ಹಾವೇರಿ: ಕುಲಗುರು ಶ್ರೀ ಮಡಿವಾಳ ಮಾಚಿದೇವರ ತತ್ವಾದರ್ಶಗಳು ಎಲ್ಲರಿಗೂ ದಾರಿದೀಪವಾಗಿವೆ. ಇಂದಿನ ಯುವ ಸಮೂಹ ಅವರ ಜೀವನದ ಕುರಿತು ತಿಳಿದುಕೊಳ್ಳಬೇಕು ಎಂದು ಶಾಸಕರು ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ, ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ, ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ. ಮೈದೂರ, ಕೆ.ಸಿ.ಸಿ. ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಉಪ ವಿಭಾಗಾಧಿಕಾರಿ ಚೆನ್ನಪ್ಪ, ತಹಸೀಲ್ದಾರ್ ಶರಣಮ್ಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ. ಚಿನ್ನಿಕಟ್ಟಿ, ಟಿ.ಎಂ.ಎ.ಇ.ಎಸ್. ಬಿ.ಇಡಿ. ಕಾಲೇಜ್ ಪ್ರಾಚಾರ್ಯ ಡಾ. ಬಸನಗೌಡ್ರ, ಹಾವೇರಿ ಜಿಲ್ಲಾ ಮಡಿವಾಳ ಮಾಚಿದೇವ ಸಮಾಜ ಸೇವಾ ಸಂಘದ ಅಧ್ಯಕ್ಷ ಸುರೇಶ ಮಡಿವಾಳರ ಇತರರು ಉಪಸ್ಥಿತರಿದ್ದರು.