ರಾಜ್ಯಪಾಲರ ನಡೆ ಅತ್ಯಂತ ಕಳವಳಕಾರಿ

KannadaprabhaNewsNetwork |  
Published : Jan 23, 2026, 03:00 AM IST
(ಫೋಟೊ22ಬಿಕೆಟಿ2, ಮಾಜಿ ಸಚಿವರಾದ  ಎಸ್ ಆರ್ ಪಾಟೀಲ) | Kannada Prabha

ಸಾರಾಂಶ

ರಾಜ್ಯದಲ್ಲಿ ಗೌರವಾನ್ವಿತ ರಾಜ್ಯಪಾಲರು ಸಂವಿಧಾನಾತ್ಮಕ ಮುಖ್ಯಸ್ಥರಾಗಿದ್ದು, ಸಂವಿಧಾನದ ಮೌಲ್ಯಗಳು ಮತ್ತು ಆಶಯಗಳನ್ನು ಎತ್ತಿಹಿಡಿಯುವಲ್ಲಿ ಮೊದಲಿಗರಾಗಬೇಕಾದ ಹೊಣೆಗಾರಿಕೆ ಅವರ ಮೇಲಿದೆ. ಆದರೆ ರಾಜ್ಯ ಸರ್ಕಾರದಿಂದ ಸಿದ್ಧಪಡಿಸಲಾದ ಭಾಷಣವನ್ನು ಓದಲಾರದೆ ಜಂಟಿ ಅಧಿವೇಶನದಿಂದ ಹೊರನಡೆದಿರುವುದು ಅತ್ಯಂತ ಖೇದಕರ ಸಂಗತಿ ಎಂದು ಮಾಜಿ ಸಚಿವ ಎಸ್ ಆರ್ ಪಾಟೀಲ ಬೇಸರ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಈ ಕುರಿತು ಪ್ರಕಟಣೆ ನೀಡಿರುವ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಅತ್ಯಂತ ಕಳವಳಕಾರಿಯ ವಿಷಯ. ರಾಜ್ಯಪಾಲರು ತಮ್ಮನ್ನು ನೇಮಕ ಮಾಡಿದ ಸರ್ಕಾರದ ತುತ್ತೂರಿಯಾಗದೆ, ಸಂವಿಧಾನದ ರಕ್ಷಕರಾಗಿ ಕಾಯ-ವಾಚ-ಮನಸಿನಿಂದ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂಬುದು ನನ್ನ ಅನಿಸಿಕೆ. ಈ ಘಟನೆಯಿಂದಾಗಿ ರಾಜ್ಯಪಾಲರ ವರ್ತನೆ ಸಂವಿಧಾನಾತ್ಮಕ ಬಿಕ್ಕಟ್ಟಿಗೆ ಕಾರಣವಾಗಿದೆ ಎನ್ನುವ ಭಾವನೆ ಉಂಟಾಗಿದೆ ಎಂದು ಹೇಳಿದ್ದಾರೆ.ಇಂತಹ ಸಂದರ್ಭಗಳಲ್ಲಿ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿರುವ ದೇಶದ ಸರ್ವೋಚ್ಚ ನ್ಯಾಯಾಲಯವು ಸ್ವಯಂಪ್ರೇರಿತವಾಗಿ ಮಧ್ಯಸ್ಥಿಕೆ ವಹಿಸಿ, ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುವ ಕ್ರಮ ಕೈಗೊಳ್ಳಬೇಕೆಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಮ್ಮ ಪ್ರಜಾಸತ್ತಾತ್ಮಕ ರಾಷ್ಟ್ರದಲ್ಲಿ ಮರುಕಳಿಸದಂತೆ ಅಗತ್ಯ ಕ್ರಮಗಳನ್ನು ಜರುಗಿಸಬೇಕು. ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಫೆಡರಲ್ ವ್ಯವಸ್ಥೆಗೆ ಧಕ್ಕೆ ಬಾರದಂತೆ ಜವಾಬ್ದಾರಿಯಿಂದ ನಡೆದುಕೊಳ್ಳಬೇಕಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

10 ಪ್ಯಾರಾದಲ್ಲಿ ಕೇಂದ್ರ ವಿರುದ್ಧ ಟೀಕಾ ಪ್ರಹಾರ
ಬೇಡಿಕೆಗೆ ತಕ್ಕಷ್ಟು ಬರುತ್ತಿಲ್ಲ ಮೈಸೂರು ರೇಷ್ಮೆ ಸೀರೆ