ಧರ್ಮಸ್ಥಳ ಷಡ್ಯಂತ್ರದ ರೂವಾರಿಗಳನ್ನು ಬಂಧಿಸಿ

KannadaprabhaNewsNetwork |  
Published : Sep 04, 2025, 01:00 AM IST
2ಎಚ್ಎಸ್ಎನ್18 :  | Kannada Prabha

ಸಾರಾಂಶ

ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಹಾಗೂ ವ್ಯವಸ್ಥಿತ ಷಡ್ಯಂತ್ರ ಖಂಡಿಸಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಅಭಿಯಾನ ಹಾಗೂ ಬೃಹತ್ ಧರ್ಮ ಜಾಗೃತಿ ಸಮಾವೇಶಕ್ಕೆ ತೆರಳುವ ಮುನ್ನ ಮಾತನಾಡಿದರು. ಪವಿತ್ರ ಧಾರ್ಮಿಕ ಕ್ಷೇತ್ರಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳವು ಒಂದು. ಸರಿ ಸುಮಾರು ೮೦೦ ವರ್ಷಗಳ ಇತಿಹಾಸ ಹೊಂದಿರುವ ಈ ಕ್ಷೇತ್ರ ದಕ್ಷಿಣ ಕಾಶಿ ಎಂದೇ ನಾಮಾಂಕಿತವಾಗಿದೆ. ರಾಜ್ಯದಲ್ಲಷ್ಟೇ ಅಲ್ಲದೆ ದೇಶದ ಬೇರೆ ಬೇರೆ ರಾಜ್ಯಗಳಿಂದ ನಿತ್ಯ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲು ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಸಮಾಜ ಒಳಿತಿಗಾಗಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಕೆಲಸ ಮಾಡುತ್ತಿದ್ದಾರೆ ಎಂದರು.

ಚನ್ನರಾಯಪಟ್ಟಣ: ಧರ್ಮಸ್ಥಳದಲ್ಲಿ ದೇವರ ಹೆಸರಿಗೆ ಕಳಂಕ ತರಲು ಕೆಲವರು ಷಡ್ಯಂತ್ರ ನಡೆಸಿದ್ದು, ಇದರ ಹಿಂದಿರುವವರನ್ನು ಬಂಧಿಸಬೇಕು ಎಂದು ತಾಲೂಕು ಬಿಜೆಪಿ ಮುಖಂಡ ಚಿದಾನಂದ್ ಆಗ್ರಹಿಸಿದರು.

ಪಟ್ಟಣದ ಬಿಜೆಪಿ ಕಾರ್ಯಕರ್ತರು ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಹಾಗೂ ವ್ಯವಸ್ಥಿತ ಷಡ್ಯಂತ್ರ ಖಂಡಿಸಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಅಭಿಯಾನ ಹಾಗೂ ಬೃಹತ್ ಧರ್ಮ ಜಾಗೃತಿ ಸಮಾವೇಶಕ್ಕೆ ತೆರಳುವ ಮುನ್ನ ಮಾತನಾಡಿದರು. ಪವಿತ್ರ ಧಾರ್ಮಿಕ ಕ್ಷೇತ್ರಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳವು ಒಂದು. ಸರಿ ಸುಮಾರು ೮೦೦ ವರ್ಷಗಳ ಇತಿಹಾಸ ಹೊಂದಿರುವ ಈ ಕ್ಷೇತ್ರ ದಕ್ಷಿಣ ಕಾಶಿ ಎಂದೇ ನಾಮಾಂಕಿತವಾಗಿದೆ. ರಾಜ್ಯದಲ್ಲಷ್ಟೇ ಅಲ್ಲದೆ ದೇಶದ ಬೇರೆ ಬೇರೆ ರಾಜ್ಯಗಳಿಂದ ನಿತ್ಯ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲು ಸುಮಾರು ೫೦ ಸಾವಿರದಿಂದ ೧ ಲಕ್ಷ ಮಂದಿ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಸಮಾಜ ಒಳಿತಿಗಾಗಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಕೆಲಸ ಮಾಡುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಶುದ್ಧ ಕುಡಿಯುವ ನೀರು ಸೌಲಭ್ಯ, ದೇಗುಲಗಳ ನಿರ್ಮಾಣ, ಡೈರಿ ಕಟ್ಟಡ ನಿರ್ಮಾಣಕ್ಕೆ ನೆರವು ನೀಡುವುದು ಸೇರಿ ಸಾಲ ಸೌಲಭ್ಯ ಒದಗಿಸಿ, ಆರ್ಥಿಕ ಶಕ್ತಿ ಒದಗಿಸುವ ಮೂಲಕ ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಂಡಿದೆ. ಆದರೆ ಈಚೆಗೆ ಧರ್ಮಸ್ಥಳ ಕೆಟ್ಟ ಹೆಸರು ತರುವಂತೆ ಷಡ್ಯಂತ್ರ ನಡೆಸುತ್ತಿರುವುದು ಸರಿಯಲ್ಲ ಎಂದು ಹೇಳಿದರು.

