- ಸಾಂವಿಧಾನಿಕ ಆಶಯಗಳು- ಕನ್ನಡ ಸಾಹಿತ್ಯ ಕುರಿತು ವಿಚಾರ ಸಂಕಿರಣದಲ್ಲಿ ಎಸ್ಸೆಸ್ಸೆಂ
ಕನ್ನಡಪ್ರಭ ವಾರ್ತೆ ದಾವಣಗೆರೆ
ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿ ಅವರ ಸಮಾಜ ಸೇವೆ ಅನನ್ಯವಾದುದು. ಕೇವಲ ಧಾರ್ಮಿಕ ಚಿಂತನೆ ಅಷ್ಟೇ ಅಲ್ಲ. ಪ್ರಗತಿಪರ ಚಿಂತನೆ ಮೂಲಕ ಸಮಾಜಕ್ಕೆ ದಾರಿದೀಪವಾಗಿದ್ದಾರೆ. ದೇಶದ ಸಂವಿಧಾನ ಆಶಯಗಳನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಕಾರ್ಯಕ್ರಮಗಳ ಆಯೋಜನೆ ಶ್ಲಾಘನೀಯ ಎಂದು ತೋಟಗಾರಿಕೆ, ಗಣಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದರು.ಶನಿವಾರ ಬೆಂಗಳೂರು ದಕ್ಷಿಣ ತಾಲೂಕಿನ ಕೇತೋಹಳ್ಳಿಯ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದಲ್ಲಿ ಶ್ರೀ ಕನಕ ಎಜುಕೇಷನ್ ಲೀಡರ್ಸ್ ಫೋರಂ ವತಿಯಿಂದ ಪ್ರತಿ ತಿಂಗಳು 4ನೇ ಶನಿವಾರದಂದು ಹಮ್ಮಿಕೊಳ್ಳುವ ತಲ್ಲಣಿಸದಿರು ಮನವೇ ಕಾರ್ಯಕ್ರಮದಡಿ ಸಾಂವಿಧಾನಿಕ ಆಶಯಗಳು ಮತ್ತು ಕನ್ನಡ ಸಾಹಿತ್ಯ ವಿಷಯದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿ ಆಶೀರ್ವಚನ ನೀಡಿ, ಸಂವಿಧಾನ ಮತ್ತು ಕನ್ನಡ ಅಸ್ಮಿತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.
ಈ ಸಂದರ್ಭ ತರೀಕೆರೆ ಶಾಸಕ ಜಿ.ಎಚ್.ಶ್ರೀನಿವಾಸ್, ನಂದಿಗಾವಿ ಶ್ರೀನಿವಾಸ್, ದಾವಣಗೆರೆ- ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಮತ್ತಿತರರು ಭಾಗವಹಿಸಿದ್ದರು.
-25ಕೆಡಿವಿಜಿ32.ಜೆಪಿಜಿ: