ರಾಜ್ಯದಲ್ಲಿ ಕ್ರೈಮ್ ಪಾಸಿಟಿವಿಟಿ ರೇಟ್ ಹೆಚ್ಚಳ ಆತಂಕಕಾರಿ

KannadaprabhaNewsNetwork |  
Published : Apr 23, 2024, 12:49 AM IST
೨೨ಬಿಹೆಚ್‌ಆರ್ ೨: ಬಾಳೆಹೊನ್ನೂರಿನಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸಪೂಜಾರಿ ಪರ ಮಾಜಿ ಸಚಿವ ಡಿ.ಎನ್.ಜೀವರಾಜ್ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಮತ ಯಾಚನೆ ಮಾಡಿದರು. ಟಿ.ಎಂ.ಉಮೇಶ್, ಭಾಸ್ಕರ್ ವೆನಿಲ್ಲಾ, ಪ್ರಭಾಕರ್ ಪ್ರಣಸ್ವಿ, ಕೆ.ಆರ್.ದೀಪಕ್, ಕೆ.ಟಿ.ಗೋವಿಂದೇಗೌಡ ಇದ್ದರು. | Kannada Prabha

ಸಾರಾಂಶ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಎಲ್ಲಾ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿರುವುದಕ್ಕಿಂತ ರಾಜ್ಯ ದಲ್ಲಿ ಕ್ರೈಮ್ ಪಾಸಿಟಿವಿಟಿ ರೇಟ್ ಹೆಚ್ಚಾಗಿದೆ. ಇದು ಆತಂಕಕಾರಿ ವಿಷಯ ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಹೇಳಿದರು.

ಬಿಜೆಪಿ ಅಭ್ಯರ್ಥಿ ಕೋಟ ಪರ ಮಾಜಿ ಸಚಿವ ಜೀವರಾಜ್ ರೋಡ್ ಶೋಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರು

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಎಲ್ಲಾ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿರುವುದಕ್ಕಿಂತ ರಾಜ್ಯ ದಲ್ಲಿ ಕ್ರೈಮ್ ಪಾಸಿಟಿವಿಟಿ ರೇಟ್ ಹೆಚ್ಚಾಗಿದೆ. ಇದು ಆತಂಕಕಾರಿ ವಿಷಯ ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಹೇಳಿದರು. ಪಟ್ಟಣದಲ್ಲಿ ಬಿಜೆಪಿ, ಜೆಡಿಎಸ್ ಪಕ್ಷದಿಂದ ಮೈತ್ರಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರ ರೋಡ್ ಶೋ, ಚುನಾವಣಾ ಪ್ರಚಾರದಲ್ಲಿ ಮಾತನಾಡಿದರು. ರಾಜ್ಯದಲ್ಲಿ ಸರ್ಕಾರ ಇದೆಯೇ ಎಂಬುದನ್ನು ಯೋಚಿಸುವ ಸ್ಥಿತಿ ನಿರ್ಮಾಣ ವಾಗಿದೆ. ಇಂತಹ ದುಃಸ್ಥಿತಿ ಬಂದ ಹಿನ್ನೆಲೆಯಲ್ಲಿ ರಾಜ್ಯದ ಮತದಾರರು ಈ ಬಾರಿ ಬಿಜೆಪಿಯವನ್ನು ಸಂಪೂರ್ಣವಾಗಿ ಬೆಂಬಲಿಸುವ ಭರವಸೆ ಇದೆ.

ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ನರೇಂದ್ರ ಮೋದಿ ಪುನಃ ಪ್ರಧಾನಿ ಯಾಗಬೇಕು ಹಾಗೂ ಕ್ಷೇತ್ರದ ಸರಳ ಸಜ್ಜನ ಅಭ್ಯರ್ಥಿ ಕೋಟಾ ಶ್ರೀನಿವಾಸಪೂಜಾರಿ ಅವರನ್ನು ಗೆಲ್ಲಿಸಬೇಕು ಎಂದು ಮತದಾರರಲ್ಲಿ ಮನವಿ ಮಾಡುತ್ತ ಪ್ರಚಾರ ನಡೆಸಲಾಗುತ್ತಿದೆ.ಈ ಚುನಾವಣೆಯಲ್ಲಿಯೂ ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಭೆ ನಡೆಸಲಾಗಿದೆ. ಈಗಾಗಲೇ ಜನರಿಂದ ಅಪಾರ ಬೆಂಬಲ ದೊರೆತಿದ್ದು, ಈ ಬಾರಿ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಶೃಂಗೇರಿ ಕ್ಷೇತ್ರದಲ್ಲಿ ಈ ಬಾರಿ 30 ಸಾವಿರಕ್ಕೂ ಅಧಿಕ ಮತಗಳ ಅಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ದೊರೆಯಲಿದೆ.ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಜನರನ್ನು ಗೊಂದಲಕ್ಕೆ ದೂಡುವ ಕೆಲಸ ಮಾಡುತ್ತಿದ್ದು, ಶೃಂಗೇರಿ ಕ್ಷೇತ್ರದ ಮತದಾರರು ಪ್ರಜ್ಞಾ ವಂತರಾಗಿದ್ದು, ದೇಶಕ್ಕಾಗಿ ಈ ಬಾರಿ ನರೇಂದ್ರ ಮೋದಿ ಅವರಿಗೆ ಮತ ನೀಡುವ ವಿಶ್ವಾಸವಿದೆ. ಇಂದು ನಮ್ಮ ಮನೆ ಮಕ್ಕಳನ್ನು ರಕ್ಷಣೆ ಮಾಡುವ ಸ್ಥಿತಿ ಹೇಗೆ ಎಂಬುವ ಅನಿವಾರ್ಯ ಸನ್ನಿವೇಶ ರಾಜ್ಯದಲ್ಲಿ ಉದ್ಭವವಾಗಿದೆ ಎಂದರು. ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಡಿ.ಎನ್.ಜೀವರಾಜ್ ನೇತೃತ್ವದಲ್ಲಿ ಪಟ್ಟಣದ ಕೊಪ್ಪ ರಸ್ತೆಯಿಂದ ಚಿಕ್ಕಮಗಳೂರಿನ ರೋಟರಿ ಸರ್ಕಲ್‌ವರೆಗೆ ರೋಡ್ ಶೋ ನಡೆಸಿ ಚುನಾವಣಾ ಪ್ರಚಾರ ನಡೆಸಿದರು. -- ಬಾಕ್ಸ್-- -

