ಉದ್ಯೋಗಾಧಾರಿತ ಶಿಕ್ಷಣವೇ ಸರ್ಕಾರದ ಉದ್ದೇಶ

KannadaprabhaNewsNetwork |  
Published : Apr 06, 2025, 01:48 AM IST
05ಜಿಯುಡಿ2 | Kannada Prabha

ಸಾರಾಂಶ

ಇಂಗ್ಲಿಷ್ ಭಾಷೆಯ ಸಂವಹನ ಇಂದಿನ ಕಾಲದಲ್ಲಿ ಉದ್ಯೋಗ ಪಡೆಯಲು ತುಂಬಾ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಪದವಿ ವಿಭಾಗದಲ್ಲಿ ಹೊಸ ಕೋರ್ಸ್‌ಳನ್ನು ಪ್ರಾರಂಭಿಸಲಾಗಿದೆ. ವಿದ್ಯಾರ್ಥಿಗಳು ಈ ಕೋರ್ಸ್‌ಗಳಲ್ಲಿ ದಾಖಲಾಗಿ ಉದ್ಯೋಗಗಳನ್ನು ಪಡೆದುಕೊಳ್ಳಬೇಕು. ಆದ್ದರಿಂದ ಪೋಷಕರು ಸರ್ಕಾರಿ ಕಾಲೇಜುಗಳಿಗೆ ತಮ್ಮ ಮಕ್ಕಳನ್ನು ಸೇರಿಸಿ.

ಕನ್ನಡಪ್ರಭ ವಾರ್ತೆ ಗುಡಿಬಂಡೆ

ರಾಜ್ಯದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವುದರ ಜೊತೆಗೆ ಉದ್ಯೋಗಗಳನ್ನು ದೊರಕಿಸಿಕೊಡುವುದೇ ನಮ್ಮ ಸರ್ಕಾರದ ಮುಖ್ಯ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಉದ್ಯೋಗಾಧಾರಿತ ಶಿಕ್ಷಣವನ್ನು ನೀಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು 7 ಕೋಟಿ ವೆಚ್ಚದ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ತುಂಬಾ ಮುಖ್ಯವಾಗಿದೆ. ಕನ್ನಡದ ಜೊತೆಗೆ ಇಂಗ್ಲಿಷ್ ಸಹ ಕಲಿಯಬೇಕು. ಕಾಲೇಜಿನಲ್ಲಿ ತಮ್ಮ ಸಹಪಾಠಿಗಳೊಡನೆ ಇಂಗ್ಲಿಷ್ ನಲ್ಲಿ ಮಾತನಾಡಬೇಕು ಎಂದು ಸಲಹೆ ನೀಡಿದರು.

ಸರ್ಕಾರಿ ಕಾಲೇಜಿಗೆ ದಾಖಲಾಗಿ

ಇಂಗ್ಲಿಷ್ ಭಾಷೆಯ ಸಂವಹನ ಇಂದಿನ ಕಾಲದಲ್ಲಿ ಉದ್ಯೋಗ ಪಡೆಯಲು ತುಂಬಾ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಪದವಿ ವಿಭಾಗದಲ್ಲಿ ಹೊಸ ಕೋರ್ಸ್‌ಳನ್ನು ಪ್ರಾರಂಭಿಸಲಾಗಿದೆ. ವಿದ್ಯಾರ್ಥಿಗಳು ಈ ಕೋರ್ಸ್‌ಗಳಲ್ಲಿ ದಾಖಲಾಗಿ ಉದ್ಯೋಗಗಳನ್ನು ಪಡೆದುಕೊಳ್ಳಬೇಕು. ಪೋಷಕರು ಲಕ್ಷಾಂತರ ರೂಪಾಯಿಗಳನ್ನು ಖರ್ಚು ಮಾಡಿ ಖಾಸಗಿ ಕಾಲೇಜುಗಳಿಗೆ ದಾಖಲು ಮಾಡುತ್ತಾರೆ. ಇದರಿಂದ ಪೋಷಕರಿಗೆ ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಸರ್ಕಾರಿ ಕಾಲೇಜುಗಳಿಗೆ ತಮ್ಮ ಮಕ್ಕಳನ್ನು ಸೇರಿಸಬೇಕು ಎಂದರು.

