ಸರ್ಕಾರ ಕೆರೆಗಳಿಗೆ ಮರುಜೀವ ನೀಡಬೇಕು: ಶ್ರೀಗಳು

KannadaprabhaNewsNetwork |  
Published : Nov 03, 2026, 01:45 AM IST
2ಕೆಎಂಎನ್ ಡಿ12 | Kannada Prabha

ಸಾರಾಂಶ

ರಾಜ್ಯದಲ್ಲಿ ತೀವ್ರ ಬರಗಾಲವಿದೆ. ಸರ್ಕಾರ ನೀಡುವ ಬರ ಪರಿಹಾರದಿಂದ ರೈತ ಸಮುದಾಯಕ್ಕೆ ಯಾವುದೇ ಪ್ರಯೋಜವಾಗಿಲ್ಲ. ಹೀಗಾಗಿ ಕೂಡಲೇ ರೈತರ ನೆರವಿಗೆ ಧಾವಿಸಿ ಅವರ ಆರ್ಥಿಕ ಪ್ರಗತಿಗೆ ಯೋಜನೆ ರೂಪಿಸಬೇಕು. ರಾಜ್ಯಾದ್ಯಂತ ಕೆರೆಗಳ ಪುನಶ್ಚೇತನಕ್ಕಾಗಿ ಸರ್ಕಾರ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಬೇಕು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಕೆರೆ-ಕಟ್ಟೆಗಳಲ್ಲಿ ತುಂಬಿರುವ ಹೂಳನ್ನು ಕಾಲ ಕಾಲಕ್ಕೆ ತೆಗೆಸಿ ಮಳೆಗಾಲದಲ್ಲಿ ಹೆಚ್ಚಿನ ನೀರು ಸಂಗ್ರಹಿಸಿಟ್ಟುಕೊಳ್ಳುವ ಮೂಲಕ ಸರ್ಕಾರ ಕೆರೆಗಳಿಗೆ ಮರುಜೀವ ನೀಡಲು ಮುಂದಾಗಬೇಕು ಎಂದು ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ಪೀಠಾಧಿಪತಿ ಡಾ.ನಿಶ್ಚಲಾನಂದನಾಥ ಶ್ರೀಗಳು ಆಗ್ರಹಿಸಿದರು.

ತಾಲೂಕಿನ ಸಂತೆಬಾಚಹಳ್ಳಿಯಲ್ಲಿ ವಿನಾಯಕ ಗೆಳೆಯರ ಬಳಗ, ಯುವಕರ ಸಂಘದಿಂದ 68ನೇ ವರ್ಷದ ಗಣೇಶೋತ್ಸವದ ಅಂಗವಾಗಿ ನಡೆದ ಜಾನಪದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು.

ರಾಜ್ಯದಲ್ಲಿ ತೀವ್ರ ಬರಗಾಲವಿದೆ. ಸರ್ಕಾರ ನೀಡುವ ಬರ ಪರಿಹಾರದಿಂದ ರೈತ ಸಮುದಾಯಕ್ಕೆ ಯಾವುದೇ ಪ್ರಯೋಜವಾಗಿಲ್ಲ. ಹೀಗಾಗಿ ಕೂಡಲೇ ರೈತರ ನೆರವಿಗೆ ಧಾವಿಸಿ ಅವರ ಆರ್ಥಿಕ ಪ್ರಗತಿಗೆ ಯೋಜನೆ ರೂಪಿಸಬೇಕು. ರಾಜ್ಯಾದ್ಯಂತ ಕೆರೆಗಳ ಪುನಶ್ಚೇತನಕ್ಕಾಗಿ ಸರ್ಕಾರ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಬೇಕು ಎಂದು ಒತ್ತಾಯಿಸಿದರು.

