧನ ಹೊಂದಿದ ಜಿಲ್ಲಾ ಕಾರ್ಯದರ್ಶಿ ದೀಪಕ್ ಹರಪನಹಳ್ಳಿ ಸಂತಾಪ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದರು. | Kannada Prabha

ಸಾರಾಂಶ

ಮುಖ್ಯಮಂತ್ರಿ ಪದವಿಗಾಗಿ ಕಾಂಗ್ರೆಸ್‌ನಲ್ಲಿ ಕಿತ್ತಾಟ ಶುರುವಾಗಿದೆ. ಮುಖ್ಯ ಮಂತ್ರಿಯಾಗಿ ಸಿದ್ದರಾಮಯ್ಯ ಬಹಳ ದಿನ ಉಳಿಯಲು ಸಾಧ್ಯವಿಲ್ಲ. ಈಗಾಗಲೇ ಅವರನ್ನು ಇಳಿಸಲು ಕಾಂಗ್ರೆಸ್‌ನಿಂದಲೇ ಸಂಚು ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ರಾಣಿಬೆನ್ನೂರು: ಸರ್ಕಾರದ ಆಡಳಿತದಿಂದ ಕಂಟ್ರಾಕ್ಟರ್, ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳತ್ತಿದ್ದಾರೆ. ಪಗಾರ ಕೊಡಲು ಸರ್ಕಾರದಲ್ಲಿ ಹಣ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ಸಂಜೆ ಆಯೋಜಿಸಲಾಗಿದ್ದ ಕಾರ್ಯಕರ್ತರ ಸಭೆ ಹಾಗೂ ಇತ್ತೀಚಿಗೆ ನಿಧನ ಹೊಂದಿದ ಜಿಲ್ಲಾ ಕಾರ್ಯದರ್ಶಿ ದೀಪಕ್ ಹರಪನಹಳ್ಳಿ ಸಂತಾಪ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ ಪದವಿಗಾಗಿ ಕಾಂಗ್ರೆಸ್‌ನಲ್ಲಿ ಕಿತ್ತಾಟ ಶುರುವಾಗಿದೆ. ಮುಖ್ಯ ಮಂತ್ರಿಯಾಗಿ ಸಿದ್ದರಾಮಯ್ಯ ಬಹಳ ದಿನ ಉಳಿಯಲು ಸಾಧ್ಯವಿಲ್ಲ. ಈಗಾಗಲೇ ಅವರನ್ನು ಇಳಿಸಲು ಕಾಂಗ್ರೆಸ್‌ನಿಂದಲೇ ಸಂಚು ನಡೆಯುತ್ತಿದೆ ಎಂದರು.

ರಾಜ್ಯದಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರದಿಂದ ಅಲ್ಪಸಂಖ್ಯಾತರ ತುಷ್ಟೀಕರಣದ ನೀತಿ ನಡೆಯುತ್ತಿದೆ. ಇಂತಹ ದುಷ್ಟ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಾ ಬಂದಿದ್ದೇನೆ ಎಂದು ಹೇಳಿದರು. ಚಾಮರಾಜಪೇಟೆಯಲ್ಲಿ ನಡೆದ ಘಟನೆ ನಿಜಕ್ಕೂ ಅಮಾನವೀಯವಾಗಿದೆ. ರಾಜ್ಯದ ಮುಖ್ಯಮಂತ್ರಿಗೆ ಈ ಕುರಿತು ಯಾವುದೇ ನೋವಾಗಿಲ್ಲ. ಕಟುಕರಿಗೆ ಸಹ ಅಂತಹ ಮನಸ್ಥಿತಿ ಬರಲು ಸಾಧ್ಯವಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.

ದೀಪಕ್ ಹರಪನಹಳ್ಳಿ ಪಕ್ಷದ ಕೊಂಡಿಯಾಗಿ ಸಕ್ರಿಯವಾಗಿ ತೊಡಗಿಕೊಂಡವರು. ಅವರ ನಿಧನದಿಂದ ಪಕ್ಷಕ್ಕೆ ನಷ್ಟವಾಗಿದೆ. ಇಂತಹ ಅಸಂಖ್ಯಾತ ಕಾರ್ಯಕರ್ತರ ಶಕ್ತಿಯಿಂದಲೇ ಬಿಜೆಪಿ ಇಂದು ಜಗತ್ತಿನ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾರ್ಯಕರ್ತರನ್ನು ಹೊರತುಪಡಿಸಿ ಪಕ್ಷವಿಲ್ಲ. ಮೃತ ಕಾರ್ಯಕರ್ತರನ್ನು ಪಕ್ಷ ಸದಾ ಸ್ಮರಿಸುತ್ತದೆ. ಮುಂದಿನ ದಿನಗಳಲ್ಲಿ ಯಡಿಯೂರಪ್ಪ ಅವರಂತೆ ಪಕ್ಷ ಸಂಘಟನೆ ಮಾಡುತ್ತೇನೆ. ಇದರಿಂದ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಅರುಣಕುಮಾರ ಪೂಜಾರ, ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ನಗರ ಘಟಕ ಅಧ್ಯಕ್ಷ ರಮೇಶ ಗುತ್ತಲ, ತಾಲೂಕು ಘಟಕ ಅಧ್ಯಕ್ಷ ಪರಮೇಶ ಗೂಳಣ್ಣನವರ, ಜಿಪಂ ಮಾಜಿ ಸದಸ್ಯ ಸಂತೋಷಕುಮಾರ ಪಾಟೀಲ, ಮಲ್ಲಿಕಾರ್ಜುನ ಅಂಗಡಿ, ಕೆ. ಶಿವಲಿಂಗಪ್ಪ, ಎಸ್.ಎಸ್. ರಾಮಲಿಂಗಣ್ಣನವರ, ಮಂಜುನಾಥ ಓಲೇಕಾರ, ಭಾರತಿ ಜಂಬಗಿ, ಜಟ್ಟೆಪ್ಪ ಕರೇಗೌಡ್ರ, ಅಮೋಘ ಬಾದಾಮಿ, ನವೀನ ಅಡ್ಡಿ, ಸುಜಾತಾ ಆರಾಧ್ಯಮಠ, ಅಕ್ಷತಾ ಮಳಗಿ, ಕುಬೇರಪ್ಪ ಕೊಂಡಜ್ಜಿ, ನಾಗರಾಜ ಬಣಕಾರ, ಪ್ರಕಾಶ ಪೂಜಾರ, ಬಸವರಾಜ ಚಳಗೇರಿ, ಭೀಮಣ್ಣ ಎಡಚಿ, ಶಿವಕುಮಾರ ಹರ್ಕನಾಳ ಮತ್ತಿತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಧಿವೇಶನ ಮುಗಿದ ಬಳಿಕ ಡಿಕೆಶಿಗೆ ಶುಭಸುದ್ದಿ : ಇಕ್ಬಾಲ್
ಬೆಳಗಾವೀಲೂ ‘ಕೈ’ ಡಿನ್ನರ್‌ ಸಭೆಗೆ ಬಿವೈವಿ ಕಿಡಿ