ರಾಜಕಾರಣಕ್ಕೂ ಮುಖ್ಯವಾದುದು ರೈತರ ಹಿತಾಸಕ್ತಿ

KannadaprabhaNewsNetwork |  
Published : Oct 15, 2026, 01:45 AM IST
14ಎಚ್ಎಸ್ಎನ್20 :  | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದ್ದು, ರೈತರು ಹಾಗೂ ಜಾನುವಾರುಗಳು ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ರಾಜಕೀಯ ವಿಚಾರಗಳಿಗಿಂತ ಜನರ ಬದುಕುಳಿಸುವುದಕ್ಕೆ ಆದ್ಯತೆ ನೀಡಬೇಕು. ರೈತರ ಸಮಸ್ಯೆಗಳ ಬಗ್ಗೆ ಗಮನಹರಿಸುವುದನ್ನು ಬಿಟ್ಟು ಸ್ಟಿಂಗ್ ಆಪರೇಷನ್‌ಗಳ ವಿಚಾರಕ್ಕೆ ಆದ್ಯತೆ ನೀಡುವುದು ಸರಿಯಲ್ಲ. ಜಿಲ್ಲೆಯ ಜನರು ನನ್ನನ್ನು ೩೦ ವರ್ಷಗಳಿಂದ ಶಾಸಕರನ್ನಾಗಿ ಮಾಡಿದ್ದಾರೆ. ದೇವೇಗೌಡರಿಂದ ಹಿಡಿದು ನಮ್ಮನ್ನು, ನಮ್ಮ ಪಕ್ಷವನ್ನು ಬೆಳೆಸಿಕೊಂಡು ಬಂದಿದ್ದಾರೆ. ಅವರ ಋಣ ತೀರಿಸುವುದು ನನ್ನ ಕರ್ತವ್ಯ. ಮೊದಲು ನಮ್ಮ ಜನರನ್ನು ಉಳಿಸಿಕೊಳ್ಳೋಣ ಎಂದರು.

ಕನ್ನಡಪ್ರಭ ವಾರ್ತೆ ಹಾಸನ

ರಾಜಕೀಯ ಮಾಡುವುದಕ್ಕಿಂತ ನಮಗೆ ಈಗ ರೈತರ ಸಂಕಷ್ಟಗಳಿಗೆ ಸ್ಪಂದಿಸುವುದೇ ಮೊದಲ ಆದ್ಯತೆಯಾಗಿದೆ. ರೈತರನ್ನು ಹಾಗೂ ಜಾನುವಾರುಗಳನ್ನು ಸಂಕಷ್ಟದಿಂದ ಪಾರು ಮಾಡುವುದು ಮುಖ್ಯ. ಇನ್ನು ಹಾಸನಾಂಬೆ ಜಾತ್ರೆಯ ಟೆಂಡರ್ ವೆಚ್ಚದಲ್ಲಿ ಪಾರದರ್ಶಕತೆ ಇಲ್ಲ. ಅಧಿಕಾರಿಗಳು ಗುತ್ತಿಗೆದಾರನನ್ನು ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದ್ದು, ರೈತರು ಹಾಗೂ ಜಾನುವಾರುಗಳು ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ರಾಜಕೀಯ ವಿಚಾರಗಳಿಗಿಂತ ಜನರ ಬದುಕುಳಿಸುವುದಕ್ಕೆ ಆದ್ಯತೆ ನೀಡಬೇಕು. ರೈತರ ಸಮಸ್ಯೆಗಳ ಬಗ್ಗೆ ಗಮನಹರಿಸುವುದನ್ನು ಬಿಟ್ಟು ಸ್ಟಿಂಗ್ ಆಪರೇಷನ್‌ಗಳ ವಿಚಾರಕ್ಕೆ ಆದ್ಯತೆ ನೀಡುವುದು ಸರಿಯಲ್ಲ. ಜಿಲ್ಲೆಯ ಜನರು ನನ್ನನ್ನು ೩೦ ವರ್ಷಗಳಿಂದ ಶಾಸಕರನ್ನಾಗಿ ಮಾಡಿದ್ದಾರೆ. ದೇವೇಗೌಡರಿಂದ ಹಿಡಿದು ನಮ್ಮನ್ನು, ನಮ್ಮ ಪಕ್ಷವನ್ನು ಬೆಳೆಸಿಕೊಂಡು ಬಂದಿದ್ದಾರೆ. ಅವರ ಋಣ ತೀರಿಸುವುದು ನನ್ನ ಕರ್ತವ್ಯ. ಮೊದಲು ನಮ್ಮ ಜನರನ್ನು ಉಳಿಸಿಕೊಳ್ಳೋಣ ಎಂದರು.ಒಬ್ಬನೇ ವ್ಯಕ್ತಿಗೆ ಟೆಂಡರ್‌ ಏಕೆ?

