ಶಾಲೆಗಳು ಜ್ಞಾನ ನೀಡುವ ಶ್ರೇಷ್ಠ ತಾಣಗಳು: ಡಾ.ನಿಶ್ಚಲಾನಂದನಾಥ ಸ್ವಾಮೀಜಿ

KannadaprabhaNewsNetwork |  
Published : Nov 07, 2025, 02:00 AM IST
6ಕೆಎಂಎನ್ ಡಿ22 | Kannada Prabha

ಸಾರಾಂಶ

ಮುನುಷ್ಯ ಎಷ್ಟೇ ಕೋಟಿ ಸಂಪಾದನೆ ಮಾಡಿದರೂ ಸಹ ನೆಮ್ಮದಿಗಾಗಿ ಹಂಬಲಿಸುತ್ತೇನೆ. ಗುಡಿ ಗೋಪುರಗಳು ಹಾಗೂ ದೇವಾಲಯಗಳಿಗೆ ಭೇಟಿ ನೀಡಿ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರೆ ಮನಸ್ಸಿಗೆ ಶಾಂತಿ ನೆಮ್ಮದಿ ದೊರೆಯುತ್ತದೆ. ಹಾಗಾಗಿ ದೇಶದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಯುತ್ತಿದೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ದೇವಾಲಯಗಳು ನಮ್ಮ ಸಂಸ್ಕೃತಿ ಪರಂಪರೆಯ ಪ್ರತಿಬಿಂಬಗಳು. ಶಾಲೆಗಳು ಜ್ಞಾನವನ್ನು ನೀಡುವ ಶ್ರೇಷ್ಠ ತಾಣಗಳಾಗಿವೆ. ಇವೆರಡನ್ನು ಅಭಿವೃದ್ಧಿ ಪಡಿಸುವ ಮೂಲಕ ಆಚಾರ-ವಿಚಾರಗಳನ್ನು ಸಂರಕ್ಷಣೆ ಮಾಡಬೇಕಿದೆ ಎಂದು ಬೆಂಗಳೂರು ಕೆಂಗೇರಿ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದನಾಥಸ್ವಾಮೀಜಿ ಹೇಳಿದರು.

ತಾಲೂಕಿನ ರಾಯಸಮುದ್ರ ಗ್ರಾಮದಲ್ಲಿ ನೂತನವಾಗಿ ಜೀರ್ಣೋದ್ಧಾರ ಮಾಡಿರುವ ಶ್ರೀವೀರಭದ್ರೇಶ್ವರಸ್ವಾಮಿ ದೇವಾಲಯದ ಲೋಕಾರ್ಪಣೆ ಸಮಾರಂಭದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.

ಮುನುಷ್ಯ ಎಷ್ಟೇ ಕೋಟಿ ಸಂಪಾದನೆ ಮಾಡಿದರೂ ಸಹ ನೆಮ್ಮದಿಗಾಗಿ ಹಂಬಲಿಸುತ್ತೇನೆ. ಗುಡಿ ಗೋಪುರಗಳು ಹಾಗೂ ದೇವಾಲಯಗಳಿಗೆ ಭೇಟಿ ನೀಡಿ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರೆ ಮನಸ್ಸಿಗೆ ಶಾಂತಿ ನೆಮ್ಮದಿ ದೊರೆಯುತ್ತದೆ. ಹಾಗಾಗಿ ದೇಶದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಯುತ್ತಿದೆ ಎಂದರು.

ಶಾಸಕ ಎಚ್.ಟಿ.ಮಂಜು ಮಾತನಾಡಿ, ರಾಯಸಮುದ್ರ ಗ್ರಾಮದಲ್ಲಿ ಹೆಚ್ಚು ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ನಾನು ಜಿಪಂ, ಮನ್ಮುಲ್ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದಾಗ ಹೆಚ್ಚು ಜನ ಬೆಂಬಲ ನೀಡುತ್ತಾ ಬಂದಿರುವ ಕಾರಣ ನನಗೆ ಹೆಚ್ಚಿನ ರಾಜಕೀಯ ಶಕ್ತಿ ಗ್ರಾಮದಿಂದ ದೊರೆಕಿದೆ ಎಂದರು.

