ಬರಗೂರು ರಾಮಚಂದ್ರಪ್ಪ ಮುಡಿಗೆ ಕಾರಂತ ಪ್ರಶಸ್ತಿಯ ಗರಿ

KannadaprabhaNewsNetwork |  
Published : Oct 18, 2026, 03:30 AM IST
ಶನಿವಾರ ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸ್ಟ್ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಮಾಹಿತಿ ನೀಡಿದರು | Kannada Prabha

ಸಾರಾಂಶ

ಡಾ. ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ 24ರಂದು ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರಂತ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ತಿಳಿಸಿದರು.

ಕುಂದಾಪುರ; ಡಾ. ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ 24ರಂದು ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರಂತ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ತಿಳಿಸಿದರು.

ಶನಿವಾರ ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯ ಸಾಹಿತಿ ಹಾಗೂ ಸಾಂಸ್ಕೃತಿಕ ಚಿಂತಕ ಪ್ರೊ. ಬರಗೂರು ರಾಮಚಂದ್ರಪ್ಪ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಐದು ಮಂದಿ ಸಾಧಕರಿಗೆ ಕಾರಂತ ವಿಶೇಷ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದರು.

ಮನೋವೈದ್ಯ ಡಾ. ಪಿ. ವಿಭಂಡಾರಿ, ಸಮಾಜಸೇವಕ ಗಣೇಶ್ ಕೊರಗ ಕುಂಭಾಶಿ, ನಿವೃತ್ತ ಪ್ರಾಧ್ಯಾಪಕಿ ಯು. ಮಹೇಶ್ವರಿ ಕಾಸರಗೋಡು, ಪತ್ರಕರ್ತ ಜಾನ್ ಡಿಸೋಜ ಹಾಗೂ ರಂಗತಜ್ಞ ಡಾ. ಶ್ರೀಪಾದ್ ಭಟ್ ಅವರು ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ಅಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ‘ಕಾರಂತರ ಕಥನಗಳ ವರ್ತಮಾನದ ಮರುಓದು’ ವಿಷಯದ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ. ಬಳಿಕ ಕಾರ್ಕಳದ ಕರಾವಳಿ ರಂಗಾಯಣದ ತಂಡದಿಂದ ಕಾರಂತರ ಕಥನ ಆಧಾರಿತ ನಾಟಕ ಪ್ರದರ್ಶನಗೊಳ್ಳಲಿದ್ದು, ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಸಂಜೆ 4 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದರು.ಕಾರಂತರ ಸಾಹಿತ್ಯ ಮತ್ತು ವೈಚಾರಿಕ ಚಿಂತನೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ 2002ರಲ್ಲಿ ಕರ್ನಾಟಕ ಸರ್ಕಾರ ಟ್ರಸ್ಟ್ ಸ್ಥಾಪಿಸಿದೆ. ಕಳೆದ ಒಂದೂವರೆ ವರ್ಷದಲ್ಲಿ 75ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನಡೆಸಲಾಗಿದ್ದು, ಹಾವೇರಿ, ಕೊಪ್ಪಳ ಮತ್ತು ಬೆಂಗಳೂರಿನಲ್ಲಿಯೂ ರಾಷ್ಟ್ರೀಯ ವಿಚಾರ ಸಂಕಿರಣಗಳನ್ನು ಆಯೋಜಿಸಲಾಗಿದೆ ಎಂದು ಗಣನಾಥ ಶೆಟ್ಟಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್ ಕಾರ್ಯದರ್ಶಿ ಪೂರ್ಣಿಮಾ, ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಾಂಶುಪಾಲ ಕೊತ್ತಾಡಿ ಉಮೇಶ್ ಶೆಟ್ಟಿ ಹಾಗೂ ಸಮಿತಿ ಸದಸ್ಯರಾದ ಚೇತನ್ ಶೆಟ್ಟಿ, ಭಾರತಿ ಮರವಂತೆ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಸ್ತಿಗಾಗಿ ಸೊಸೆ, ಮೊಮ್ಮಕ್ಕಳೊಂದಿಗೆ ಪುತ್ರನನ್ನೇ ಕೊಂದ
ಜೆನ್‌ ಝೀಗಳ ದಾರಿತಪ್ಪಿಸುತ್ತಿರುವ ಸಿಜೆಪಿ: ಬಿ.ವೈ. ರಾಘವೇಂದ್ರ