ಜನರ ಬಳಿ ಮಾಹಿತಿ ಆಯೋಗ ಕೊಂಡೊಯ್ಯುಬೇಕು

KannadaprabhaNewsNetwork |  
Published : Jun 01, 2025, 01:53 AM IST
31ಕೆಪಿಎಲ್21 ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಮಾಹಿತಿ ಹಕ್ಕು ಅಧಿನಿಯಮ-2005ರ ಕುರಿತು ಕೊಪ್ಪಳ ವಿಶ್ವವಿದ್ಯಾಲಯದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಕಾರ್ಯಾಗಾರ | Kannada Prabha

ಸಾರಾಂಶ

ಪ್ರಜಾಪ್ರಭುತ್ವ ಪ್ರಬಲವಾಗಬೇಕು. ಜನರಿಗೆ ಸರ್ಕಾರದ ಮಾಹಿತಿ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ನೇತೃತ್ವದ ಸರ್ಕಾರ 2005ರ ಅ. 5ರಂದು ಆರ್‌ಟಿಐ ಕಾಯ್ದೆ ಜಾರಿಗೊಳಿಸಿತು. ಈ ಕಾಯ್ದೆಯನ್ನು ಜಾರಿ ತಂದ ಮೊದಲ ರಾಜ್ಯ ಕರ್ನಾಟಕವಾಗಿದ್ದು ಈ ಕಾಯ್ದೆ ಬಗ್ಗೆ ಜನರಿಗೆ ಅರಿವು ಮೂಡಿಸಲು ಮಾಹಿತಿ ಆಯೋಗವನ್ನು ಜನರ ಬಳಿ ಕೊಂಡೊಯ್ಯುವ ಚಿಂತನೆ ನಡೆದಿದೆ.

ಕೊಪ್ಪಳ:

ಮಾಹಿತಿ ಹಕ್ಕು ಅಧಿನಿಯಮ ಕಾಯ್ದೆ ಕುರಿತು ಜನರಿಗೆ ಅರಿವು ಮೂಡಿಸುವುದು ಅತ್ಯವಶ್ಯಕವಾಗಿದ್ದು, ಮಾಹಿತಿ ಆಯೋಗವನ್ನು ಅವರ ಬಳಿ ಕೊಂಡೊಯ್ಯುವ ಚಿಂತನೆಯನ್ನು ಆಯೋಗದಿಂದ ಮಾಡಲಾಗುತ್ತಿದೆ ಎಂದು ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತ ರುದ್ರಣ್ಣ ಹರ್ತಿಕೋಟೆ ಹೇಳಿದರು.

ನಗರದ ಸಾಹಿತ್ಯ ಭವನದಲ್ಲಿ ಶನಿವಾರ ಮಾಹಿತಿ ಹಕ್ಕು ಅಧಿನಿಯಮ-2005ರ ಕುರಿತು ಕೊಪ್ಪಳ ವಿಶ್ವವಿದ್ಯಾಲಯದ ವತಿಯಿಂದ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದರು.

ಪ್ರಜಾಪ್ರಭುತ್ವ ಪ್ರಬಲವಾಗಬೇಕು. ಜನರಿಗೆ ಸರ್ಕಾರದ ಮಾಹಿತಿ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ನೇತೃತ್ವದ ಸರ್ಕಾರ 2005ರ ಅ. 5ರಂದು ಆರ್‌ಟಿಐ ಕಾಯ್ದೆ ಜಾರಿಗೊಳಿಸಿತು. ಈ ಕಾಯ್ದೆಯನ್ನು ಜಾರಿ ತಂದ ಮೊದಲ ರಾಜ್ಯ ಕರ್ನಾಟಕವಾಗಿದ್ದು ಈ ಕಾಯ್ದೆ ಬಗ್ಗೆ ಜನರಿಗೆ ಅರಿವು ಮೂಡಿಸಲು ಮಾಹಿತಿ ಆಯೋಗವನ್ನು ಜನರ ಬಳಿ ಕೊಂಡೊಯ್ಯುವ ಚಿಂತನೆ ನಡೆದಿದೆ. ಇದರ ಜತೆಗೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಕಾನೂನು ಅರಿವು ಮೂಡಿಸಲಾಗುತ್ತಿದೆ. ಶಿಕ್ಷಣ ಹಂತದಲ್ಲಿಯೇ ಮಕ್ಕಳಿಗೂ ಇದರ ಅರಿವು ಮೂಡಿಸಬೇಕಿದ್ದು ಪ್ರಸ್ತಾವನೆ ಸಲ್ಲಿಸಲು ಶಿಕ್ಷಣ ಇಲಾಖೆಯೊಂದಿಗೆ ಚರ್ಚಿಸಲಾಗಿದೆ. ಕಾಯ್ದೆ ಬಗ್ಗೆ ಎಲ್ಲರಲ್ಲಿಯೂ ಸ್ಪಷ್ಟ ಮಾಹಿತಿ ಇದ್ದಾಗ ಮಾತ್ರ ಅದು ಪರಿಣಾಮಕಾರಿಯಾಗಿ ಅನುಷ್ಠಾನವಾಗಲು ಸಾಧ್ಯವಾಗುತ್ತದೆ ಎಂದರು.

