ಶ್ರೀರಂಗಪಟ್ಟಣ: ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡು ಮನೆ ಸಂಪೂರ್ಣ ಭಸ್ಮವಾಗಿರುವ ಘಟನೆ ತಾಲೂಕಿನ ಅರಕೆರೆ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಶಾಸಕ ಭೇಟಿ, ಪರಿಶೀಲನೆ:
ಬೆಂಕಿ ಅವಘಡದ ಸ್ಥಳಕ್ಕೆ ಶಾಸಕ ರಮೇಶ ಬಂಡಿಸಿದ್ದೇಗೌಡ ಹಾಗೂ ತಹಸೀಲ್ದಾರ್ ಚೇತನಾ ಯಾದವ್ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಸಂತ್ರಸ್ತ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ. ಹಾನಿ ಬಗ್ಗೆ ಸಮಗ್ರ ಪರಿಶೀಲನೆ ನಡೆಸಿದ ಶಾಸಕರು, ಬೆಂಕಿಯಿಂದ ಹಾನಿಗೊಳಗಾದ ಮನೆಯನ್ನು ಸರಿಪಡಿಸಲು ಮತ್ತು ಕುಟುಂಬಕ್ಕೆ ಅಗತ್ಯವಿರುವ ಎಲ್ಲಾ ಸರ್ಕಾರಿ ಸೌಲಭ್ಯಗಳನ್ನು ಒದಗಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿ, ವೈಯಕ್ತಿಕ ಖಾತೆಯಿಂದ ಆರ್ಥಿಕ ಸಹಾಯವನ್ನು ಸ್ಥಳದಲ್ಲೇ ಹಸ್ತಾಂತರಿಸಿದರು.ಈ ವೇಳೆ ಗ್ರಾಪಂ ಪಿಡಿಒ ಸೇರಿದಂತೆ ಕಂದಾಯ ಅಧಿಕಾರಿಗಳು ಜೊತೆಯಲ್ಲಿದ್ದರು.