ಕನ್ನಡಪ್ರಭ ವಾರ್ತೆ ನರಸಿಂಹರಾಜಪುರ
ಡಿ.ದೇವರಾಜ ಅರಸು ಅವರು ಹಾವನೂರು ಆಯೋಗ ರಚಿಸಿ 300 ವಿವಿಧ ಜಾತಿ, ಪಂಗಡಗಳಿಗೆ ಶಿಕ್ಷಣ,ಉದ್ಯೋಗದಲ್ಲಿ ಮೀಸಲಾತಿ ತಂದು ಸಮಾಜದಲ್ಲಿ ಬದಲಾವಣೆ ತಂದಿದ್ದರು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಧನಂಜಯ ತಿಳಿಸಿದರು.ಇಲ್ಲಿ ಬುಧವಾರ ಡಿ.ದೇವರಾಜ ಅರಸು ಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಮತ್ತು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಂಟಿಯಾಗಿ ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಉಪನ್ಯಾಸ ನೀಡಿದರು.
ಡಿ.ದೇವರಾಜ ಅರಸು ಅವರು ಅಂಬೇಡ್ಕರ್ ಅವರ ರೀತಿಯಲ್ಲೇ ರಾಜ್ಯದಲ್ಲಿ ಎಲ್ಲರಿಗೂ ಸಮಬಾಳು, ಸರ್ವರಿಗೂ ಸಮಪಾಲು ಜಾರಿಗೆ ತಂದರು. ದೇವರಾಜ ಅರಸು ಅವರಿಗೆ ಪಾಂಡಿತ್ಯ ಇತ್ತು. ಬುದ್ದನ ಚಿಂತನೆ ಇತ್ತು. 1962ರಲ್ಲಿ ಅವಿರೋಧ ಶಾಸಕರಾಗಿ ಆಯ್ಕೆಯಾಗಿದ್ದರು. ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಅನೇಕ ಸಾಮಾಜಿಕ ಬದಲಾವಣೆ ತಂದಿದ್ದರು ಎಂದರು.ತಹಸೀಲ್ದಾರ್ ಡಾ.ನೂರಲ್ ಹುದಾ ಮಾತನಾಡಿ, ದೇವರಾಜ ಅರಸು ಅವರು ಸಮಾಜ ಸುಧಾರಣೆ ಹಲವಾರು ಕಾರ್ಯಕ್ರಮ ರೂಪಿಸಿದ್ದರು.ಅಲ್ಪಸಂಖ್ಯಾತರು, ಶೋಷಿತ ವರ್ಙದವರಿಗೆ ಶಿಕ್ಷಣ ಅತಿ ಮುಖ್ಯ ಎಂದು ರಾಜ್ಯದ ಹಲವಾರು ಕಡೆಗಳಲ್ಲಿ ಹಿಂದುಳಿದ ವರ್ಗಗಳ ಹಾಸ್ಟೆಲ್, ಆಶ್ರಮ ಶಾಲೆ. ನಿರ್ಮಾಣ ಮಾಡಿದ್ದರು. ಭೂ ಸುಧಾರಣೆ ತಂದು ಎಲ್ಲರಿಲ್ಲೂ ಏಕತೆ ಮೂಡಿಸಿದ್ದರು ಎಂದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದ ಮಾತನಾಡಿ, ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ಏಳಿಗೆಗಾಗಿ ಮೀಸಲಾತಿ ಜಾರಿಗೆ ತರದಿದ್ದರೆ ಹಿಂದಿದ ವರ್ಗಗಳ ಜನರು ಮುಂದೆ ಬರಲು ಸಾದ್ಯವಿರುತ್ತಿರಲಿಲ್ಲ. ದೇವರಾಜ ಅರಸು ಅರು 2 ಬಾರಿ ಮುಖ್ಯಮಂತ್ರಿಯಾಗಿ ಅನೇಕ ಕ್ರಾಂತಿಕಾರಕ ಬದಲಾವಣೆ ತಂದಿದ್ದರು. ಪ್ರಸ್ತುತ್ ಹಿಂದಳಿದ ವರ್ಗಗಳ ಹಾಸ್ಟೆಲ್‌ಗಳಿಗೆ ಪೌಷ್ಟಿಕ ಆಹಾರ ನೀಡುತ್ತಿದ್ದರೆ ಇದಕ್ಕೆ ಅರಸು ಅವರ ಮುಂದಾಲೋಚನ ಕಾರಣವಾಗಿದೆ ಎಂದರು.ಇದೇ ಸಂದರ್ಭದಲ್ಲಿ ತಾಲೂಕಿನ ಮೆಟ್ರಿಕ್ ಪೂರ್ವ ಬಾಲಕಿಯರ, ಬಾಲಕರ ವಿದ್ಯಾರ್ಥಿನಿಲಯದಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಪಿಯುಸಿ ಹಾಗೂ ಪದವಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಧನಂಜಯ ಅವರನ್ನು ಸನ್ಮಾನಿಸಲಾಯಿತು.
ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾದಿಕಾರಿ ಎಚ್.ಡಿ.ನವೀನ್ ಕುಮಾರ್, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಲ್.ಧರ್ಮರಾಜ್, ಆರಕ್ಷಕ ವೃತ್ತ ನಿರೀಕ್ಷಿಕ ಗುರುದತ್ ಕಾಮತ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್.ಮಂಜುನಾಥ್, ವಾಲ್ಮೀಕಿ ಸಂಘದ ಕ್ಷೇತ್ರ ಅಧ್ಯಕ್ಷ ಎ.ಶ್ರೀನಿವಾಸ್, ಡಿಎಸ್‌ಎಸ್ ಜಿಲ್ಲಾ ಮುಖಂಡ ಡಿ.ರಾಮು ಇದ್ದರು.ಅಕ್ಷತ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.