ಗ್ರಾಮ ಪಂಚಾಯಿತಿಯು ಜನರ ಆದ್ಯತೆ ಮೇರೆಗೆ ಕೆಲಸ ಮಾಡುತ್ತದೆ

KannadaprabhaNewsNetwork |  
Published : Apr 07, 2025, 12:30 AM IST
ಚಿತ್ರ : 5ಎಂಡಿಕೆ5 :ಫೋಟೋ:ಗ್ರಾ. ಪಂ. ಕಟ್ಟಡ ಉದ್ಘಾಟನೆ.ಉದ್ಘಾಟನಾ ಸಮಾರಂಭದಲ್ಲಿ ಶಾಸಕರು ಮಾತನಾಡುತ್ತಿರುವುದು. | Kannada Prabha

ಸಾರಾಂಶ

ಬಿರುನಾಣಿಯಲ್ಲಿ ಸರ್ಕಾರದ ವಿವಿಧ ಅನುದಾನದ 25 ಲಕ್ಷ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮ ಪಂಚಾಯಿತಿ ಕಟ್ಟಡವನ್ನು ಶಾಸಕರು ಉದ್ಗಾಟಿಸಿದರು.

ಕನ್ನಡಪ್ರಭ ವಾರ್ತೆ ಶ್ರೀಮಂಗಲ

ಬಿರುನಾಣಿ ಯಲ್ಲಿ ಸರ್ಕಾರದ ವಿವಿಧ ಅನುದಾನದ 25 ಲಕ್ಷ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮ ಪಂಚಾಯಿತಿ ಕಟ್ಟಡವನ್ನು ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರು ಹಾಗೂ ವಿರಾಜಪೇಟೆ ಕ್ಷೇತ್ರ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಶನಿವಾರ ಉದ್ಘಾಟನೆ ಮಾಡಿದರು.

ಈ ಸಂದರ್ಭ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸ್ಥಳೀಯ ಮೂಲಭೂತ ವ್ಯವಸ್ಥೆಯನ್ನು, ಅಭಿವೃದ್ಧಿ ಕಲ್ಪಿಸಲು ಸ್ಥಳೀಯರು ಆಯ್ಕೆ ಮಾಡಿದ ಪ್ರಜಾಪ್ರಭುತ್ವ ವ್ಯವಸ್ಥೆ ಗ್ರಾಮ ಪಂಚಾಯಿತಿಯಾಗಿದೆ. ಸ್ಥಳೀಯ ಆಡಳಿತದಲ್ಲಿ ಗ್ರಾಮ ಪಂಚಾಯತಿಯು ಜನರ ಆದ್ಯತೆಯ ಮೇರೆಗೆ ಕೆಲಸ ಮಾಡುತ್ತದೆ, ಮುಂದೆಯೂ ಜನರ ಉತ್ತಮ ಆಡಳಿತವನ್ನು ನೀಡುವಂತಾಗಲಿ ಎಂದು ಹೇಳಿದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಮ್ಮತಿರ ರಾಜೇಶ್, ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯ ಚೆಪ್ಪುಡೀರ ಅರುಣ್ ಮಾಚಯ್ಯ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಕರ್ತಮಾಡ ಮಂಜುಳಾ ಮೇದಪ್ಪ, ಪೊನ್ನಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಪೊನ್ನಂಪೇಟೆ ತಾಲೂಕು ಬಗರ ಹುಕುಂ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಅಣ್ಣಳಮಾಡ ಲಾಲ ಅಪ್ಪಣ್ಣ, ತಾಲೂಕು ಕಾರ್ಯನಿರ್ವಾಹಣಾ ಅಧಿಕಾರಿ ಅಪ್ಪಣ್ಣ, ಗ್ರಾಮ ಪಂಚಾಯಿತಿ ಸದಸ್ಯರಾದ ಬುಟ್ಟಿಯಂಡ ತಂಬಿ ನಾಣಯ್ಯ ಬೊಟ್ಟಂಗಡ ಈಶ್ವರ, ಮಲ್ಲೇಂಗಡ ರೀನಾ, ಸರಸ್ವತಿ, ಹುದಿಕೇರಿ ಪಿಡಿಓ ಪುಟ್ಟರಾಜು, ಬಿರುನಾಣಿ ಪಿಡಿಓ ರವಿ ಮಟ್ಟರ್ ಕೋಡ್, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮೀದೇರಿರ ನವೀನ್, ಬಿರುನಾಣಿ ವಲಯ ಕಾಂಗ್ರೆಸ್ ಅಧ್ಯಕ್ಷ ಕುಪ್ಪಣಮಾಡ ಪ್ರೀತಮ್ ಮುಂತಾದವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾವೂರು ಶ್ರೀ ಗೋಪಾಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ಸಂಪನ್ನ
ಸಚಿವ ತಿಮ್ಮಾಪುರ ಬೆಂಬಲಿಸಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