ಗುರು-ಶಿಷ್ಯರ ಸಂಬಂಧ ಜ್ಞಾನಕ್ಕಿಂತಲೂ ಮಿಗಿಲಾದ ಭಾವ-ಬಂಧ

KannadaprabhaNewsNetwork |  
Published : Sep 07, 2026, 02:00 AM IST
ಪೊಟೋ೬ಸಿಪಿಟಿ೧: ತಾಲೂಕಿನ ಚಕ್ಕೆರೆ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿಬ ಶಿಕ್ಷಕರನ್ನು ಗೌರವಿಸಲಾಯಿತು. | Kannada Prabha

ಸಾರಾಂಶ

ಚನ್ನಪಟ್ಟಣ: ತಾಲೂಕಿನ ಚಕ್ಕೆರೆ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸಾಂಪ್ರದಾಯಿಕ ಎತ್ತಿನಗಾಡಿ ಅಲಂಕರಿಸಿ, ಶಿಕ್ಷಕರನ್ನು ಅದರಲ್ಲಿ ಕೂರಿಸಿಕೊಂಡು ಮೆರವಣಿಗೆಯಲ್ಲಿ ಶಾಲಾ ಆವರಣಕ್ಕೆ ಕರೆತಂದರು

ಚನ್ನಪಟ್ಟಣ: ತಾಲೂಕಿನ ಚಕ್ಕೆರೆ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸಾಂಪ್ರದಾಯಿಕ ಎತ್ತಿನಗಾಡಿ ಅಲಂಕರಿಸಿ, ಶಿಕ್ಷಕರನ್ನು ಅದರಲ್ಲಿ ಕೂರಿಸಿಕೊಂಡು ಮೆರವಣಿಗೆಯಲ್ಲಿ ಶಾಲಾ ಆವರಣಕ್ಕೆ ಕರೆತಂದರು. ಮಾರ್ಗದುದ್ದಕ್ಕೂ ಪುಷ್ಪಾರ್ಚನೆ ಮಾಡಿ ಗುರುಗಳಿಗೆ ಗೌರವ ಸಲ್ಲಿಸಿ ಶಿಕ್ಷಕರ ದಿನಾಚರಣೆಯನ್ನು ವಿಭಿನ್ನ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಬಳಿಕ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಿದ ಮುಖ್ಯ ಶಿಕ್ಷಕ ಯೋಗೇಶ್ ಚೆಕ್ಕೆರೆ ಮಾತನಾಡಿ, ವಿದ್ಯಾರ್ಥಿ ಬದುಕಿನಲ್ಲಿ ಶಿಕ್ಷಕರ ಸ್ಥಾನ ಅತ್ಯಂತ ಮಹತ್ವದ್ದು. ಶಿಕ್ಷಕರು ಮಕ್ಕಳಿಗೆ ಅಂಕಗಳಿಗಾಗಿ ಮಾತ್ರ ಬೋಧಿಸುವವರಲ್ಲ, ಉತ್ತಮ ವ್ಯಕ್ತಿತ್ವ, ಮೌಲ್ಯ, ಶಿಸ್ತು ಮತ್ತು ಮಾನವೀಯತೆಯೊಂದಿಗೆ ಬದುಕು ಕಟ್ಟಿಕೊಳ್ಳಲು ದಾರಿ ತೋರಿಸುವವರು. ಗುರುವಿನ ಮೇಲಿನ ಗೌರವ ಒಂದು ದಿನದ ಆಚರಣೆಯಾಗದೆ, ಜೀವನದ ಮೌಲ್ಯವಾಗಬೇಕು ಎಂದು ಹೇಳಿದರು.

ಸಮಾಜ ವಿಜ್ಞಾನ ಶಿಕ್ಷಕಿ ಬಿ.ಕೆ.ಲತಾ ಮಾತನಾಡಿ, ಶಿಕ್ಷಕರ ದಿನಾಚರಣೆಯ ಹಿನ್ನೆಲೆ ಹಾಗೂ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಶೈಕ್ಷಣಿಕ ಸೇವೆ ಸ್ಮರಿಸಿದರು. ಗುರು-ಶಿಷ್ಯರ ಸಂಬಂಧವು ಜ್ಞಾನಕ್ಕಿಂತಲೂ ಮಿಗಿಲಾದ ಭಾವನಾತ್ಮಕ ಬಂಧ. ಶಿಕ್ಷಕರಿಗೆ ನೀಡುವ ನಿಜವಾದ ಗೌರವವೆಂದರೆ ಅವರು ಕಲಿಸಿದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಎಂದರು.

ಶಿಕ್ಷಕ ಮಧುಸೂದನ್ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ, ಅವರಲ್ಲಿ ಆತ್ಮವಿಶ್ವಾಸ ಮೂಡಿಸಿ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ವಿದ್ಯಾರ್ಥಿಗಳ ಯಶಸ್ಸಿನಲ್ಲಿಯೇ ಶಿಕ್ಷಕರ ನಿಜವಾದ ಸಂತೋಷ ಅಡಗಿದೆ ಎಂದು ಹೇಳಿದರು.

ಶಾಲೆಯ ಎಲ್ಲಾ ಶಿಕ್ಷಕರನ್ನು ವಿದ್ಯಾರ್ಥಿಗಳ ವತಿಯಿಂದ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳು ತಮ್ಮ ಶಿಕ್ಷಕರ ಕುರಿತು ಅನಿಸಿಕೆಗಳನ್ನು ಹಂಚಿಕೊಂಡು, ತಮ್ಮ ಬದುಕಿನಲ್ಲಿ ಶಿಕ್ಷಕರು ನೀಡಿದ ಪ್ರೇರಣೆ ಹಾಗೂ ಮಾರ್ಗದರ್ಶನವನ್ನು ಸ್ಮರಿಸಿದರು.

ಬಳಿಕ ವಿದ್ಯಾರ್ಥಿಗಳಿಂದ ಹಾಡು, ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನಸೆಳೆದವು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ರಾಜಣ್ಣ, ಶಶಿರೇಖಾ, ರಶ್ಮಿ, ಶಶಿಕುಮಾರ್ ಹಾಗೂ ರಾಜೇಶ್, ರಾಜಮ್ಮ ಸೇರಿದಂತೆ ಶಾಲೆಯ ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪೊಟೋ೬ಸಿಪಿಟಿ೧:

ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಶಿಕ್ಷಕರನ್ನು ಗೌರವಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾವಿರ ಕವಿತೆಗಳಿಗಿಂತ ಸಾವು ಇರದ ಕವಿತೆಗಳ ರಚಿಸಬೇಕು
ಕೃಷಿ ಜತೆ ಉದ್ಯಮದಿಂದ ಆದಾಯ ಹೆಚ್ಚಳ: ಡಾ. ದೇವರಾಜು