ಕಳೆದ ಕೆಲವು ವರ್ಷಗಳಿಂದ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಸಮೀರ್ ಎಂ.ಡಿ, ಸಂತೋಷ ಶೆಟ್ಟಿ, ಜಯಂತ ಟಿ., ಅಜಯ್ ಅಂಚನ್ ಮತ್ತು ಅವನ ಸಹಚರರು ಸೇರಿಕೊಂಡು ಶ್ರೀ ಮಂಜುನಾಥ ಸ್ವಾಮಿ ದೇವಾಲಯ ಹಾಗೂ ಪೂಜ್ಯನೀಯ ಶ್ರೀ ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬಸ್ಥರ ಹೆಸರಿಗೆ ಕಳಂಕ ತರುವಂತಹ ಕೀಳುಮಟ್ಟದ ಭಾಷೆ ಉಪಯೋಗಿಸಿ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುತ್ತಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ದೇವಾಲಯ ಬಗ್ಗೆ ಎಐ ವೀಡಿಯೋ ತಯಾರಿಸಿ ಪೂರಕ ದಾಖಲೆಗಳಿಲ್ಲದೆ ನಿರಂತರ ಸುಳ್ಳು ಸುದ್ದಿ ಪ್ರಚಾರ ಮಾಡುತ್ತಿದ್ದಾರೆ. ಇದರಿಂದ ಶ್ರೀ ಕ್ಷೇತ್ರದ ಕೋಟ್ಯಾಂತರ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಈ ಮೇಲೆ ಹೆಸರಿಸಿರುವ ವ್ಯಕ್ತಿಗಳು ಮಾಡುತ್ತಿರುವ ಆರೋಪಗಳು ಸುಳ್ಳು ಎಂದು ನಮಗೆ ಸ್ಪಷ್ಟವಾಗಿ ಗೋಚರಿಸುತ್ತಿದೆ. ಇವರು ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸಮಾಜವನ್ನು ಒಡೆಯುವ ಕೆಲಸವನ್ನು ಮಾಡುತ್ತಿರುವುದಲ್ಲದೆ ಸಮಾಜ ಬಾಂಧವರಲ್ಲಿ ಭಿನ್ನಾಭಿಪ್ರಾಯಗಳನ್ನು ಹುಟ್ಟುಹಾಕುತ್ತಿದ್ದಾರೆ. ಅಲ್ಲದೆ ಸಮಾಜದಲ್ಲಿನ ಸ್ವಾಸ್ಥ್ಯ ಹಾಳು ಮಾಡಲು ಹೊರಟಿದ್ದಾರೆ. ಹಿಂದೂಗಳ ಅಸ್ಮಿತೆ, ನಂಬಿಕೆ ಹಾಗೂ ಭಾವನೆಗಳಿಗೆ ಫಾಸಿ ಮಾಡುವ ಹಿಂದೂ ವಿರೋಧಿಗಳಿಗೆ ಕಠಿಣ ಎಚ್ಚರಿಕೆ ನೀಡುವ ಜತೆಗೆ ಧಾರ್ಮಿಕ ಕ್ಷೇತ್ರಗಳ ರಕ್ಷಣೆಗೆ ಬದ್ಧತೆ ತೋರುವುದು ಈ ಅಭಿಯಾನದ ಉದ್ದೇಶ ಎಂದು ತಿಳಿಸಿದರು.

ತಾಲೂಕಿನ ಬಿಜೆಪಿಯ ಮುಖಂಡರಾದ ಜಗದೀಶ್‌ ಕೆರೆಬೀದಿ, ಚನ್ನಕೇಶವ, ಪ್ರಸನ್ನ ವಡ್ಡರಹಳ್ಳಿ, ಶ್ರವಣ್, ಭಾಸ್ಕರ್‌ ಆಚಾರ್, ರಘು ರಾಜೇಗೌಡ, ಆನಂದ್, ಮಂಜು ಗುಂಡಶೆಟ್ಟಿಹಳ್ಳಿ ಶಾಂತರಾಜ್ ಮತ್ತಿತರಿದ್ದರು.

PREV

Recommended Stories

ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
ಜಿಎಸ್ಟಿ ಕಡಿತದ ಲಾಭ ಜನರಿಗೆ ಸಿಗುವಂತಾಗಲಿ: ಸಿಎಂ ಆಶಯ