- ಮಾಜಿ ಸಿಎಂ ಡಿ.ದೇವರಾಜ ಅರಸು ಜನ್ಮದಿನಾಚರಣೆಯಲ್ಲಿ ತಹಸೀಲ್ದಾರ್
- - -ಕನ್ನಡಪ್ರಭ ವಾರ್ತೆ ಚನ್ನಗಿರಿ
ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು 2 ಬಾರಿ ಮುಖ್ಯಮಂತ್ರಿಯಾಗಿ ರಾಜ್ಯದ ಬಡವರ್ಗದ ಜನರ ಬದುಕನ್ನು ಸುಧಾರಿಸುವ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದಿದ್ದರು. ಆ ಮೂಲಕ ಬಡವರ್ಗದ ಜನರನ್ನು ಭೂಮಿಯ ಮಾಲೀಕರನ್ನಾಗಿ ಮಾಡುವಲ್ಲಿ ಶ್ರಮಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ತಹಸೀಲ್ದಾರ್ ಎನ್.ಜೆ. ನಾಗರಾಜ್ ಹೇಳಿದರು.ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಸಾಮಾಜಿಕ ಪರಿವರ್ತನೆಯ ಹರಿಕಾರ ಹಿಂದುಳಿದ ವರ್ಗಗಳ ಧೀಮಂತ ನಾಯಕ ಡಿ.ದೇವರಾಜ ಅರಸು 110ನೇ ಜನ್ಮ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಿಂದುಳಿದ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರುವಂತಹ ಅನೇಕ ಜನಪರ ಯೋಜನೆಗಳನ್ನು ಅರಸು ಅವರು ಜಾರಿಗೆ ತಂದರು. ಸಾಮಾಜಿಕ ಕಾಳಜಿ, ರಾಜ್ಯದ ಜನತೆಯ ಹಿತ ಬಯಸಿದವರಾಗಿದ್ದರು ಎಂದು ವಿವರಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರವೀಂದ್ರಕುಮಾರ್ ಅಥರ್ಗಾ ಮಾತನಾಡಿ, ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ಮಕ್ಕಳ ಉನ್ನತಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದಾರೆ. ಅವರ ದೂರದೃಷ್ಠಿಯ ಫಲದಿಂದಾಗಿ ಪ್ರಸ್ತುತ ರಾಜ್ಯದಲ್ಲಿ 2369 ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳು ಕಾರ್ಯನಿರ್ವಹಿಸುತ್ತಿವೆ. 1.87 ಲಕ್ಷ ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯಗಳಲ್ಲಿ ಇದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಜಿ.ಚಿನ್ನಸ್ವಾಮಿ ಮಾತನಾಡಿ, ಸರಳ- ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದ ಅರಸು ಅವರು ಹಿಂದುಳಿದ ವರ್ಗದ ಆಯೋಗವನ್ನು ಎಲ್.ಜಿ.ಹಾವನೂರು ನೇತೃತ್ವದಲ್ಲಿ ಸ್ಥಾಪಿಸಿ, ಭೂ ಸುಧಾರಣೆ ಮತ್ತು ಉಳುವವನೇ ಹೊಲದೊಡೆಯ ಕಾನೂನುಗಳನ್ನು ಸಮರ್ಪಕವಾಗಿ ಜಾರಿಗೆ ತಂದರು. ಆ ಮೂಲಕ ಬಡವರ್ಗದ ಜನರ ಜೀವನದ ಉದ್ಧಾರಕರಾಗಿದ್ದರು ಎಂದರು.
ಸಮಾರಂಭದ ಆರಂಭಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಭಾವಚಿತ್ರಕ್ಕೆ ತಹಸೀಲ್ದಾರರು ಮತ್ತು ತಾಲೂಕುಮಟ್ಟದ ಅಧಿಕಾರಿಗಳು ಪುಷ್ಪನಮನ ಸಲ್ಲಿಸಿದರು. ಮುಖ್ಯ ಅಥಿತಿಗಳಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್, ಹಿಂದುಳಿದ ವರ್ಗಗಳ ವಿಸ್ತೀರ್ಣಾಧಿಕಾರಿ ಶಾಂತಕುಮಾರ್, ಸಿಡಿಪಿಒ ನಿರ್ಮಲಾ, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀಕಾಂತ್, ಕೃಷಿ ಇಲಾಖೆಯ ಸಹಾಯಕ ನಿದೇರ್ಶಕ ಅರುಣ್, ತಾಲೂಕುಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.- - -
-20ಕೆಸಿಎನ್‌ಜಿ1.ಜೆಪಿಜಿ:ಚನ್ನಗಿರಿ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ಮಾಜಿ ಸಿಎಂ ದೇವರಾಜ ಅರಸು 110ನೇ ಜನ್ಮದಿನ ಆಚರಿಸಲಾಯಿತು.