ಹಾಸನಾಂಬೆ ದೇವಿಯ ಜಾತ್ರಾ ಮಹೋತ್ಸವದ ಖರ್ಚು-ವೆಚ್ಚದ ವಿವರಗಳನ್ನು ಗಮನಿಸಿ ಬೆಚ್ಚಿಬಿದ್ದಿದ್ದೇನೆ. ಜಾತ್ರೆಯ ಹೆಸರಿನಲ್ಲಿ ಹತ್ತಾರು ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದ್ದು, ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಇಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ಜಾತ್ರಾ ಮಹೋತ್ಸವದ ವೆಚ್ಚದ ವಿವರಗಳನ್ನು ಪ್ರಶ್ನಿಸಿದರಲ್ಲದೆ, ದೇವಸ್ಥಾನದ ಟೆಂಡರ್‌ಗಳನ್ನು ಪದೇಪದೇ ಒಬ್ಬರಿಗೇ ನೀಡಲಾಗುತ್ತಿದೆ. ಟೆಂಡರ್‌ನಲ್ಲಿ ಭಾಗವಹಿಸಲು ಮುಂದಾಗುವ ಇತರ ಗುತ್ತಿಗೆದಾರರಿಗೆ ಬೆದರಿಕೆ ಹಾಕಿ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪವನ್ನೂ ಮಾಡಿದರು.

ಜಿಲ್ಲಾಡಳಿತವು ಗುತ್ತಿಗೆದಾರರನ್ನು ಕೂರಿಸಿಕೊಂಡು ಟೆಂಡರ್ ಕರೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಎಲ್ಲ ವಿಚಾರಗಳ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ತನಿಖೆ ನಡೆಸುತ್ತಾರೆಯೇ ಎಂದು ಪ್ರಶ್ನಿಸಿದರು. ಟೆಂಡರ್ ಹಂಚಿಕೆಯಲ್ಲಿನ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಬೇಕು. ಹಾಸನಾಂಬೆ ಜಾತ್ರಾ ಮಹೋತ್ಸವದ ಸಭೆಗಳಿಗೆ ಪತ್ರಕರ್ತರನ್ನು ಹೊರಗಿಟ್ಟು ಗುತ್ತಿಗೆದಾರರನ್ನು ಕೂರಿಸಿಕೊಂಡು ಸಭೆ ನಡೆಸಲಾಗುತ್ತಿದೆ. ಜಾತ್ರೆಯ ಆಹ್ವಾನ ಪತ್ರಿಕೆಯನ್ನೂ ತಮಗೆ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಬರದ ಪರಿಣಾಮ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೃಷಿ ಚಟುವಟಿಕೆಗಳು ಹದಗೆಟ್ಟಿರುವ ಸಂದರ್ಭದಲ್ಲಿ ಜಾತ್ರಾ ಮಹೋತ್ಸವಕ್ಕೆ ಹತ್ತಾರು ಕೋಟಿ ರೂಪಾಯಿ ಖರ್ಚು ಮಾಡುತ್ತಿರುವುದು ಎಷ್ಟು ಸಮಂಜಸ ಎಂದು ರೇವಣ್ಣ ಪ್ರಶ್ನಿಸಿದರು. ಜಾತ್ರಾ ಮಹೋತ್ಸವವು ಭಕ್ತಿಯ ಆಚರಣೆಯಾಗಬೇಕೇ ಹೊರತು ಹಣದ ದುರುಪಯೋಗದ ಆರೋಪಗಳಿಗೆ ಅವಕಾಶ ನೀಡುವ ಕಾರ್ಯಕ್ರಮವಾಗಬಾರದು. ಜಾತ್ರೆಯ ಖರ್ಚು-ವೆಚ್ಚ, ಟೆಂಡರ್ ಹಂಚಿಕೆ ಹಾಗೂ ಸಭೆಗಳ ನಿರ್ವಹಣೆಯಲ್ಲಿ ಪಾರದರ್ಶಕತೆ ಇರಬೇಕು. ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಜನರಿಗೆ ಸ್ಪಷ್ಟ ಮಾಹಿತಿ ನೀಡಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ನಾಗರಾಜು, ಜಿಲ್ಲಾ ಜೆಡಿಎಸ್ ಅಧ್ಯಕ್ಷ ನಟರಾಜ್, ಜಿಲ್ಲಾ ಜೆಡಿಎಸ್ ವಕ್ತಾರ ರಘು ಹೊಂಗೆರೆ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ಎಸ್. ದ್ಯಾವೇಗೌಡ ಮತ್ತು ದುದ್ದ ಲಕ್ಷ್ಮಣಗೌಡ, ಹಾಸನ ಹಾಲು ಒಕ್ಕೂಟದ ನಿರ್ದೇಶಕ ಚನ್ನೇಗೌಡ, ಜೆಡಿಎಸ್ ಮುಖಂಡರಾದ ಬೋರೇಗೌಡ, ಕೌಶಿಕ ಅಶೋಕ್ ಹಾಗೂ ಹುಲ್ಲಹಳ್ಳಿ ರಾಮಣ್ಣ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಸರಾ ಸಂಭ್ರಮಕ್ಕೆ ಮತ್ಸ್ಯಲೋಕದ ಮೆರುಗು
ಸಿದ್ದರಾಮಯ್ಯ ನಿವಾಸಕ್ಕೆ ಸಚಿವ ಕೆ.ಎಸ್.ಬಸವಂತಪ್ಪ ಭೇಟಿ