ಅಸ್ವಸ್ಥರ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ: ಮುನಿಯಪ್ಪ

KannadaprabhaNewsNetwork |  
Published : Dec 27, 2023, 01:31 AM IST
ಫೋಟೋ: 26 ಹೆಚ್‌ಎಸ್‌ಕೆ 4 ಮತ್ತು 54: ಹೊಸಕೋಟೆ ನಗರದ ತಾಲೂಕು ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅಧಿಕಾರಿಗಳ ಸಭೆ ನಡೆಸಿ, ಪ್ರಸಾದ ಸೇವಿಸಿ ಅಸ್ವಸ್ಥಗೊಂಡ ಘಟನೆ ಬಗ್ಗೆ ಮಾಹಿತಿ ಪಡೆದರು. | Kannada Prabha

ಸಾರಾಂಶ

ಹೊಸಕೋಟೆ: ಪ್ರಸಾದ ಸೇವನೆ ಮಾಡಿ ಭಕ್ತರು ಅಸ್ವಸ್ಥಗೊಂಡ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ತಾಲೂಕು ಕಚೇರಿ ಆವರಣದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು.

ಹೊಸಕೋಟೆ: ಪ್ರಸಾದ ಸೇವನೆ ಮಾಡಿ ಭಕ್ತರು ಅಸ್ವಸ್ಥಗೊಂಡ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ತಾಲೂಕು ಕಚೇರಿ ಆವರಣದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು.

ಶಾಸಕ ಶರತ್ ಬಚ್ಚೇಗೌಡ, ಸಹಾಯಕ ಜಿಲ್ಲಾಧಿಕಾರಿ ಅಮರೇಶ್, ಎಸ್ಪಿ ಮಲ್ಲಿಕಾಜುನ ಬಾಲದಂಡಿ, ಡಿಹೆಚ್ಜೊಓ ಡಾ.ಸುನಿಲ್ ಕುಮಾರ್, ಟಿಹೆಚ್‌ಒ ಡಾ.ವೀಣಾ, ತಹಸೀಲ್ದಾರ್ ವಿಜಯ್ ಕುಮಾರ್ ಸ್ಭೆರಿದಂತೆ ಸ್ಥಳೀಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡರು.

ಬಳಿಕ ನಗರದ ಸರ್ಕಾರಿ ಸಾರ್ವಜನಿಕರ ಆಸ್ಪತ್ರೆ, ಎಂವಿಜೆ ಆಸ್ಪತ್ರೆಗೆ ತೆರಳಿ ಅಸ್ವಸ್ಥರಾದವರ ಜೊತೆ ಆರೋಗ್ಯ ವಿಚಾರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಹೆಚ್.ಮುನಿಯಪ್ಪ ಹನುಮ ಜಯಂತಿ ಪ್ರಸಾದ ಸ್ವೀಕರಿಸಿದ ನಂತರ ಈ ರೀತಿ ಘಟನೆ ಜರುಗಿದ್ದು ವೈದ್ಯಕೀಯ ಪರೀಕ್ಷೆಯ ವರದಿ ಬಂದ ನಂತರ ಘಟನೆಗೆ ಕಾರಣ ತಿಳಿಯಲಿದೆ. ಸಕಾಲಕ್ಕೆ ಶಾಸಕ ಶರತ್ ಬಚ್ಚೇಗೌಡ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ಅಸ್ವಸ್ಥರಿಗೆ ಸೂಕ್ತ ಚಿಕಿತ್ಸೆ ಕಲ್ಪಿಸಿದ್ದಾರೆ ಎಂದರು.

ಉಚಿತ ಚಿಕಿತ್ಸೆ: ಅಸ್ವಸ್ಥಗೊಂಡು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿರುವ ಎಲ್ಲಾ ರೋಗಿಗಳ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಈ ವಿಚಾರವಾಗಿ ಶಾಸಕ ಶರತ್ ಬಚ್ಚೇಗೌಡ ಹಾಗು ನಾನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಬಳಿ ಚರ್ಚಿಸಿದ್ದೇವೆ. ರೋಗಿಗಳು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು.

ಶಾಸಕ ಶರತ್ ಬಚ್ಚೇಗೌಡ ಮಾತನಾಡಿ, ಅಸ್ವಸ್ಥರ ಸಂಖ್ಯೆ 241ಕ್ಕೆ ಏರಿಕೆ ಆಗಿದ್ದರು ಐಸಿಯುನಲ್ಲಿರುವವರು ಚೇತರಿಕೆ ಕಂಡು ಸಾಮಾನ್ಯ ವಾರ್ಡ್ಗಳಿಗೆ ಸ್ಥಳಾಂತರಗೊಂಡಿದ್ದಾರೆ. ಇನ್ನು ಸಾಮಾನ್ಯ ವಾರ್ಡ್‌ನಲ್ಲಿದ್ದವರು 30ಕ್ಕೂ ಹೆಚ್ಚಿನ ಅಸ್ವಸ್ಥರು ಬಿಡುಗಡೆ ಆಗಿ ಮನೆಗೆ ತೆರಳಿದ್ದಾರೆ. ಯಾರಿಗಾದರೂ ಆರೋಗ್ಯದಲ್ಲಿ ಏರುಪೇರಾದರೆ ಅಂಬೇಡ್ಕರ್ ಭವನದಲ್ಲಿ ಕ್ಲಿನಿಕ್ ಪ್ರಾರಂಭಿಸಿದ್ದು ಅಲ್ಲಿ ಚಿಕಿತ್ಸೆ ಪಡೆಯಬಹುದು ಎಂದರು.

ಫೋಟೋ: 26 ಹೆಚ್‌ಎಸ್‌ಕೆ 4 ಮತ್ತು 5

4: ಹೊಸಕೋಟೆ ತಾಲೂಕು ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅಧಿಕಾರಿಗಳ ಸಭೆ ನಡೆಸಿ, ಪ್ರಸಾದ ಸೇವಿಸಿ ಅಸ್ವಸ್ಥಗೊಂಡ ಘಟನೆಯ ಮಾಹಿತಿ ಪಡೆದರು.5: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ, ಶಾಸಕ ಶರತ್ ಬಚ್ಚೇಗೌಡ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ವಿಚಾರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ
ರೈಲ್ವೆ ಯೋಜನೆಗೆ ಭೂಮಿ ನೀಡಲು ರಾಜ್ಯ ಹಿಂದೇಟು