ಕಲಘಟಗಿ:ಜನರ ಸಮಸ್ಯೆ ಆಲಿಸಿ, ಪರಿಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಪ್ರಜಾಸೇವಾ ಇಲಾಖೆಯನ್ನು ರಾಜ್ಯಾದ್ಯಂತ ಆರಂಭಿಸಿದ್ದು ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದರು.
ಸ್ಥಳದಲ್ಲಿಯೇ ಸಮಸ್ಯೆಗೆ ಪರಿಹಾರ ಸಿಗದಿದ್ದರೆ ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಸಮಸ್ಯೆ ಪರಿಹರಿಸಲು ಕ್ರಮ ವಹಿಸಲಾಗುತ್ತದೆ. ಯಾವುದೇ ಸಮಸ್ಯೆಯನ್ನು ನಿಗದಿತ ಕಾಲಮಿತಿಯಲ್ಲಿ ಪರಿಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.
ಜನರು ಸರ್ಕಾರದ ಇಲಾಖೆಗಳಿಗೆ ಅಲೆದಾಡಬಾರದು. ಸರ್ಕಾರದ ಸೇವೆಯನ್ನು ಜನರಿಗೆ ತಲುಪಿಸಲು ಅಧಿಕಾರಿಗಳು ಮುಂದಾಗಬೇಕು. ಆ ನಿಟ್ಟಿನಲ್ಲಿ ಪ್ರಜಾ ಆಂದೋಲನ ಸಭೆಗಳನ್ನು ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಯೋಜಿಸಲಾಗುವುದು. ಕಾನೂನು ಬಾಹಿರ ಯಾವುದೇ ಕೆಲಸವನ್ನು ಮಾಡುವುದಕ್ಕೆ ಬರುವುದಿಲ್ಲ. ಕಾನೂನಿನಡಿಯಲ್ಲಿ ನಾವೆಲ್ಲರೂ ಕಾರ್ಯ ನಿರ್ವಹಿಸಬೇಕು ಎಂದು ಸಚಿವರು ಹೇಳಿದರು.71 ಅರ್ಜಿಗಳ ಸಲ್ಲಿಕೆ:
ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ, ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಪಂ ಸಿಇಒ ಭುವನೇಶ ಪಾಟೀಲ, ಎಸ್ಪಿ ಗುಂಜನ್ ಆರ್ಯ, ಉಪ ವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ, ಡಿಎಚ್‌ಒ ಡಾ. ಪರಶುರಾಮ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮಸ್ಥರು ಇತರರು ಉಪಸ್ಥಿತರಿದ್ದರು.