ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಭಾರತೀ ಶಿಕ್ಷಣ ಸಂಸ್ಥೆಯಿಂದ ಕುವೆಂಪು ಸಭಾಂಗಣದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಕುಗ್ರಾಮದಲ್ಲಿ ಶಿಕ್ಷಣ ಸಂಸ್ಥೆ ತೆರೆದ ಗೌಡರು ಗುಣಮಟ್ಟದ ಶಿಕ್ಷಣ ನೀಡುತ್ತಾ ಹತ್ತಾರು ಹೊಸ ಕೋರ್ಸ್‌ಗಳನ್ನು ಆರಂಭಿಸಿ ಹಳ್ಳಿಗಾಡಿನ ವಿದ್ಯಾರ್ಥಿಗಳ ಪಾಲಿಗೆ ಶಿಕ್ಷಣ ಸಂಜೀವಿನಿಯಾಗಿದ್ದಾರೆ ಎಂದು ಸ್ಮರಿಸಿದರು.
ಶಿಕ್ಷಕರು ಕೇವಲ ಪಾಠ ಬೋಧಿಸುವುದಕ್ಕೆ ಸೀಮಿತವಾಗದೆ ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲತೆ, ಚಿಂತನಾ ಸಾಮರ್ಥ್ಯ ಹಾಗೂ ಹೊಸ ವಿಚಾರ ಬೆಳೆಸಬೇಕು. ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬರೂ ವೇಗವಾಗಿ ಬದಲಾಗುತ್ತಿರುವ ಜ್ಞಾನ ಮತ್ತು ತಂತ್ರಜ್ಞಾನಕ್ಕೆ ಹೊಂದಿಕೊಂಡು ಕೆಲಸ ಮಾಡಬೇಕು ಎಂದರು.ಬೆಂಗಳೂರಿನ ದಿಗಂತ ಸಂಸ್ಥೆ ಸಂಸ್ಥಾಪಕಿ ಗೀತಾ ಶ್ರೀನಿವಾಸನ್ ಮಾತನಾಡಿ, ಶಿಕ್ಷಕರು ಸಕಾರಾತ್ಮಕ ಮನೋಭಾವ ಬೆಳೆಸಿಕೊಂಡು ಸ್ವಯಂ ಅರಿವು ಹಾಗೂ ಆತ್ಮಗೌರವ ಹೆಚ್ಚಿಸಿಕೊಂಡಾಗ ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಧೈರ್ಯದಿಂದ ಎದುರಿಸಲು ಸಾಧ್ಯ ಎಂದರು.
ಶಿಕ್ಷಕರಿಂದ ನೃತ್ಯ, ಏಕಪಾತ್ರಾಭಿನಯ, ಗೀತ ಗಾಯನ, ವೇಷಭೂಷಣ ಸ್ಪರ್ಧೆ, ಫ್ಯಾಶನ್ ಶೋ, ನಾಟಕ ಪ್ರದರ್ಶನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ವಿವಿಧ ಕಲಾ ಪ್ರದರ್ಶನಗಳ ಮೂಲಕ ತಮ್ಮ ಪ್ರತಿಭೆ ಪ್ರದರ್ಶಿದರು.
ಕಾರ್ಯಕ್ರಮದಲ್ಲಿ ಭಾರತೀ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಬಿ.ಎಂ.ನಂಜೇಗೌಡ, ಬಿಇಟಿ ಹನುಮಂತನಗರ ಕ್ಯಾಂಪಸ್ ಕಾರ್ಯದರ್ಶಿ ಜಿ.ಡಿ.ಹಳ್ಳಿ ಸಿದ್ದೇಗೌಡ, ಟ್ರಸ್ಟಿ ಕಾರ್ಕಹಳ್ಳಿ ಬಸವೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.