ಕಾಂಗ್ರೆಸ್ ಅಭ್ಯರ್ಥಿ ರಾಷ್ಟ್ರೀಯ ನಾಯಕರ ಹೆಸರಿನಲ್ಲಿ ಓಟು ಕೇಳುತ್ತಿಲ್ಲಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಾನು ರಾಷ್ಟ್ರೀಯ ನಾಯಕರ ಹೆಸರಿನಲ್ಲಿ ಓಟು ಕೇಳುವುದಿಲ್ಲ. ಕೇವಲ ನನ್ನ ಹೆಸರಿನ ಮೇಲೆ ಓಟು ಕೇಳುತ್ತೇನೆ ಎಂದು ಹೇಳುತ್ತಿದ್ದಾರೆ. ಕಾಂಗ್ರೆಸ್ಸಿಗರು ಈ ಬಗ್ಗೆ ಯೋಚನೆ ಮಾಡಬೇಕಿದೆ ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಸಲಹೆ ನೀಡಿದರು.ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ರಾಜ್ಯದ ಅಗ್ರಗಣ್ಯ ನಾಯಕರು. ನಮ್ಮ ರಾಜ್ಯದವರು, ದಲಿತ ಮುಖಂಡರು. ನಾವು ಅದನ್ನು ಹೆಮ್ಮೆ, ಸಂಭ್ರಮ ಪಡಬೇಕು. ಅವರ ಹೆಸರನ್ನೇ ಹೇಳಿ ಕಾಂಗ್ರೆಸ್ ಅಭ್ಯರ್ಥಿ ಮತ ಕೇಳುತ್ತಿಲ್ಲ. ಇದು ವಿಪರ್ಯಾಸ ಎಂದರು.ಕ್ಷೇತ್ರದಲ್ಲಿ ಜೆಡಿಎಸ್ ನಾಯಕ ಸುಧಾಕರಶೆಟ್ಟಿ ಅವರನ್ನು ಬಿಜೆಪಿ ಕಡೆಗಣಿಸುತ್ತಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಜೀವರಾಜ್, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಕರಪತ್ರಗಳು ಈ ಹಿಂದೆಯೇ ಮೈತ್ರಿಗೂ ಮೊದಲೇ ಮುದ್ರಣ ವಾಗಿದ್ದು, ಇಲ್ಲಿ ಯಾವುದೇ ನಾಯಕರ ಫೋಟೋ ಬಳಸಿಲ್ಲ ಎಂಬ ಪ್ರಶ್ನೆಯಿಲ್ಲ. ಶೃಂಗೇರಿಯ ಜೆಡಿಎಸ್ ನಾಯಕ ಸುಧಾಕರ್ ಶೆಟ್ಟಿ,ಬಿಜೆಪಿ ಮುಖಂಡರು ನಂಬಿಕೆ, ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದು, ಸುಧಾಕರ್ ಶೆಟ್ಟಿಯವರು ಪ್ರಾಮಾಣಿಕವಾಗಿ ಬಿಜೆಪಿ ಪರ ಕೆಲಸ ಮಾಡುತ್ತಿದ್ದು, ಈ ಬಾರಿ ದೇಶಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ನಾನು ಮತ್ತು ಸುಧಾಕರ್ ಶೆಟ್ಟಿ ಒಂದೇ ವೇದಿಕೆಯನ್ನು ಎಲ್ಲೆಡೆ ಹಂಚಿಕೊಳ್ಳುತ್ತಿದ್ದೇವೆ ಎಂದರು.೨೨ಬಿಹೆಚ್‌ಆರ್ ೨:

ಬಾಳೆಹೊನ್ನೂರಿನಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಪರ ಮಾಜಿ ಸಚಿವ ಡಿ.ಎನ್.ಜೀವರಾಜ್ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಮತ ಯಾಚನೆ ಮಾಡಿದರು. ಟಿ.ಎಂ.ಉಮೇಶ್, ಭಾಸ್ಕರ್ ವೆನಿಲ್ಲಾ, ಪ್ರಭಾಕರ್ ಪ್ರಣಸ್ವಿ, ಕೆ.ಆರ್.ದೀಪಕ್, ಕೆ.ಟಿ.ಗೋವಿಂದೇಗೌಡ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು