ನರಗುಂದ: ದೇಶದ ಬೆಳವಣಿಗೆ ಮತ್ತು ಭವಿಷ್ಯದ ದೃಷ್ಟಿಯಿಂದ ಮತದಾರರ ಪಾತ್ರ ಮುಖ್ಯವಾಗಿದೆ. ಪ್ರಜಾಪ್ರಭುತ್ವದ ವ್ಯವಸ್ಥೆ ಉಳಿಯಲು ಮತದಾನ ಮಹತ್ವದ್ದಾಗಿದೆ ಎಂದು ಸಹಾಯಕ ನಿರ್ದೇಶಕ ತಾಲೂಕು ಅಕ್ಷರ ದಾಸೋಹ ಕಾರ್ಯಕ್ರಮದ ಅಧಿಕಾರಿ ಆನಂದ್ ಭೋವಿ ಹೇಳಿದರು.
ಭಾರತ ದೇಶ ಪ್ರಜಾಪ್ರಭುತ್ವ ದೇಶವಾಗಿದೆ. ಆದ್ದರಿಂದ ನಾವು ಪ್ರತಿಯೊಬ್ಬರೂ ಯಾವುದೇ ಹಣ, ಹೆಂಡದ ಆಮಿಷಕ್ಕೆ ಒಳಗಾಗದೇ ಒಳ್ಳೆಯ ವ್ಯಕ್ತಿಗೆ ಚುನಾವಣೆಯಲ್ಲಿ ಮತದಾನ ಮಾಡಿದರೆ ಮಾತ್ರ ಭಾರತ ದೇಶ ಜಗತ್ತಿನಲ್ಲಿ ಅಭಿವೃದ್ಧಿಶೀಲ ರಾಷ್ಟ್ರವಾಗಲು ಸಾಧ್ಯವಾಗುತ್ತದೆ ಎಂದರು.
ತಹಸೀಲ್ದಾರ್ ಶ್ರೀಶೈಲ ತಳವಾರ ಮಾತನಾಡಿ, ಜಗತ್ತಿನಲ್ಲಿಯೇ ಅತಿ ದೊಡ್ಡ ಸಂವಿಧಾನ ಹೊಂದಿರುವ ಭಾರತದಲ್ಲಿ ಚುನಾವಣೆ ಪಾತ್ರ ಮಹತ್ವದ್ದಾಗಿದೆ. ಪ್ರತಿ ವಿದ್ಯಾರ್ಥಿಯು ಹಳ್ಳಿಗಳಲ್ಲಿ ಮತದಾನದ ಬಗ್ಗೆ ತಿಳಿ ಹೇಳಬೇಕು ಎಲ್ಲರೂ ಸಾಮಾಜಿಕವಾಗಿ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.ತಾಪಂ ಅಧಿಕಾರಿ ಎಸ್. ಕೆ .ಇನಾಮದಾರ ಮಾತನಾಡಿ, ಸಂವಿಧಾನ ನೀಡಿರುವ ಪವಿತ್ರವಾದ ಮತದಾನದ ಹಕ್ಕನ್ನು ಚಲಾಯಿಸಿ ಪ್ರಜಾಪ್ರಭುತ್ವ ಗೆಲ್ಲಿಸಿ, ನಿಮ್ಮ ಮತವನ್ನು ಹಣ ಹೆಂಡಕ್ಕೆ ವಸ್ತುಗಳಿಗೆ ಮಾರಿಕೊಳ್ಳದೆ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಎಲ್ಲರೂ ತಪ್ಪದೇ ಮತದಾನ ಮಾಡಿ ಎಂದು ಹೇಳಿದರು.
ಸುನೀಲ ಕುರುಡಕೇರಿ ಸ್ವಾಗತಿಸಿದರು. ಉಪನ್ಯಾಸಕ ಎಂ.ಪಿ. ಕ್ಯಾತನಗೌಡ್ರ ಕಾರ್ಯಕ್ರಮವನ್ನು ನಿರೂಪಿಸಿದರು. ಬಸವರಾಜ ಕುಮ್ಮಿ ವಂದಿಸಿದರು.