ಮುಖ್ಯಮಂತ್ರಿಗಳು ಕಾಲೇಜು ವಿಭಾಗದಲ್ಲಿ 2 ಸಾವಿರ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅನುಮೋದನೆ ನೀಡಿದ್ದಾರೆ. ಈ ಪ್ರಕ್ರಿಯೆ ಕೊಂಚ ತಡವಾಗುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನಾನುಕೂಲವಾಗದಂತೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಂಡು ಪಾಠ ಪ್ರವಚನಗಳನ್ನು ಮಾಡಲಾಗುತ್ತಿದೆ. ಉಪನ್ಯಾಸಕರು ಸಹ ತಾವು ತೆಗೆದುಕೊಳ್ಳುವ ಸಂಬಂಳಕ್ಕೆ ನ್ಯಾಯ ಮಾಡಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದರು.

ಐದು ಸಾವಿರ ಬಸ್ಸುಗಳ ಖರೀದಿ

ಹಿಂದಿನ ಸರ್ಕಾರದಲ್ಲಿ ಬಸ್ ಗಳನ್ನು ಖರೀದಿ ಮಾಡಿಯೇ ಇರಲಿಲ್ಲ. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸುಮಾರು 5 ಸಾವಿರ ಹೊಸ ಬಸ್ ಗಳನ್ನು ಖರೀದಿ ಮಾಡಲಾಗಿದೆ. ಇದರಿಂದ ಸಾರ್ವಜನಿಕರಿಗೆ ತುಂಬಾ ಅನುಕೂಲವಾಗಲಿದೆ. ಜೊತೆಗೆ ನಮ್ಮ ಸರ್ಕಾರದ ಪ್ರಮುಖ ಗ್ಯಾರಂಟಿಯಾದ ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ತುಂಬಾನೆ ಅನುಕೂಲವಾಗಿದೆ ಎಂದರು.

ಶಾಸಕರ ಭರವಸೆ:

ನಂತರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ. ನನ್ನ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹಾಗೂ ಆರೋಗ್ಯಕ್ಕೆ ನನ್ನ ಮೊದಲ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಹೊಸ ಕಾಲೇಜುಗಳಾಗಲಿ, ಕೋರ್ಸ್‌ಗಳಾಗಲಿ ತರುವುದು ನನ್ನ ಮೊದಲ ಕರ್ತವ್ಯವಾಗಿದೆ. ಸದ್ಯ 7 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಸರ್ಕಾರಿ ಪದವಿ ಕಾಲೇಜಿನಲ್ಲಿ ಕೈಗೊಳ್ಳಲಾಗಿದೆ. ಜೊತೆಗೆ ಸಚಿವರಿಗೆ ಹೊಸ ಕೋರ್ಸ್ಗಳ ಆರಂಭಕ್ಕೆ ಮನವಿ ನೀಡಲಾಗಿದೆ. ಅವು ಸಹ ಮುಂದಿನ ಶೈಕ್ಷಣಿಕ ವರ್ಷದಿಂದ ಆರಂಭವಾಗುವ ಭರವಸೆ ಇದೆ. ಶಿಕ್ಷಣಕ್ಕೆ ಸಂಬಂಧಪಟ್ಟ ಏನೆ ಸಮಸ್ಯೆಗಳಿದ್ದರೂ ನನ್ನ ಬಳಿ ಬನ್ನಿ ಬಗೆಹರಿಸುತ್ತೇನೆ ಎಂದರು.

ಈ ಸಮಯದಲ್ಲಿ ಗುಡಿಬಂಡೆಯಿಂದ ಬೆಂಗಳೂರಿಗೆ ಹೊಸದಾದ ಅಶ್ವಮೇಧ ಬಸ್ ಸಾರಿಗೆ ಸಂಪರ್ಕಕ್ಕೆ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಸೇರಿದಂತೆ ಗಣ್ಯರು ಚಾಲನೆ ನೀಡಿದರು. ಈ ವೇಳೆ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀಕರ, ತಹಸೀಲ್ದಾರ್ ಸಿಗ್ಬತ್ತುಲ್ಲಾ, ತಾ.ಪಂ ಇ.ಒ ನಾಗಮಣಿ, ಪ.ಪಂ ಅಧ್ಯಕ್ಷ ವಿಕಾಸ್, ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಕೇಶವರೆಡ್ಡಿ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಆದಿರೆಡ್ಡಿ, ಪ್ರಥಮ ದರ್ಜೆ ಕಾಲೇಜಿನ ಅಫ್ಜಲ್ ಬಿಜಿಲಿ, ಕೃಷ್ಣಪ್ಪ, ನಯಾಜ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ ಮತ್ತಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ದ್ವೇಷ ಮಸೂದೆಯಿಂದ ಭಿನ್ನ ದನಿ ದಮನ ಆಗಲ್ಲ ''
3 ವರ್ಷ ಮೊಮ್ಮಗನಿಗೆ ಬಾರಲ್ಲಿ ಹೆಂಡ ಕುಡಿಸಿದ ಅಜ್ಜ: ಆಕ್ರೋಶ