ಶರಣ ಸಾಹಿತ್ಯ ಭಂಡಾರವನ್ನು ಸಂರಕ್ಷಿಸಿದ ಮಹಾನ್ ಶರಣ

KannadaprabhaNewsNetwork |  
Published : Feb 02, 2026, 01:30 AM IST
1ಎಚ್ಎಸ್ಎನ್5 : ತಾಲೂಕು ಆಡಳಿತದಿಂದ ಮಡಿವಾಳ ಮಾಚಿದೇವರ ಜಯಂತಿಯನ್ನು ಆ ಚರಿಸಲಾಯಿತು. | Kannada Prabha

ಸಾರಾಂಶ

ಡಿ, 12ನೇ ಶತಮಾನದ ಶಿವಶರಣರು ಸಮಾಜದಲ್ಲಿದ್ದ ಮೂಢನಂಬಿಕೆ, ಜಾತೀಯತೆ ಮತ್ತು ಅಸಮಾನತೆಗಳ ವಿರುದ್ಧ ಹೋರಾಟ ನಡೆಸಿದವರು. ಬಸವಣ್ಣನವರ ನೇತೃತ್ವದ ವಚನ ಚಳವಳಿಯಲ್ಲಿ ಮಡಿವಾಳ ಮಾಚಿದೇವರು ಪ್ರಮುಖ ಪಾತ್ರವಹಿಸಿ ಶರಣ ಸಾಹಿತ್ಯ ಭಂಡಾರವನ್ನು ಸಂರಕ್ಷಿಸಿದ ಮಹಾನ್ ಶರಣರಾಗಿದ್ದಾರೆ. ಶರಣರ ತತ್ವ, ವಚನಗಳ ಸಂದೇಶ ಇಂದಿನ ಸಮಾಜಕ್ಕೂ ಮಾರ್ಗದರ್ಶಿಯಾಗಿದೆ. ಯುವಜನರು ಶರಣರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್‌ ಶ್ರೀಧರ್‌ ಕಂಕಣವಾಡಿ ನುಡಿದರು.

ಕನ್ನಡಪ್ರಭ ವಾರ್ತೆ ಬೇಲೂರು

ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ 12ನೇ ಶತಮಾನದ ಶಿವಶರಣ ಮಡಿವಾಳ ಮಾಚಿದೇವರ ಜಯಂತಿಯನ್ನು ತಾಲೂಕು ಕಚೇರಿಯಲ್ಲಿ ಸಡಗರದಿಂದ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತಹಸೀಲ್ದಾರ್‌ ಶ್ರೀಧರ್‌ ಕಂಕಣವಾಡಿ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಿ ಮಾತನಾಡಿ, 12ನೇ ಶತಮಾನದ ಶಿವಶರಣರು ಸಮಾಜದಲ್ಲಿದ್ದ ಮೂಢನಂಬಿಕೆ, ಜಾತೀಯತೆ ಮತ್ತು ಅಸಮಾನತೆಗಳ ವಿರುದ್ಧ ಹೋರಾಟ ನಡೆಸಿದವರು. ಬಸವಣ್ಣನವರ ನೇತೃತ್ವದ ವಚನ ಚಳವಳಿಯಲ್ಲಿ ಮಡಿವಾಳ ಮಾಚಿದೇವರು ಪ್ರಮುಖ ಪಾತ್ರವಹಿಸಿ ಶರಣ ಸಾಹಿತ್ಯ ಭಂಡಾರವನ್ನು ಸಂರಕ್ಷಿಸಿದ ಮಹಾನ್ ಶರಣರಾಗಿದ್ದಾರೆ. ಶರಣರ ತತ್ವ, ವಚನಗಳ ಸಂದೇಶ ಇಂದಿನ ಸಮಾಜಕ್ಕೂ ಮಾರ್ಗದರ್ಶಿಯಾಗಿದೆ. ಯುವಜನರು ಶರಣರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಸಾಪ ಅಧ್ಯಕ್ಷ ಮಾ ನ ಮಂಜೇಗೌಡ ಮಾತನಾಡಿ, ಮಡಿವಾಳ ಮಾಚಿದೇವರು ಬಸವಣ್ಣನವರ ಸಮಕಾಲೀನರಾಗಿದ್ದು, ಅನುಭವ ಮಂಟಪದಲ್ಲಿ 350ಕ್ಕೂ ಅಧಿಕ ವಚನಗಳನ್ನು ರಚಿಸಿದ್ದಾರೆ. ವಚನ ಸಾಹಿತ್ಯ ಭಂಡಾರವನ್ನು ಉಳಿಸಿದ ಮಹಾನ್ ಶರಣರಾಗಿದ್ದಾರೆ. ಇಂತಹ ಮಹಾತ್ಮರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.ಅರ್ಬನ್ ಬ್ಯಾಂಕ್ ನಿರ್ದೇಶಕರು ಹಾಗೂ ಮಾಜಿ ಅಧ್ಯಕ್ಷರಾದ ಚಂದ್ರಶೇರ್‌ ಪಾಪು ಮಾತನಾಡಿ, ಮಡಿವಾಳ ಮಾಚಿದೇವರು ಮಹಾನ್ ವಚನಕಾರರಾಗಿದ್ದು, ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ವಚನಗಳನ್ನು ರಚಿಸಿದ್ದಾರೆ. ಅವರ ವಚನಗಳು ಸಮಾಜ ಸುಧಾರಣೆಯ ಸಂದೇಶವನ್ನು ಹೊತ್ತಿದ್ದು, ಜನಮನದಲ್ಲಿ ಇಂದಿಗೂ ಜೀವಂತವಾಗಿವೆ. ಇಂತಹ ಮಹಾನ್ ಶರಣರ ಜಯಂತಿಯನ್ನು ಆಚರಿಸುವ ಮೂಲಕ ಅವರ ಆದರ್ಶಗಳನ್ನು ಮುಂದಿನ ತಲೆಮಾರಿಗೆ ತಲುಪಿಸಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಮಡಿವಾಳ ಮಾಚಿದೇವರ ಸಂಘದ ನಗರ ಅಧ್ಯಕ್ಷರಾದ ಹೇಮಂತ್, ಸಮನ್ವಯ ಅಧಿಕಾರಿ ಶಿವಮರಿಯಪ್ಪ, ಆನಂದ್, ಮಡಿವಾಳ ಮಾಚಿದೇವರ ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಂಗ್ರೆಸ್‌ನವರಿಗೆ ಬಜೆಟ್ ಅರ್ಥವಾಗಲ್ಲ: ಜೋಶಿ ಚಾಟಿ
ರಾಜಕ್ಕೆ ಕೇಂದ್ರ ಬಜೆಟ್ಟಲ್ಲಿ ಚೊಂಬು : ಸಿಎಂ ಸಿಡಿಮಿಡಿ