ಕನ್ನಡಪ್ರಭ ವಾರ್ತೆ ಯಲಬುರ್ಗಾ
ತಾಲೂಕಿನ ಬೇವೂರು ಗ್ರಾಮದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಪರ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕದಿದ್ದರೆ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ ಉಚಿತ ವಿದ್ಯುತ್ ಯೋಜನೆ ರದ್ದುಗೊಳಿಸುತ್ತೇವೆ ಎಂದು ಶಾಸಕರು ಹೇಳುತ್ತಿರುವುದನ್ನು ಗಮನಿಸಿದರೆ ಲೋಕಸಭಾ ಚುನಾವಣೆ ಬಳಿಕ ಈ ಯಾವ ಗ್ಯಾರಂಟಿ ಯೋಜನೆಗಳು ಇರುವುದಿಲ್ಲ ಹೀಗಾಗಿ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಬೇಡಿ ಎಂದರು.
ರಾಜ್ಯದಲ್ಲಿ ಸರ್ಕಾರ ಬಂದು 8 ತಿಂಗಳಾದರೂ ಯಾವುದೇ ಅಭಿವೃದ್ಧಿ ಕಾಮಗಾರಿಗಳಿಲ್ಲ. ಗ್ಯಾರಂಟಿ ಯೋಜನೆಗಳು ಕೇವಲ ಉಳ್ಳವರ ಪಾಲಾಗಿವೆ. ಜನಸಾಮಾನ್ಯರಿಗೆ ಯಾವುದೇ ಯೋಜನೆಗಳು ದೊರೆಯುತ್ತಿಲ್ಲ. ಇನ್ನೂ ಎಸ್ಸಿ, ಎಸ್ಟಿ ಸಮುದಾಯದವರ ಅಭಿವೃದ್ಧಿಯ ಕೋಟ್ಯಾಂತರ ಅನುದಾನವನ್ನು ಸಹ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದ್ದಾರೆ. ಇವರು ದೀನ ದಲಿತರ ಅಭಿವೃದ್ಧಿಯ ಬಗ್ಗೆ ಮಾತನಾಡುತ್ತಾರೆ. ಹೀಗಾಗಿ ಕಾಂಗ್ರೆಸ್ಸಿಗೆ ಮತ ಹಾಕದೆ ಬಿಜೆಪಿಗೆ ಮತ ನೀಡಬೇಕು ಎಂದು ಹೇಳಿದರು.ಮಾಜಿ ಸಚಿವ ಎಸ್.ಕೆ. ಬೆಳ್ಳಿಬ್ಬಿ ಮಾತನಾಡಿ, ಈಬಾರಿ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್‌ನ್ನು ಹೆಚ್ಚು ಮತಗಳಿಂದ ಗೆಲ್ಲಿಸುವಂತೆ ಮನವಿ ಮಾಡಿದರು.