ಕನ್ನಡಪ್ರಭ ವಾರ್ತೆ ಬೆಂಗಳೂರು
ಪ್ರಕರಣಕ್ಕೆ ಸಂಬಂಧಿಸಿದ ತಮ್ಮ ವಿರುದ್ಧದ ತನಿಖೆ ರದ್ದುಪಡಿಸುವಂತೆ ಕೋರಿ ಕಿಂಗ್‌ಫಿಷರ್, ಡೆಕ್ಕನ್ ಚಾರ್ಟರ್ಸ್, ಕ್ಯಾಪ್ಟನ್ ಗೋಪಿನಾಥ್ ಮತ್ತಿತರರು ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾ। ಹೇಮಂತ್ ಚಂದನಗೌಡರ್ ಅವರ ಪೀಠ ಈ ಆದೇಶ ಮಾಡಿದೆ.
ನ್ಯಾಯಾಲಯದ ಅನುಮತಿಯ ಬಳಿಕವೇ ವಿಲೀನ ಪ್ರಕ್ರಿಯೆ ನಡೆದಿದೆ. ಆದ್ದರಿಂದ ಎಸ್‌ಎಫ್‌ಐಒ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ಹಾಗೂ ವಿಚಾರಣೆ ನಡೆಸಲು ಸಾಧ್ಯವಿಲ್ಲ. ಪ್ರಕರಣ ಸಂಬಂಧ ಯಾವುದೇ ಬಾಧಿತರಾರು ದೂರು ನೀಡಿಲ್ಲ. 2007ರಲ್ಲಿ ವಿಲೀನ ನಡೆದಿದರೆ, 2012ರಲ್ಲಿ ಕಂಪನಿ ಕಾಯ್ದೆಯಡಿ ಕಾನೂನು ಕ್ರಮ ಆರಂಭಿಸಿರುವುದು ನಿಯಮ ಬಾಹಿರ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್ ಅರ್ಜಿದಾರರ ವಿರುದ್ಧದ ಪ್ರಕರಣ ರದ್ದುಪಡಿಸಿದೆ.ಏನಿದು ಪ್ರಕರಣ?:
ಕಿಂಗ್‌ಫಿಷರ್ ಏರ್‌ಲೈನ್ಸ್ ಮಾಜಿ ಮಾಲೀಕ ವಿಜಯ್ ಮಲ್ಯ, ಕಂಪನಿಯ ನಿರ್ದೇಶಕ ಮತ್ತು ಯುನೈಟೆಡ್ ಬ್ರೇವರೀಸ್ ಸಮೂಹದ ಪ್ರಧಾನ ಹಣಕಾಸು ಅಧಿಕಾರಿ ಎ.ಕೆ.ರವಿ ನೆಡುಂಗಡಿ, ಡೆಕ್ಕನ್ ಏರ್ ಸಂಸ್ಥಾಪಕ ಕ್ಯಾಪ್ಟರ್ ಜಿ.ಆರ್. ಗೋಪಿನಾಥ್ ಸೇರಿದಂತೆ ಮತ್ತಿತರು ಪ್ರಕರಣದಲ್ಲಿ ಆರೋಪಿಗಳಾಗಿದ್ದರು. ಅವರ ವಿರುದ್ಧ 2018ರಲ್ಲಿ ಬೆಂಗಳೂರಿನ ಗಂಭೀರ ವಂಚನೆಗಳ ತಡೆ ವಿಶೇಷ ನ್ಯಾಯಾಲಯವು ಬಂಧನ ವಾರೆಂಟ್ ಜಾರಿ ಮಾಡಿತ್ತು. ವಾರೆಂಟ್, ಎಸ್‌ಎಫ್‌ಐಒ ತನಿಖೆ ಮತ್ತು ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದತಿಗೆ ಕೋರಿ ಅರ್ಜಿದಾರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಜಯ್ ಮಲ್ಯ ಅರ್ಜಿ ಸಲ್ಲಿಸಿರಲಿಲ್ಲ.