ಕನ್ನಡ ಭಾಷೆ ನಾಡಿನ ಸ್ವಾಭಿಮಾನದ ಪ್ರತೀಕ: ಡಿ.ಎಂ.ಪವಿತ್ರ

KannadaprabhaNewsNetwork |  
Published : Nov 20, 2026, 01:45 AM IST
19ಕೆಎಂಎನ್ ಡಿ23 | Kannada Prabha

ಸಾರಾಂಶ

ಮಕ್ಕಳಲ್ಲಿ ಕನ್ನಡ ಭಾಷಾಭಿಮಾನ ಬೆಳೆಸುವ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೆ ಹಲವು ಭಾಷೆಗಳ ಕಲಿಕೆ ಅತ್ಯಗತ್ಯವಾಗಿದೆ. ಇಂದಿನ ತಲೆಮಾರಿನ ವಿದ್ಯಾರ್ಥಿಗಳು ಕನ್ನಡ ಭಾಷೆಯ ಶ್ರೀಮಂತಿಕೆ, ಸಾಹಿತ್ಯ ಪರಂಪರೆ ಹಾಗೂ ನಾಡಿನ ಸಂಸ್ಕೃತಿಯನ್ನು ಅರಿತುಕೊಳ್ಳಬೇಕು. ಮಾತೃಭಾಷೆ ಮೇಲಿನ ಪ್ರೀತಿ ಮತ್ತು ಅಭಿಮಾನ ಬೆಳೆಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಕನ್ನಡ ಭಾಷೆ ಕೇವಲ ಸಂವಹನದ ಮಾಧ್ಯಮವಲ್ಲ. ಅದು ನಮ್ಮ ನಾಡಿನ ಸಂಸ್ಕೃತಿ, ಇತಿಹಾಸ, ಪರಂಪರೆ ಹಾಗೂ ಸ್ವಾಭಿಮಾನದ ಪ್ರತೀಕವಾಗಿದೆ ಎಂದು ಮಳವಳ್ಳಿ ತಾಲೂಕಿನ ತಳಗವಾದಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕನ್ನಡ ಭಾಷಾ ಉಪನ್ಯಾಸಕಿ ಡಿ.ಎಂ.ಪವಿತ್ರ ತಿಳಿಸಿದರು.

ಸಮೀಪದ ಮೆಣಸಗೆರೆ ಗ್ರಾಮದ ಜ್ಞಾನ ಮುದ್ರ ವಿದ್ಯಾ ಮಂದಿರ್ ಶಾಲೆಯಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಹಾಗೂ ಕನ್ನಡ ರಾಜ್ಯೋತ್ಸವದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಮಕ್ಕಳಲ್ಲಿ ಕನ್ನಡ ಭಾಷಾಭಿಮಾನ ಬೆಳೆಸುವ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೆ ಹಲವು ಭಾಷೆಗಳ ಕಲಿಕೆ ಅತ್ಯಗತ್ಯವಾಗಿದೆ ಎಂದರು.

ಇಂದಿನ ತಲೆಮಾರಿನ ವಿದ್ಯಾರ್ಥಿಗಳು ಕನ್ನಡ ಭಾಷೆಯ ಶ್ರೀಮಂತಿಕೆ, ಸಾಹಿತ್ಯ ಪರಂಪರೆ ಹಾಗೂ ನಾಡಿನ ಸಂಸ್ಕೃತಿಯನ್ನು ಅರಿತುಕೊಳ್ಳಬೇಕು. ಮಾತೃಭಾಷೆ ಮೇಲಿನ ಪ್ರೀತಿ ಮತ್ತು ಅಭಿಮಾನ ಬೆಳೆಸಿಕೊಳ್ಳಬೇಕು ಎಂದರು.

ನಿವೃತ್ತ ಸಹಾಯಕ ಪ್ರಾಧ್ಯಾಪಕ ಪ್ರೊ.ಎಂ.ಪುಟ್ಟಸ್ವಾಮಿಗೌಡ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಮತ್ತು ಸಮಯ ಪಾಲನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಬಾಲ್ಯದಿಂದಲೇ ಉತ್ತಮ ಹವ್ಯಾಸ ರೂಢಿಸಿಕೊಂಡು ವಿದ್ಯಾಭ್ಯಾಸದೊಂದಿಗೆ ವಿಜ್ಞಾನ, ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳ ಜ್ಞಾನ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳಿಗೆ ವಿಜ್ಞಾನಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಿ ಸರಿಯಾದ ಉತ್ತರ ನೀಡಿದವರಿಗೆ ಬಹುಮಾನ ವಿತರಿಸಿದರು. 9 ನೇ ತರಗತಿ ವಿದ್ಯಾರ್ಥಿ ಕಾರ್ತಿಕ್‌ ಕನ್ನಡ ನಾಡು-ನುಡಿಯ ಮಹತ್ವ ಹಾಗೂ ಕನ್ನಡ ರಾಜ್ಯೋತ್ಸವದ ಆಚರಣೆ ಉದ್ದೇಶ ಕುರಿತು ಅರ್ಥಪೂರ್ಣವಾಗಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಂಸ್ಥೆ ಅಧ್ಯಕ್ಷೆ ಡಾ.ಸೌಮ್ಯರಾಜೇಶ್, ಕಾರ್ಯದರ್ಶಿ ಶಿವಮ್ಮ ಶಿವಕುಮಾರ್, ಟ್ರಸ್ಟಿ ತೇಜಸ್ವಿನಿ ತಿಪ್ಪಾರೇಗೌಡ, ಆಡಳಿತಾಧಿಕಾರಿ ಪ್ರಭಾವತಿ ಹಾಗೂ ಪ್ರಾಂಶುಪಾಲೆ ಕೆ.ಎಸ್. ಶೃತಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುದಾನ ನೆಚ್ಚದೇ ಊರ ಕೆರೆ ಸ್ಚಚ್ಛ ಮಾಡಿಕೊಂಡ ಗ್ರಾಮಸ್ಥರು
ಪಂಚತಂತ್ರ ಕಥೆಗಳ ಮೌಲ್ಯ ಮಕ್ಕಳ ಮನಃಪರಿವರ್ತನೆಗೆ ಸಹಕಾರಿ: ವಿವೇಕಾನಂದಗೌಡ ಪಾಟೀಲ