ಬಡವರ ಆರ್ಥಿಕ ವೃದ್ಧಿಗೆ ಗ್ಯಾರಂಟಿ ಯೋಜನೆ ಸಹಕಾರಿ

KannadaprabhaNewsNetwork | Published : Apr 24, 2025 2:02 AM

ಸಾರಾಂಶ

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ಎಲ್ಲ ಜಾತಿ, ಜನಾಂಗದವರಿಗೂ ಅನುಕೂಲವಾಗಿ ಆರ್ಥಿಕವಾಗಿ ಶಕ್ತಿ ತುಂಬಿದೆ ಎಂದು ಖಾದಿ ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ, ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.

ಕನ್ನಡಪ್ರಭ ವಾರ್ತೆ ಮಸ್ಕಿಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ಎಲ್ಲ ಜಾತಿ, ಜನಾಂಗದವರಿಗೂ ಅನುಕೂಲವಾಗಿ ಆರ್ಥಿಕವಾಗಿ ಶಕ್ತಿ ತುಂಬಿದೆ ಎಂದು ಖಾದಿ ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ, ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.

ತಾಲೂಕಿನ ಮೆದಿಕಿನಾಳ ಗ್ರಾಮದಲ್ಲಿ ತಲೆಖಾನ್, ಕನ್ನಾಳ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ಯಾರಂಟಿ ಯೋಜನೆಗಳ ನಡೆ ಹಳ್ಳಿಕಡೆ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನರಿಗೆ ಮಾತು ಕೊಟ್ಟಂತೆ ಕಾಂಗ್ರೆಸ್ ಪಕ್ಷ ನಡೆದುಕೊಂಡಿದ್ದು, ಪಂಚ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿದೆ. ಗೃಹಲಕ್ಷ್ಮಿ, ಗೃಹಜೋತಿ, ಯುವನಿಧಿ ಯೋಜನೆಗಳಿಂದ

ಬದುಕನ್ನು ಕಟ್ಟಿಕೊಳ್ಳಲು ಸಹಾಯವಾಗಲಿದೆ ಎಂದರು. ಗೃಹಜೋತಿ, ಗೃಹಲಕ್ಷ್ಮಿ ಸೇರಿದಂತೆ ವಿವಿಧ ಯೋಜನೆಗಳ ಕೆಲವೊಂದು ಫಲಾನುಭವಿಗಳಿಗೆ ಗೃಹಲಕ್ಷ್ಮಿ ಹಾಗೂ ಗೃಹಜೋತಿ ಯೋಜನೆಗಳ ತಲುಪುತ್ತಿಲ್ಲ ಎಂದು ಹೇಳಿದರು ಈ ಸಂದರ್ಭದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿಯೇ ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದರು.

ಗ್ಯಾರಂಟಿ ಯೋಜನೆಗಳ ತಾಲೂಕ ಅಧ್ಯಕ್ಷ ಮಹಿಬೂಬ್ ಸಾಬ್ ಮುದ್ದಾಪುರ ಮಾತನಾಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಗ್ರಾಮೀಣ ಘಟಕದ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರ್, ಮೆದಕಿನಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ನಿಂಗಪ್ಪ, ತಾಪಂ ಇಒ ಅಮರೇಶ್ ಯಾದವ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿ ನವೀನ್ ಕುಮಾರ್ ಸಂಗೆಪಾಗ್, ಜೆಸ್ಕಾಂ ಏಇಇ ವೆಂಕಟೇಶ್, ಸಿಡಿಪಿಒ ಎಂ.ಡಿ ಗೋಕುಲ್, ಪಂಚ ಗ್ಯಾರಂಟಿ ಸಮಿತಿಯ ಸದಸ್ಯರಾದ ರವಿಪಾಟೀಲ್, ಚನ್ನಬಸವ, ಶಂಕರಗೌಡ, ಪೌಲರಾಜ ಯದ್ದಲದಿನ್ನಿ, ನಾಗರಾಜ. ರಮೇಶ್ ಕರೆಕುರಿ, ಲಕ್ಷಣ ನಾಯಕ, ಕನಕಪ್ಪ, ಸೋಮನಾಥ ನಾಯಕ, ನಾಗರತ್ನ ಕಟ್ಟಿಮನಿ, ನಿಜಗುಣಿ, ಆಲಂಭಾಷಾ, ಬಸವಂತಪ್ಪ, ಬಸ್ಸಪ್ಪ, ಇತರರು.ಅಧಿಕಾರಿಗಳ ವಿರುದ್ಧ ಶಾಸಕ ಆರ್ ಬಸನಗೌಡ ಗರಂ : ತೀರ್ಥಭಾವಿ ಗ್ರಾಮದ ಹನುಮಮ್ಮ ಎನ್ನುವ ಮಹಿಳೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತಿಲ್ಲ ಎಂದು ಶಾಸಕರ ಬಳಿ ಹೇಳಿಕೊಂಡರು. ಇದರಿಂದ ಅಧಿಕಾರಿಗಳ ವಿರುದ್ಧ ಗರಂ ಆದ ಶಾಸಕ ಆರ್ ಬಸನಗೌಡ ತುರುವಿಹಾಳ ಗೃಹಲಕ್ಷ್ಮಿ ಯೋಜನೆಯಿಂದ ವಂಚಿತರಾಗಿದ್ದಾರೆ ಇದಕ್ಕೆ ಯಾರು ಹೊಣೆ ಎಂದು ಅಧಿಕಾರಿಗಳ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೇ ಎರಡು ದಿನಗಳಲ್ಲಿ ಸಮಸ್ಯೆ ನಿವಾರಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.ದ್ಯಾಮಮ್ಮ ಅವರಿಗೆ ಆಧಾರ್ ಕಾರ್ಡ್ ಲಿಂಕ್ ಸಮಸ್ಯೆ ಇದ್ದು ಅದನ್ನು ಎರಡು ದಿನಗಳಲ್ಲಿ ಪರಿಹಾರ ದೊರಕಿಸಿ ಕೊಡುವುದಾಗಿ ಆಹಾರ ಇಲಾಖೆಯ ಅಧಿಕಾರಿಗಳು ತಿಳಿಸಿದರು.

Share this article