ಅಂಡಾಣು ಮಾರಾಟ ದಂಧೆ : ಬೆಂಗಳೂರಿನಲ್ಲಿ ತೀವ್ರ ನಿಗಾ - ಐವಿಎಫ್‌ ಕೇಂದ್ರಗಳ ಮೇಲೆ ಕಣ್ಗಾವಲು

KannadaprabhaNewsNetwork |  
Published : Feb 28, 2026, 02:00 AM ISTUpdated : Feb 28, 2026, 06:26 AM IST
Egg Cell

ಸಾರಾಂಶ

ಬೆಂಗಳೂರಿನಲ್ಲೂ ಅಂಡಾಣು ಮಾರಾಟ ದಂಧೆ ನಡೆಯುತ್ತಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ನಗರದ ಐವಿಎಫ್‌ ಕೇಂದ್ರಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲು ಆರೋಗ್ಯ ಇಲಾಖೆ ಮುಂದಾಗಿದೆ.

 ಬೆಂಗಳೂರು :  ಬೆಂಗಳೂರಿನಲ್ಲೂ ಅಂಡಾಣು ಮಾರಾಟ ದಂಧೆ ನಡೆಯುತ್ತಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ನಗರದ ಐವಿಎಫ್‌ ಕೇಂದ್ರಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲು ಆರೋಗ್ಯ ಇಲಾಖೆ ಮುಂದಾಗಿದೆ.

ಮಹಿಳೆಯರ ಆರೋಗ್ಯಕ್ಕೆ ಧಕ್ಕೆ ಉಂಟುಮಾಡುವ ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಇಲಾಖೆ, ಅಕ್ರಮ ಕಂಡು ಬಂದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದೆ ಎಂದು ತಿಳಿದು ಬಂದಿದೆ.

ಮಹಿಳೆಯರಿಗೆ ಹಣದ ಆಮಿಷವೊಡ್ಡಿ ವಿವಿಧ ರಾಜ್ಯಗಳಿಂದ ಬೆಂಗಳೂರಿಗೆ ಕರೆ ತಂದು, ಕಾನೂನುಬಾಹಿರವಾಗಿ ಅಂಡಾಣು ಸಂಗ್ರಹಣೆ ನಡೆಸಲಾಗುತ್ತಿದೆ ಎಂಬ ಆರೋಪ ಮೇಲೆ ಮಹಾರಾಷ್ಟ್ರದಲ್ಲಿ ನಾಲ್ವರನ್ನು ಬಂಧಿಸಲಾಗಿತ್ತು. ಇದರ ಬೆನ್ನಲ್ಲೇ ಆರೋಗ್ಯ ಇಲಾಖೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ.

ಸಮಗ್ರ ತನಿಖೆಗೆ ಸೂಚನೆ:

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಐವಿಎಫ್ ಕೇಂದ್ರಗಳ ದಾಖಲೆಗಳನ್ನು ಪರಿಶೀಲಿಸಿ, ಕಾನೂನು ಬಾಹಿರ ಚಟುವಟಿಕೆ ನಡೆದಿದ್ದರೆ ಕಠಿಣ ಕ್ರಮ ಕೈಗೊಳ್ಳಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಅವರು ಸೂಚಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.ಕೋಟ್‌..

ಸ್ಕ್ಯಾನಿಂಗ್‌ ಕೇಂದ್ರ ಮೇಲೆ ತೀವ್ರ ನಿಗಾ

ನಮ್ಮ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸ್ಕ್ಯಾನಿಂಗ್‌ ಕೇಂದ್ರಗಳ ಮೇಲೆ ತೀವ್ರ ನಿಗಾ ವಹಿಸಲು ಸೂಚಿಸಿದ್ದೇನೆ. ಇಲಾಖೆ ಉಪನಿರ್ದೇಶಕರು, ಎಆರ್‌ಟಿ ಕೇಂದ್ರಗಳ ಜವಾಬ್ದಾರಿ ಹೊಂದಿರುವ ಡಾ.ವಿವೇಕ್‌ ದೊರೆ ಅವರು ಗಂಭೀರವಾಗಿ ಪರಿಗಣಿಸಿ ನಿಗಾ ವಹಿಸಿದ್ದಾರೆ.

- ಡಾ. ರವೀಂದ್ರನಾಥ್‌ ಎಂ. ಮೇಟಿ, ಮುಖ್ಯ ಆರೋಗ್ಯಾಧಿಕಾರಿ, ಬೆಂಗಳೂರು ನಗರ

ಎಲ್ಲರಿಗಿಂತ ಮೊದಲೇ

ತಿಳಿಯುವುದು ಇಲ್ಲೇ!ಬೆಂಗಳೂರಿನ ಆಸ್ಪತ್ರೆಯಲ್ಲಿ ಮಹಿಳೆಯರ ಅಂಡಾಣುಗಳನ್ನು ಅಕ್ರಮವಾಗಿ ಸಂಗ್ರಹಿಸುತ್ತಿರುವ ಹಗರಣವನ್ನು ಮಹಾರಾಷ್ಟ್ರ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ ಎಂದು ಕನ್ನಡಪ್ರಭ ಮಾತ್ರ ಫೆ.25ರಂದು ವರದಿ ಮಾಡಿತ್ತು.

ಏನಿದು ಅಂಡಾಣು ದಂಧೆ?

ಬಡ ಅಥವಾ ಹಣದ ತುರ್ತು ಅನಿವಾರ್ಯತೆ ಎದುರಿಸುತ್ತಿರುವ ಮಹಿಳೆಯರಿಂದ ಕಾನೂನುಬಾಹಿರವಾಗಿ ಅಂಡಾಣುಗಳನ್ನು ಪಡೆದುಕೊಂಡು ಫಲವತ್ತತೆ ಸಮಸ್ಯೆ ಎದುರಿಸುತ್ತಿರುವ ದಂಪತಿಗೆ ಕೃತಕ ಗರ್ಭದಾರಣೆಗಾಗಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ದಂಧೆ ಇದಾಗಿದೆ. ತೆಲಂಗಾಣ, ಮಹಾರಾಷ್ಟ್ರಗಳಿಗೆ ವ್ಯಾಪಿಸಿದೆ ಎನ್ನಲಾದ ಈ ಜಾಲದ ರೂವಾರಿಗಳು ಅಮಾಯಕ ಮಹಿಳೆಯರನ್ನು ಬೆಂಗಳೂರಿಗೆ ಕರೆತಂದು ಕಾನೂನುಬಾಹಿರವಾಗಿ ಅಂಡಾಣು ಸಂಗ್ರಹಿಸುತ್ತಿದ್ದ ಆರೋಪ ಕೇಳಿಬಂದಿದ್ದು, ಈ ಸಂಬಂಧ ನಾಲ್ವರು ಸ್ತ್ರೀಯರನ್ನು ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಬಂಧಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಮಹಿಳಾ ಮೀಸಲಿಂದ ರಾಜಕೀಯ ಚಿತ್ರಣವೇ ಬದಲು : ಕುಮಾರಸ್ವಾಮಿ
ಬೀದಿಗಳಲ್ಲಿ ಇಲಿಗಳ ಕಾಟ : ಆರೋಗ್ಯ ಸಮಸ್ಯೆ ಭೀತಿ