ಅರ್ಹ ವ್ಯಕ್ತಿಗಳಿಗೆ ದೊರೆತ ಪ್ರಶಸ್ತಿಗಳ ಗೌರವ ಹೆಚ್ಚಾಗುತ್ತದೆ: ಡಾ. ತಲ್ಲೂರು

KannadaprabhaNewsNetwork |  
Published : Oct 20, 2024, 01:50 AM IST
ತಲ್ಲೂರು19 | Kannada Prabha

ಸಾರಾಂಶ

ಯಶಸ್ವೀ ಕಲಾವೃಂದದವರಿಂದ ಹೂವಿನಕೋಲು ಹಾಗೂ ಸರಯೂ ಬಾಲ ಯಕ್ಷವೃಂದ ಕೋಡಿಕಲ್ ಇವರಿಂದ ತೆಂಕು ತಿಟ್ಟು ಯಕ್ಷಗಾನ ಭೂಮಿ ಪುತ್ರ ಭೌಮಾಸುರ ಯಕ್ಷಗಾನ ರಂಗದಲ್ಲಿ ಪ್ರದರ್ಶನಗೊಂಡಿತು.

ಕನ್ನಡಪ್ರಭ ವಾರ್ತೆ ತೆಕ್ಕಟ್ಟೆ

ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ದೊರೆತಾಗ ಪ್ರಶಸ್ತಿಗೆ ಗೌರವ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ಗಣಪತಿ ಭಟ್ ಹಾಗೂ ಹಂದೆಯವರಿಗೆ ನೀಡಲಾದ ಪ್ರಶಸ್ತಿಯ ಗೌರವ ಹೆಚ್ಚಾಗಿದೆ. ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.

ಅವರು ಇಲ್ಲಿನ ತೆಕ್ಕಟ್ಟೆ ಹಯಗ್ರೀವದಲ್ಲಿ ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆಯ ಸಿನ್ಸ್ 1999 ಶ್ವೇತಯಾನ - 76 ಕಾರ್ಯಕ್ರಮದಡಿಯಲ್ಲಿ ಬೆಂಗಳೂರು ಯಕ್ಷಗಾನ ಅಕಾಡೆಮಿಯ ಪ್ರಶಸ್ತಿಗೆ ಭಾಜನರಾದ ವಿದ್ವಾನ್ ಗಣಪತಿ ಭಟ್ ಹಾಗೂ ಸುಜಯೀಂದ್ರ ಹಂದೆ ಕೋಟ ಇವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದರು

ಮಕ್ಕಳ ಮೇಳ ಸಾಲಿಗ್ರಾಮ ವಿಶ್ವದಲ್ಲಿಯೇ ಗುರುತಿಸಿಕೊಂಡಿದೆ. ಅಂತಹ ಮೇಳವನ್ನು ಮುನ್ನಡೆಸುತ್ತಿರುವ ಸುಜಯೀಂದ್ರ ಹಂದೆಯವರಿಗೆ ಯಕ್ಷ ದೀವಿಗೆ ಪುಸ್ತಕ ಪ್ರಶಸ್ತಿ ಲಭಿಸಿದೆ. ಹಾಗೆಯೇ ವಿದ್ವಾನ್ ಗಣಪತಿ ಭಟ್‌ರೂ ವಿದ್ವತ್ತಿನಲ್ಲಿ ಪರಿಪೂರ್ಣರು. ಇವರಿಬ್ಬರಿಗೂ ಪ್ರಶಸ್ತಿ ಲಭಿಸಿದ್ದು ಯೋಗ್ಯವಾಗಿದೆ. ಯಶಸ್ವೀ ಕಲಾವೃಂದ ಪ್ರತೀ ವರ್ಷ ಪ್ರಶಸ್ತಿ ಪ್ರದಾನ ಪೂರ್ವದಲ್ಲಿಯೇ ಅಭಿನಂದನೆಯನ್ನು ಸಲ್ಲಿಸಿಕೊಂಡು ಹೆಸರಾಗಿದೆ ಎಂದು ಬಹು ಮೇಳಗಳ ಯಜಮಾನರಾದ ಪಿ. ಕಿಶನ್ ಹೆಗ್ಡೆ ಪ್ರಶಸ್ತಿ ಪುರಸ್ಕೃತರನ್ನು ಗೌರವಿಸಿ ಮಾತನಾಡಿದರು.

