ನುಗ್ಗೇಹಳ್ಳಿ: ಹೋಬಳಿ ಕೇಂದ್ರದ ತಿಪಟೂರು ಮುಖ್ಯ ರಸ್ತೆಯಲ್ಲಿರುವ ಶ್ರೀ ಚಂದ್ರಮೌಳೇಶ್ವರ ಸರ್ಕಲ್ ನ ಶ್ರೀ ವಿನಾಯಕ ಗೆಳೆಯರ ಬಳಗದ ವತಿಯಿಂದ ಗಣೇಶೋತ್ಸವ ವಿಜೃಂಭಣೆಯಿಂದ ನೆರವೇರಿತು. ಗೌರಿ ಗಣೇಶ ಮೂರ್ತಿಯ ವಿಸರ್ಜನಾ ಮಹೋತ್ಸವದ ಅಂಗವಾಗಿ ಗ್ರಾಮದ ರಾಜ ಬೀದಿಗಳಲ್ಲಿ ಬೆಳ್ಳಿ ರಥದಲ್ಲಿ ಉತ್ಸವ ನಡೆಸಲಾಯಿತು. ನಾಸಿಕ್ ಡೋಲು, ಮಕ್ಕಳ ಕೋಲಾಟ ಜನರ ಗಮನ ಸೆಳೆದವು. ಗೀತಾ ಮೆಲೋಡಿಸ್ ತಂಡದ ವತಿಯಿಂದ ರಸಮಂಜರಿ ಕಾರ್ಯಕ್ರಮ ಮತ್ತು ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಸಂಘದ ಅಧ್ಯಕ್ಷ ಮಿಲ್ಟ್ರಿ ಎನ್.ಆರ್. ಗಂಗಾಧರ್, ಉಪಾಧ್ಯಕ್ಷ ಪ್ರಕಾಶ್, ಕಾರ್ಯದರ್ಶಿ ಎನ್. ರಕ್ಷಿತ್, ಖಜಾಂಚಿ ಕಿರಣ್, ಸದಸ್ಯರುಗಳಾದ ರಂಗಸ್ವಾಮಿ, ರಂಜಿತ್, ವಿನಯ್, ದೇವರಾಜ್, ಕದ್ರಿ ಮಂಜುನಾಥ್, ವೆಲ್ಡಿಂಗ್ ಸ್ವಾಮಿ, ಮನೋಜ್ ಸೇರಿ ಸಂಘದ ಸದಸ್ಯರು, ಗ್ರಾಮಸ್ಥರು ಗಣೇಶೋತ್ಸವದಲ್ಲಿ ಪಾಲ್ಗೊಂಡರು.