ರಾಜ್ಯ ಮಾಹಿತಿ ಆಯುಕ್ತ ಡಾ. ಹರೀಶಕುಮಾರ ಮಾತನಾಡಿ, ರಾಜರ ಆಳ್ವಿಕೆ ಕಾಲದಲ್ಲಿ ಜನರು ಪ್ರಶ್ನಿಸುವುದಾಗಲಿ ಅಥವಾ ಅವರನ್ನು ನೋಡುತ್ತಿರಲಿಲ್ಲ. ದೊಡ್ಡ ಸಮಾರಂಭದಲ್ಲಿ ವೇಳೆ ಮಾತ್ರ ಅವರ ಮುಖ ನೋಡಬೇಕಿತ್ತು. ಆದರೆ, ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಾಗಿಲ್ಲ ಎಂದರು.

ರಾಜ್ಯ ಮಾಹಿತಿ ಆಯುಕ್ತ ರಾಜಶೇಖರ್ ಎಸ್. ಮಾತನಾಡಿ, ದೇಶದಲ್ಲಿ ಮೊದಲು ಸಂಸದರು, ರಾಜ್ಯಸಭೆ ಸದಸ್ಯರು, ಶಾಸಕರು, ವಿಧಾನ ಪರಿಷತ್‌ ಸದಸ್ಯರು ಹಾಗೂ ಅಧಿಕಾರಿಗಳಿಗೆ ಮಾತ್ರ ಮಾಹಿತಿ ಸಿಗುತ್ತಿತ್ತು. ಆದರೆ, 2005ರಲ್ಲಿ ಆರ್‌ಟಿಐ ಕಾಯ್ದೆ ಜಾರಿಗೆ ಬಂದ ಬಳಿಕ ಸಾಮಾನ್ಯರಿಗೂ ಮಾಹಿತಿ ಸಿಗುವಂತೆ ಆಗಿದೆ ಎಂದು ಹೇಳಿದರು.

ರಾಜ್ಯ ಮಾಹಿತಿ ಆಯುಕ್ತ ಬದ್ರುದ್ದೀನ್ ಕೆ. ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ. ಬಿ.ಕೆ. ರವಿ ಕಾರ್ಯಕ್ರಮ ಉದ್ಘಾಟಿಸಿದರು.

ಗಮನ ಸೆಳೆದ ಸಾಂಸ್ಕೃತಿಕ ಕಾರ್ಯಕ್ರಮ:

ವಿವಿ ವಿದ್ಯಾರ್ಥಿಗಳಿಂದ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಕುರಿತಾದ ಮತ್ತು ಸಂವಿಧಾನದ ಪ್ರಸ್ತಾಪನೆಯ ಜಾಗೃತಿ ಮೂಡಿಸುವ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆದವು. ಕುಲಪತಿ ಪ್ರೊ. ಬಿ.ಕೆ. ರವಿ, ಭಾರತ ಸಂವಿಧಾನದ ಪ್ರಸ್ತಾವನೆ ಬೋಧಿಸಿದರು. ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರು ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು.

ಕಾರ್ಯಾಗಾರದಲ್ಲಿ ಕುಲಸಚಿವ ಪ್ರೊ. ಕೆ.ವಿ. ಪ್ರಸಾದ, ಗಂಗಾವತಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಮುಮ್ತಾಜ್ ಬೇಗಂ, ಯಲಬುರ್ಗಾ ಸ್ನಾತಕೋತ್ತರ ಕೇಂದ್ರದ ಆಡಳಿತಾಧಿಕಾರಿ ಕೆ.ಎಚ್. ಛತ್ರದ, ಕೊಪ್ಪಳ ವಿವಿ ಆಡಳಿತಾಧಿಕಾರಿ ತಿಮ್ಮಾರೆಡ್ಡಿ ಮೇಟಿ ಮತ್ತು ಸಿಂಡಿಕೇಟ್ ಹಾಗೂ ಆಕಾಡೆಮಿಕ್ ಕೌನ್ಸಿಲ್ ಸದಸ್ಯರು, ವಿದ್ಯಾರ್ಥಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

PREV

Recommended Stories

ನನ್ನ ಬಗ್ಗೆ ಮಾತನಾಡುವವರಿಗೆ ಸಿಗಂದೂರು ಚೌಡೇಶ್ವರಿ ತಕ್ಕ ಬುದ್ಧಿ ಕಲಿಸಲಿದ್ದಾಳೆ : ಮಧು ಬಂಗಾರಪ್ಪ
ಡಾ.ಪ್ರಭಾಕರ್‌ ಕೋರೆ 78ನೇ ಜನ್ಮದಿನ ಅರ್ಥಪೂರ್ಣ ಆಚರಣೆ