ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ಅವಮಾನಕಾರಿ : ಕೃಷ್ಣಮೂರ್ತಿ ಆಚಾರ್ಯ

KannadaprabhaNewsNetwork |  
Published : Apr 28, 2026, 02:30 AM IST
ಸಚಿವ ಶಿವರಾಜ ತಂಗಡಗಿ | Kannada Prabha

ಸಾರಾಂಶ

ಸಿಇಟಿ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಂದ ಬಲವಂತವಾಗಿ ಜನಿವಾರ ತೆಗೆಸಿದ ಘಟನೆ ತೀರಾ ಅವಮಾನಕಾರಿಯಾಗಿದೆ ಎಂದು ರಾಜ್ಯ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ ಅವರು ತೀವ್ರವಾಗಿ ಖಂಡಿಸಿದ್ದಾರೆ.

ಉಡುಪಿ: ಸಿಇಟಿ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಂದ ಬಲವಂತವಾಗಿ ಜನಿವಾರ ತೆಗೆಸಿದ ಘಟನೆ ತೀರಾ ಅವಮಾನಕಾರಿಯಾಗಿದೆ ಎಂದು ರಾಜ್ಯ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ ಅವರು ತೀವ್ರವಾಗಿ ಖಂಡಿಸಿದ್ದಾರೆ.

ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ನಡೆದ ಸಿಇಟಿ ಪರೀಕ್ಷೆ ಸಂದರ್ಭ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರ ತೆಗೆಸಿರುವುದು ಬ್ರಾಹ್ಮಣ ಸಮುದಾಯದ ವಿರುದ್ಧ ಹೆಣೆಯುತ್ತಿರುವ ವ್ಯವಸ್ಥಿತ ಜಾಲವಾಗಿದೆ. ಈ ಘಟನೆ ಬ್ರಾಹ್ಮಣ ಸಮಾಜದ ಧಾರ್ಮಿಕ ಹಕ್ಕು, ಸಂಸ್ಕೃತಿ ಹಾಗೂ ಆತ್ಮಗೌರವಕ್ಕೆ ಧಕ್ಕೆ ತಂದಿದೆ.ತಲೆ ತಲಾಂತದಿಂದ ನಡೆದು ಬಂದ ಸಂಪ್ರದಾಯದಂತೆ ಬ್ರಾಹ್ಮಣ ಗಂಡು ಮಕ್ಕಳು ಜನಿವಾರ, ಹಿಂದೂ ಸಮುದಾಯದ ಹೆಣ್ಣು ಮಕ್ಕಳು ಹಣೆಗೆ ಕುಂಕುಮ ಅಥವಾ ಬಿಂದಿ ಧರಿಸುವುದು, ತಲೆಗೆ ಹೂ ಮುಡಿಯುವುದು, ಮೂಗುತಿ, ಕಿವಿಯೋಲೆ, ಕಾಲು ಗೆಜ್ಜೆ, ಬಳೆ ಧರಿಸುತ್ತಾರೆ. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವುದು ಸಮಸ್ತ ಹಿಂದೂ ಸಮುದಾಯದರು ತಲೆ ತಗ್ಗಿಸುವಂತಾಗಿದೆ ಎಂದವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.‌

ಜನಿವಾರವು ಬ್ರಾಹ್ಮಣ ಸಮುದಾಯದ ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಗೌರವದ ಪ್ರತೀಕವಾಗಿದೆ. ಅದನ್ನು ಅವಮಾನಿಸುವ ಯಾವುದೇ ನಡೆ ಸಮಾಜ ಸಹಿಸುವುದಿಲ್ಲ. ತಪ್ಪಿತಸ್ಥರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಕೃಷ್ಣಮೂರ್ತಿ ಆಚಾರ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶರಣ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಅರಮೇರಿ ಶ್ರೀ
ಬಲ್ಲಮಾವಟಿ ನಾಲ್ನಾಡ ಹಾಕಿ ಕ್ಲಬ್‌ ತರಬೇತಿ ಶಿಬಿರ