ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಸೋಮವಾರ ನಗರದ ‘ಸೈಕಲ್ ತುಳಿ ಸಮಸ್ಯೆ ತಿಳಿ’ ಕಾರ್ಯಕ್ರಮದ ಮೂಲಕ ವಿವಿಧ ವಾರ್ಡ್‌ನಲ್ಲಿ ಸರ್ಕಾರದಿಂದ ಹಮ್ಮಿ ಕೊಂಡ ಅಭಿವೃದ್ಧಿ ಕಾಮಗಾರಿಗಳ ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ನರಿ ದ್ರಾಕ್ಷಿ ಹಣ್ಣು ಸಿಗದೇ ಇದ್ದಾಗ ಹುಳಿ ಎಂದು ಹೇಳಿದಂತೆ, ಎಲ್ಲ ಗುತ್ತಿಗೆಯನ್ನು ಒಬ್ಬರೇ ಮಾಡುತ್ತಿದ್ದರು. ಈಗ ಅವರಿಗೆ ಕೆಲಸ ಸಿಗುತ್ತಿಲ್ಲ. ಹಾಗಾಗಿ ಕೆಲವರ ಮುಖಾಂತರ ಮಾತನಾಡುತ್ತಿದ್ದಾರೆ ಎಂದರು.
6 ರಿಂದ 10 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ₹5 ಕೋಟಿ ವೆಚ್ಚದಲ್ಲಿ ಮೌಲಾನ ಆಜಾದ್ ಸ್ಕೂಲ್ ಕಟ್ಟಡದ ನಿರ್ಮಾಣದ ಕಾಮಗಾರಿ ವೀಕ್ಷಣೆ ಮಾಡಲಾಗಿದೆ. ಗುಣಮಟ್ಟ ಪರಿಶೀಲನೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.ವಾಜಪೇಯಿ ಬಡಾವಣೆ ಒಂದಿಷ್ಟು ಜನ ಸಮಸ್ಯೆಯನ್ನ ಗಮನಕ್ಕೆ ತಂದಿದ್ದಾರೆ. ಈ ಹಿಂದೆ ವಾಜಪೇಯಿ ಲೇಔಟ್ ಕಟ್ಟಲು ಬಹಳಷ್ಟು ಸಮಯವನ್ನು ತೆಗೆದುಕೊಂಡರು. ನಿವೇಶನಗಳನ್ನು ಹಂಚಿಕೆ ಮಾಡುವ ಮೊದಲು ಕುಡಿಯುವ ನೀರು ಹಾಗೂ ಇತರೆ ಮೂಲ ಸೌಲಭ್ಯಗಳು ಮಾಡಿಕೊಡಬೇಕಾಗಿತ್ತು. ಆದರೆ, ಆ ಕೆಲಸ ಆಗಿಲ್ಲ ಎಂದರು.ಶಾಸಕನಾದ ಬಳಿಕ ತಾತ್ಕಾಲಿಕವಾಗಿ ಅಲ್ಲಿನ ಮನೆಗಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸಲಾಗಿದೆ. ಆದರೆ, ಅದು ಶಾಶ್ವತ ಅಲ್ಲ. ಅವರಿಗೆ ಶಾಶ್ವತವಾಗಿ ವಿದ್ಯುತ್ ಕೊಡುವ ವ್ಯವಸ್ಥೆ ಆಗಬೇಕು. ಜಿಲ್ಲೆಯ ಉಸ್ತುವಾರಿ ಸಚಿವರ ಸಹಕಾರದಿಂದ ಈಗಾಗಲೇ ಪವರ್ ಸ್ಟೇಷನ್ ಮಂಜೂರಾಗಿದೆ. ಒಂದು ವಾರದೊಳಗೆ ಟೆಂಡರ್ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ತಿಳಿಸಿದರು.
ಪಾರ್ಕ್‌ಗಳ ಅಭಿವೃದ್ಧಿಗೆ ₹25 ಲಕ್ಷ ನೀಡಲಾಗಿದೆ. ಎರಡು ತಿಂಗಳ ಒಳಗೆ ಈ ಎಲ್ಲ ಕಾಮಗಾರಿ ಮುಗಿಸಿ ಲೋಕಾರ್ಪಣೆ ಮಾಡಲಾಗುವುದು ಎಂದರು.
-- ಬಾಕ್ಸ್ ---
ಖಾಲಿ ನಿವೇಶನದಲ್ಲಿ ಇರುವ ಗಿಡಗಂಟೆಗಳನ್ನು ತೆಗೆದು ಸ್ವಚ್ಛಗೊಳಿಸಬೇಕು. ಇಲ್ಲದೆ ಹೋದರೆ ನಗರಸಭೆಯಿಂದ ಸ್ವಚ್ಛಗೊಳಿಸಿ ನಿವೇಶನದ ಮಾಲೀಕರಿಂದ ದುಪಟ್ಟು ಟ್ಯಾಕ್ಸ್ ವಸೂಲಿ ಮಾಡಬೇಕೆಂದು ನಗರಸಭೆ ಅಧಿಕಾರಿಗಳಿಗೆ ಶಾಸಕ ಎಚ್.ಡಿ.ತಮ್ಮಯ್ಯ ಸೂಚಿಸಿದರು.
ಚುನಾವಣಾ ಆಯೋಗ ಎಸ್‌ಐಆರ್ ಮಾಡುತ್ತಿದ್ದು, ಯಾವುದೇ ನಿರಾಪರಾಧಿಗೆ ಶಿಕ್ಷೆ ಆಗಬಾರದು. ಕಾನೂನು ಬದ್ಧವಾಗಿ ಕ್ರಮವಹಿಸಬೇಕು. ಮತದಾರರು ಎಸ್‌ಐಆರ್‌ಗೆ ಕೈಜೋಡಿಸಬೇಕು.