ಡ್ರಗ್ಸ್ ನೀಡಿ ಗ್ಯಾಂಗ್ ರೇಪ್ ನಡೆಸಿದ ಕಾಮಾಂಧರ ಅಟ್ಟಹಾಸ ಖಂಡನೀಯ: ರೇಷ್ಮಾ ಉದಯ ಶೆಟ್ಟಿ

KannadaprabhaNewsNetwork |  
Published : Aug 25, 2024, 01:54 AM IST
ರೇಶ್ಮಾ24 | Kannada Prabha

ಸಾರಾಂಶ

ರಾಜ್ಯದೆಲ್ಲೆಡೆ ನಡೆಯುತ್ತಿರುವ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯದಿಂದ ರಾಜ್ಯದಲ್ಲಿ ಮಹಿಳೆಯರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಮಹಿಳೆಯರಿಗೆ ಯಾವುದೇ ಸುರಕ್ಷತೆ ಇಲ್ಲದಂತಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಆತಂಕ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿಕಾರ್ಕಳದಲ್ಲಿ ಮಾದಕ ದ್ರವ್ಯ ನೀಡಿ ಗ್ಯಾಂಗ್ ರೇಪ್ ನಡೆಸಿದ ಬೀಭತ್ಸ ಘಟನೆ ನಾಗರಿಕ ಸಮಾಜ ಬೆಚ್ಚಿ ಬೀಳುವಂತೆ ಮಾಡಿದೆ. ಸಮಾಜ ವಿದ್ರೋಹಿ ಕಾಮಾಂಧರ ಅಟ್ಟಹಾಸ ಅತ್ಯಂತ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ತಿಳಿಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಬಂಧಿತರಾಗಿರುವ ಆರೋಪಿಗಳ ಹಿನ್ನೆಲೆ ಹಾಗೂ ಅವರಿಗಿರುವ ಮಾದಕ ವಸ್ತು ಜಾಲದ ನಂಟಿನ ಬಗ್ಗೆಯೂ ಪೊಲೀಸ್ ಇಲಾಖೆ ಕೂಲಂಕಷ ತನಿಖೆ ನಡೆಸಬೇಕಾಗಿದೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಹುಬ್ಬಳ್ಳಿಯ ನೇಹಾ ಹತ್ಯೆ, ಬೆಳಗಾವಿ ಪ್ರಕರಣ ಸಹಿತ ರಾಜ್ಯದೆಲ್ಲೆಡೆ ನಡೆಯುತ್ತಿರುವ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯದಿಂದ ರಾಜ್ಯದಲ್ಲಿ ಮಹಿಳೆಯರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಮಹಿಳೆಯರಿಗೆ ಯಾವುದೇ ಸುರಕ್ಷತೆ ಇಲ್ಲದಂತಾಗಿದೆ ಎಂದವರು ಆತಂಕ ವ್ಯಕ್ತಪಡಿಸಿದ್ದಾರೆ.ಸುಸಂಸ್ಕೃತರ ನಾಡು ಎನಿಸಿಕೊಂಡಿರುವ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಇಂತಹ ಹೇಯ ಕೃತ್ಯ ನಡೆದಿರುವುದು ಜಿಲ್ಲೆಗೆ ಕಳಂಕ ತಂದಿದೆ. ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ಹೆಡೆಮುರಿ ಕಟ್ಟುವ ಜೊತೆಗೆ ಮಹಿಳೆಯರಿಗೆ ರಕ್ಷಣೆ ನೀಡುವ ಸತ್ಕಾರ್ಯ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯಿಂದ ಆಗಬೇಕಿದೆ.ಪೊಲೀಸ್ ಇಲಾಖೆ ಮಾದಕ ವಸ್ತುಗಳ ನಿಗ್ರಹದ ಜೊತೆಗೆ ಸದ್ರಿ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಗಣನೆಗೆ ತೆಗೆದುಕೊಂಡು ಎಲ್ಲ ಆಯಾಮಗಳಲ್ಲಿ ತನಿಖೆಯನ್ನು ನಡೆಸಿ, ಅಪರಾಧಿಗಳಿಗೆ ಕಾನೂನು ರೀತ್ಯಾ ಕಠಿಣ ಶಿಕ್ಷೆ ವಿಧಿಸಬೇಕು ಎಂದು ರೇಷ್ಮಾ ಉದಯ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌
ಬ್ಯಾಲೆಟ್‌ ಪೇಪರಲ್ಲೇ ಪಂಚಾಯ್ತಿ ಚುನಾವಣೆಗೆ ಸರ್ಕಾರ ಮಸೂದೆ