ನಾನು ಬಾಲ್ಯದಲ್ಲಿ ಇದೇ ಗ್ರಾಮದ ಸುತ್ತಮುತ್ತ ಆಟವಾಡಿಕೊಂಡು ಬೆಳೆದಿದ್ದೇನೆ. ಈ ಗ್ರಾಮದ ಅಭಿವೃದ್ಧಿಗೆ ಸುಮಾರು 4 ಕೋಟಿ ರು. ನೀಡಿದ್ದೇನೆ. ಇನ್ನೂ ಹೆಚ್ಚು ಅನುದಾನ ನೀಡಲು ಸಿದ್ಧವಿದ್ದೇನೆ. ದೇಗುಲ ಉದ್ಘಾಟನೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬರಬೇಕಾಗಿತ್ತು. ಪ್ರಧಾನ ಮಂತ್ರಿಗಳ ವಿಶೇಷ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಬರಲು ಸಾಧ್ಯವಾಗಿಲ್ಲ. 48 ದಿನಗಳ ಪೂಜೆಗೆ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನು ಪೂಜೆ ಕರೆದುಕೊಂಡು ಬರುವ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಆರೋಗ್ಯಾಧಿಕಾರಿ ಡಾ.ವೆಂಕಟೇಶ್, ಗ್ರಾಪಂ ಅಧ್ಯಕ್ಷೆ ಕಾವ್ಯ ಚಂದ್ರು, ಮಾಜಿ ಅಧ್ಯಕ್ಷ ಆರ್.ಕೆ.ಯೋಗೇಶ್, ದೇವಾಲಯದ ಜೀರ್ಣೋದ್ಧಾರ ಟ್ರಸ್ಟ್ ಅಧ್ಯಕ್ಷ ಡಾ.ವೆಂಕಟೇಶ್, ಉಪಾಧ್ಯಕ್ಷ ಆರ್.ಕೆ.ನಾಗರಾಜು, ಪೊಲೀಸ್ ಇನ್ಸ್ ಪೆಕ್ಟರ್ ಮಂಜೇಗೌಡ, ಟಿಎಪಿಸಿಎಂಎಸ್ ಮಾಜಿ ನಿರ್ದೇಶಕ ಪಾಪೇಗೌಡ, ಜಿಪಂ ಮಾಜಿ ಅಧ್ಯಕ್ಷ ಆರ್.ಕೆ.ಕುಮಾರ್, ತಾಪಂ ಮಾಜಿ ಅಧ್ಯಕ್ಷ ಮೆಣಸ ಮಹದೇವೇಗೌಡ, ತಾಲೂಕು ಯುವ ಜೆಡಿಎಸ್ ಅಧ್ಯಕ್ಷ ಮಹಾದೇವ್, ಟಿಎಪಿಸಿಎಂಎಸ್ ನಿರ್ದೇಶಕರಾದ ಮಲ್ಲೇನಹಳ್ಳಿ ಎಂ.ಮೋಹನ್, ನಾಗರಘಟ್ಟ ದಿಲೀಪ್‌ಕುಮಾರ್, ಎಚ್.ಟಿ.ಲೋಕೇಶ್, ಹರಳಹಳ್ಳಿ ಸೊಸೈಟಿ ಅಧ್ಯಕ್ಷ ಈರೇಗೌಡ ಉಪಸ್ಥಿತರಿದ್ದರು.

PREV

Recommended Stories

ಕಸದಿಂದ ಲಕ್ಷ ಮನೆಗೆ ವಿದ್ಯುತ್ ಪೂರೈಕೆ: ಕರಿಗೌಡ
‘ಶಕ್ತಿ’ಯಿಂದ ಮಹಿಳೆಯರ ಸಾರಿಗೆಯ ವ್ಯವಸ್ಥೆಯಲ್ಲಿ ಗಮನಾರ್ಹ ಬದಲಾವಣೆ