ಸರ್ಕಾರ ಸಹಕಾರ ಸಂಘಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲಿ

KannadaprabhaNewsNetwork |  
Published : Jan 31, 2025, 12:48 AM IST
ಯಡಗೆರೆ ಸುಬ್ರಮಣ್ಯ | Kannada Prabha

ಸಾರಾಂಶ

ನರಸಿಂಹರಾಜಪುರ, ಸರ್ಕಾರ ಸಹಕಾರ ಸಂಘಗಳ ಮೂಲಕ ಸ್ವಸಹಾಯ ಸಂಘ ಹಾಗೂ ಸ್ತ್ರಿ ಶಕ್ತಿ ಸಂಘಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಿದರೆ ಮೈಕ್ರೋ ಪೈನಾನ್ಸ್ ಹಾವಳಿ ತಡೆಯಬಹುದು ಎಂದು ರಾಜ್ಯ ಸಹಕಾರ ಭಾರತಿ ಉಪಾಧ್ಯಕ್ಷ ಯಡಗೆರೆ ಸುಬ್ರಮಣ್ಯ ಸಲಹೆ ನೀಡಿದರು.

ಸೀತೂರು ಸಹಕಾರ ಸಂಘದ ಕಚೇರಿಯಲ್ಲಿ ಯಡಗೆರೆ ಸುಬ್ರಮಣ್ಯ ಸಲಹೆ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಸರ್ಕಾರ ಸಹಕಾರ ಸಂಘಗಳ ಮೂಲಕ ಸ್ವಸಹಾಯ ಸಂಘ ಹಾಗೂ ಸ್ತ್ರಿ ಶಕ್ತಿ ಸಂಘಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಿದರೆ ಮೈಕ್ರೋ ಪೈನಾನ್ಸ್ ಹಾವಳಿ ತಡೆಯಬಹುದು ಎಂದು ರಾಜ್ಯ ಸಹಕಾರ ಭಾರತಿ ಉಪಾಧ್ಯಕ್ಷ ಯಡಗೆರೆ ಸುಬ್ರಮಣ್ಯ ಸಲಹೆ ನೀಡಿದರು.

ಗುರುವಾರ ಸೀತೂರು ಸಹಕಾರ ಸಂಘದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಎಲ್ಲಾ ಕಡೆ ಮೈಕ್ರೋ ಪೈನಾನ್ಸ್ ನಿಂದ ಸಾಲ ಪಡೆದ ಬಡವರು ಸಾಲ ಕಟ್ಟಲಾಗದೆ ಹಾಗೂ ಮೈಕ್ರೋ ಪೈನಾನ್ಸ್ ದಬ್ಬಾಳಿಕೆ ಸಹಿಸಲಾರದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಬಹಳ ವರ್ಷಗಳ ಹಿಂದೆ ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಸ್ವಸಹಾಯ ಸಂಘ, ಸ್ತ್ರೀ ಶಕ್ತಿ ಸಂಘಗಳ ಸದಸ್ಯರಿಗೆ ಶೇ. 4ರ ಬಡ್ಡಿಯಲ್ಲಿ ಸಾಲ ನೀಡುತ್ತಿದ್ದರು. ನಂತರ ಯಡಿಯೂರಪ್ಪ ಮುಖ್ಯ ಮಂತ್ರಿಯಾಗಿದ್ದಾಗ ಶೇ.6 ರ ಬಡ್ಡಿಯಲ್ಲಿ ಸಾಲ ನೀಡಲಾಗಿತ್ತು. ನಂತರ ದಿನಗಳಲ್ಲಿ ಕಡಿಮೆ ಬಡ್ಡಿಯಲ್ಲಿ ಸ್ವಸಹಾಯ ಗುಂಪಿಗಳಿಗೆ ಸಾಲ ನೀಡುವುದು ನಿಂತು ಹೋಗಿದೆ ಎಂದರು.

ಇದನ್ನು ಉಪಯೋಗಿಸಿಕೊಂಡು ಮೈಕ್ರೋ ಪೈನಾನ್ಸ್ ಗಳು ಬಡವರಿಗೆ, ಕಾರ್ಮಿಕರಿಗೆ ದುಬಾರಿ ಬಡ್ಡಿಯಲ್ಲಿ ಸಾಲ ನೀಡುತ್ತಿದೆ. ಸಾಲ ನೀಡುವುದರಲ್ಲಿ ಪಾರದರ್ಶಕತೆ ಇಲ್ಲವಾಗಿದೆ. ಆದರೆ, ಸಹಕಾರ ಸಂಘಗಳಲ್ಲಿ ಸಾಲ ನೀಡುವಾಗ ಕೆಲವು ನಿಯಮಗಳನ್ನು ಸರಿಯಾಗಿ ಪಾಲಿಸಲಾಗುತ್ತದೆ. ಆದ್ದರಿಂದ ಸರ್ಕಾರ ಈ ಬಗ್ಗೆ ಚಿಂತನೆ ನಡೆಸಿ ಹಿಂದಿನ ರೀತಿಯಲ್ಲೇ ಸ್ವಸಹಾಯ ಸಂಘ, ಸ್ತ್ರೀ ಶಕ್ತಿ ಸಂಘಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಿ ಮೈಕ್ರೋ ಪೈನಾನ್ಸ್ ಹಾವಳಿಗೆ ಕಡಿವಾಣ ಹಾಕಬಹುದು ಎಂದು ಸಲಹೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸೀತೂರು ವಿ.ಎಸ್.ಎಸ್.ಎನ್.ಅಧ್ಯಕ್ಷ ಬೆಮ್ಮನೆ ಮೋಹನ್, ಜಿಲ್ಲಾ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ವಿ.ಸಂದೀಪ್ ಇದ್ದರು.

PREV

Recommended Stories

ಉಪರಾಷ್ಟ್ರಪತಿ ಹುದ್ದೆ ರೇಸಲ್ಲಿ ರಾಜ್ಯ ಗೌರ್ನರ್‌ ಗೆಹಲೋತ್‌?
ಮಕ್ಕಳಲ್ಲಿ ಬಾಲ್ಯದಿಂದಲೇ ದೇಶಪ್ರೇಮ ತುಂಬಿ