ಅಭಿನಂದನೆ ಸ್ವೀಕರಿಸಿದ ಸುಜಯೀಂದ್ರ ಹಂದೆ ಮಾತನಾಡಿ, ಯಕ್ಷಗಾನದಲ್ಲಿ ತೆಗೆದಷ್ಟು ಮೊಗೆದಷ್ಟು ವಿಚಾರಗಳಿವೆ. ಜಗತ್ತಿನ ಎಲ್ಲ ಕಲೆಗಳಿಗಿಂತ ಶ್ರೇಷ್ಠವಾದ ಕಲೆ ಯಕ್ಷಗಾನವು ನಿಲ್ಲುತ್ತದೆ ಎನ್ನುವುದನ್ನು ಯಾರೂ ಅಭಿಮಾನದಿಂದ ಹೇಳಿಕೊಳ್ಳಬಹುದು. ಆದರೆ ಹೊಸಬರಿಗೆ ಪರಿಚಯ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗೆ ತಲುಪಬೇಕಾದರೆ ಯಕ್ಷಗಾನದೊಳಗಿನ ನ್ಯೂನತೆಗಳನ್ನು ಸರಿ ಮಾಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ವಿದ್ವಾನ್ ಗಣಪತಿ ಭಟ್ಟರು ಯಕ್ಷಗಾನದ ಹೊರ ವಲಯಕ್ಕೂ ಸಂಗೀತದ ಸಾಹಿತ್ಯದ ವಿಶೇಷತೆಯನ್ನು ತೋರಿಸಿಕೊಟ್ಟಿದ್ದಾರೆ. ಅವರ ಜೊತೆಗೆ ನನ್ನನ್ನೂ ಗುರುತಿಸಿ ಪ್ರಶಸ್ತಿ ನೀಡಿರುವುದು ಸಂತಸ ತಂದಿದೆ ಎಂದು ಹೇಳಿದರು.

ಜನಸೇವಾ ಟ್ರಸ್ಟ್‌ನ ವಸಂತ್ ಗಿಳಿಯಾರ್, ಯಕ್ಷಗುರು ಲಂಬೋದರ ಹೆಗಡೆ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೋಟ ಸುದರ್ಶನ ಉರಾಳ, ಕಾರ್ಯದರ್ಶಿ ವೆಂಕಟೇಶ ವೈದ್ಯ ಉಪಸ್ಥಿತರಿದ್ದರು. ಹೆರಿಯ ಮಾಸ್ಟರ್ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ಯಶಸ್ವೀ ಕಲಾವೃಂದದವರಿಂದ ಹೂವಿನಕೋಲು ಹಾಗೂ ಸರಯೂ ಬಾಲ ಯಕ್ಷವೃಂದ ಕೋಡಿಕಲ್ ಇವರಿಂದ ತೆಂಕು ತಿಟ್ಟು ಯಕ್ಷಗಾನ ಭೂಮಿ ಪುತ್ರ ಭೌಮಾಸುರ ಯಕ್ಷಗಾನ ರಂಗದಲ್ಲಿ ಪ್ರದರ್ಶನಗೊಂಡಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಸಿಲಿನ ಹೊಡೆತಕ್ಕೆ ಸಾವಿರಾರು ಮೀನುಗಳ ಮಾರಣಹೋಮ
ನಿರಾಶ್ರಿತರ ಕಣ್ಣೀರು ಒರೆಸುವ ಕೆಲಸ