ನಿವೃತ್ತಿಯೇ ಇಲ್ಲದ ಶ್ರೇಷ್ಠ ವೃತ್ತಿ ಶಿಕ್ಷಕನದ್ದು: ಯಶ್ಪಾಲ್ ಸುವರ್ಣ

KannadaprabhaNewsNetwork |  
Published : Sep 07, 2025, 01:01 AM IST
06ಶಿಕ್ಷಕ | Kannada Prabha

ಸಾರಾಂಶ

ಉಡುಪಿ ನಗರ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕ್ತಿ ಎಂಬ ದಾಸ ವಾಣಿಯಂತೆ ಜಗತ್ತಿನ ಪ್ರತಿಯೊಬ್ಬ ಸಾಧಕನ ಸಾಧನೆಯಲ್ಲಿ ಗುರುಗಳ ಪಾತ್ರ ಮಹತ್ವದಾಗಿದೆ. ಪ್ರಪಂಚದ ಅತೀ ಶ್ರೇಷ್ಠ ಗೌರವಯುತ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿರುವ ಶಿಕ್ಷಕರು ತಮ್ಮ ವಿದ್ಯಾರ್ಥಿಗಳ ಪಾಲಿಗೆ ಎಂದಿಗೂ ನಿವೃತ್ತರಾಗದೇ ಗುರುಗಳಾಗಿಯೇ ಸ್ಥಾನ ಪಡೆಯುವ ಮೂಲಕ ಸಮಾಜಕ್ಕೆ ಸದಾ ಮಾದರಿಯಾಗಿದ್ದಾರೆ ಎಂದು ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ ಹೇಳಿದರು.ಉಡುಪಿ ನಗರ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಉಡುಪಿ ನಗರ ಭಾಗದ ವಿವಿಧ ಶಾಲಾ ಕಾಲೇಜುಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ 75 ಮಂದಿ ಶಿಕ್ಷಕರನ್ನು ಸನ್ಮಾನಿಸಲಾಯಿತು.ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ವಿಧಾನಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕಿರಣ್ ಕುಮಾರ್, ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷ ರಾಜೀವ್ ಕುಲಾಲ್, ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷರಾದ ಸಂಧ್ಯಾ ರಮೇಶ್, ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''