ಕಾಲಕಾಲಕ್ಕೆ ಸಂಮೃದ್ದ ಮಳೆ ಬೆಳೆಯಾಗಿ ರೈತರು ನೆಮ್ಮದಿಯಾಗಿರದಿದ್ದರೆ ಗಣೆಶೋತ್ಸವ ಸಂಭ್ರಮಕ್ಕೆ ಯಾವುದೇ ಅರ್ಥವಿಲ್ಲ. ರಾಜ್ಯದಲ್ಲಿ 38 ಸಾವಿರ ಕೆರೆಗಳಿವೆ. ಮಂಡ್ಯ ಜಿಲ್ಲೆಯೊಂದರಲ್ಲಿಯೇ ಸರ್ಕಾರಿ ದಾಖಲೆಯಂತೆ 960 ಕೆರೆಗಳಿವೆ. ಇದಲ್ಲದೆ ಲೆಕ್ಕಕ್ಕೆ ಸಿಗದ ನೂರಾರು ಕಟ್ಟೆಗಳಿವೆ. ಹೂಳು ತುಂಬಿರುವ ಕೆರೆಗಳ ಹೂಳು ತೆಗೆಸಿ ಪುನರುಜ್ಜೀವನಗೊಳಿಸಿದರೆ ಕೆರೆಗಳ ನೀರಿನ ಸಂಗ್ರಹ ಹೆಚ್ಚಿ ಅಂತರ್ಜಲ ವೃದ್ಧಿಯಾಗುತ್ತದೆ ಎಂದರು.

ಮಂಡ್ಯ ಜಿಲ್ಲೆಯ ಕೆ.ಆರ್.ಎಸ್ ಜಲಾಶಯ ನಿರ್ಮಿಸಿ 85 ವರ್ಷಗಳು ಕಳೆದಿವೆ. ಹೇಮಾವತಿ ಜಲಶಯ ನಿರ್ಮಿಸಿ ಹತ್ತಿರ ಹತ್ತಿರ ನಾಲ್ಕು ದಶಕಗಳು ಕಳೆದಿವೆ. ಇದುವರೆಗೂ ನಮ್ಮ ಅಣೆಕಟ್ಟೆಗಳಿಂದ ನಮ್ಮ ಸರ್ಕಾರಗಳು ಒಂದೇ ಒಂದು ಬಾಂಡಲಿಯಷ್ಟು ಹೂಳು ತೆಗೆಸಿಲ್ಲ. ನಮ್ಮ ಅಣೆಕಟ್ಟೆಗಳಲ್ಲಿ ಹೂಳು ತುಂಬಿರುವುದರಿಂದ ಅವುಗಳ ಜಲ ಸಂಗ್ರಹ ಸಾಮರ್ಥ್ಯ ಕುಸಿದಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಈಗಾಗಲೇ ನೆರೆಯ ತೆಲಂಗಾಣ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿಗಳು ತಮ್ಮ ರಾಜ್ಯದ ಅಣೆಕಟ್ಟೆಗಳ ಹೂಳು ತೆಗೆಸುವುದಾಗಿ ಪ್ರಕಟಿಸಿದ್ದಾರೆ. ರಾಜ್ಯ ಸರ್ಕಾರವೂ ಅಣೆಕಟ್ಟೆಗಳು ಮತ್ತು ಕೆರೆಗಳ ಹೂಳೆತ್ತಿಸುವ ಕಾರ್ಯಕ್ಕೆ ಮುಂದಾಗಬೇಕು. ನವಂಬರ್ ತಿಂಗಳ ಚಳಿಗಾಲದ ಅಧಿವೇಶನದಲ್ಲಿ ಈ ಕುರಿತು ಧ್ವನಿಯೆತ್ತಬೇಕು ಎಂದು ಮನವಿ ಮಾಡಿದರು.

ತೆಂಡೇಕೆರೆ ಬಾಳೆಹೊನ್ನೂರು ಶಾಖಾ ಮಠದ ಶ್ರೀಗಂಗಾಧರ ಶಿವಾಚಾರ್ಯ ಮಹಾಸ್ವಾಮಿಗಳು, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಗಣೇಶೋತ್ಸವಗಳು ಜನರನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದವು. ಆದರೆ, ಈಗಿನ ಗಣೇಶೋತ್ಸವಗಳು ಕೇವಲ ಮನರಂಜನೆಗೆ ಸೀಮಿತವಾಗಿವೆ. ಯುವಜನರು ಈ ಇತಿಹಾಸವನ್ನು ಅರಿತುಕೊಳ್ಳಬೇಕು ಎಂದು ಸಲಹೆ ನೀಡಿದರು.

ಗ್ರಾಮೀಣ ಯುವಕರಿಗೆ ಹೆಣ್ಣು ಕೊಟ್ಟು ವಿವಾಹ ಮಾಡಲು ಹಿಂದೇಟು ಹಾಕುತ್ತಿರುವುದು ಬೇಸರದ ಸಂಗತಿ. ಹಳ್ಳಿಯಲ್ಲಿ ವಾಸಿಸುವ ಯುವಕರೂ ಸಮಾಜದ ಭಾಗವೇ ಆಗಿದ್ದು, ಅವರಿಗೂ ಉತ್ತಮ ವೈವಾಹಿಕ ಜೀವನ ನಡೆಸುವ ಅವಕಾಶ ಕಲ್ಪಿಸಬೇಕು ಎಂದು ಪೋಷಕರಲ್ಲಿ ಮನವಿ ಮಾಡಿದರು.

ಶಾಸಕ ಎಚ್.ಟಿ.ಮಂಜು ಮಾತನಾಡಿ, ನನಗೆ ತಾಲೂಕಿನ ಜನತೆ ಕೊಟ್ಟ ಶಾಸಕ ಪದವಿಗೆ ಯಾವುದೇ ರೀತಿಯ ಚ್ಯುತಿ ಬಾರದಂತೆ ಕೆಲಸ ನಿರ್ವಹಿಸುತ್ತಿದ್ದೇನೆ. ವಿಪಕ್ಷ ಶಾಸಕನಾಗಿದ್ದರೂ ಸಾಧ್ಯವಾದಷ್ಟು ಅನುದಾನ ತಂದು ತಾಲೂಕಿನ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇನೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್, ರಾಜ್ಯ ಆರ್‌ಟಿಒ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್ ಹಾಗೂ ಮನ್ಮುಲ್ ನಿರ್ದೇಶಕ ಡಾಲು ರವಿ ಮಾತನಾಡಿದರು.

ಗೆಳೆಯರ ಬಳಗದ ಸಂಸ್ಥಾಪಕ ಅಧ್ಯಕ್ಷ ಶಿವಪ್ಪಸಾರಥ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖಂಡರಾದ ನವೀನ್ ಕೃಷ್ಣ, ಜೆಡಿಎಸ್ ಯುವ ಮುಖಂಡ ಹುಬ್ಬನಹಳ್ಳಿ ಬಲರಾಮು, ಚಂದ್ರಶೇಖರ್, ಸಂಘದ ಅಧ್ಯಕ್ಷ ಜಯಕುಮಾರ್, ಕೃಷ್ಣ, ಸೋಮಶೇಖರ್, ಆದಿಹಳ್ಳಿ ನಾಗೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭುಗಿಲೆದ್ದ ಸರ್ಕಾರ ವರ್ಸಸ್‌ ಕುಮಾರಸ್ವಾಮಿ ಸ್ಟಿಂಗ್‌ ಫೈಟ್‌ - ಈಗ ಎಚ್‌ಡಿಕೆ ಚಾರ್ಜ್‌ಶೀಟ್‌
ಅರಬ್ಬಿ ಸಮುದ್ರದಲ್ಲಿ ಚಂಡಮಾರುತ - ಇನ್ನೂ 3 ದಿನ ರಾಜ್ಯದೆಲ್ಲೆಡೆ ಮಳೆ