ಹಿರಿಯರ ಜೀವನಾನುಭವ ಯುವಕರಿಗೆ ಮಾರ್ಗದರ್ಶಿ

KannadaprabhaNewsNetwork |  
Published : Oct 02, 2024, 01:17 AM IST
ಚಿತ್ರದುರ್ಗ ನಾಲ್ಕನೇ ಪುಟದ ಲೀಡ್     | Kannada Prabha

ಸಾರಾಂಶ

ಹಿರಿಯ ನಾಗರಿಕರ ಜೀವನಾನುಭವಗಳು ಯುವಕರಿಗೆ ಮಾರ್ಗದರ್ಶಿ ಎಂದು ಉಪ ವಿಭಾಗಾಧಿಕಾರಿ ಎಂ.ಕಾರ್ತಿಕ್ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಮಂಗಳವಾರ ನಗರದ ತರಾಸು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡಪ್ರಭವಾರ್ತೆ, ಚಿತ್ರದುರ್ಗಹಿರಿಯ ನಾಗರಿಕರ ಜೀವನಾನುಭವಗಳು ಯುವಕರಿಗೆ ಮಾರ್ಗದರ್ಶಿ ಎಂದು ಉಪ ವಿಭಾಗಾಧಿಕಾರಿ ಎಂ.ಕಾರ್ತಿಕ್ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಮಂಗಳವಾರ ನಗರದ ತರಾಸು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಸಮಾಜದಲ್ಲಿ ಪ್ರತಿಯೊಬ್ಬ ನಾಗರಿಕರು, ವಿದ್ಯಾರ್ಥಿಗಳು, ಯುವಕರು ಹಿರಿಯ ನಾಗರೀಕರ ಉತ್ತಮ ಜೀವನ ಅನುಭವದ ಪಾಠಗಳನ್ನು ತಮ್ಮ ಜೀವನದಲ್ಲಿ ರೂಢಿಸಿಕೊಂಡಾಗ ಮಾತ್ರ ಅದ್ಭುತವಾದ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ ಎಂದರು.

ಹಿರಿಯ ಜೀವಗಳಿಗೆ ಆರೋಗ್ಯ ಮತ್ತು ಬೆಂಬಲವನ್ನು ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಹಿರಿಯ ನಾಗರಿಕರಿಗೆ ತಮ್ಮ ಮಕ್ಕಳು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಹಾಗೂ ಮಾನಸಿಕವಾಗಿ, ದೈಹಿಕವಾಗಿ ತೊಂದರೆಗಳು ನೀಡಿದರೆ ಏನು ಮಾಡುವುದು ಎಂಬ ಆತಂಕ ಬೇಡ. ಉಪವಿಭಾಗಾಧಿಕಾರಿಗಳ ಹಂತದಲ್ಲಿ, ಹಿರಿಯ ನಾಗರೀಕರ ಕಾಯ್ದೆಯಡಿ ದಾವೆ ಹೂಡಿ ಸಮಸ್ಯೆ ಪರಿಹರಿಸಿಕೊಳ್ಳಬಹುದು ಎಂದು ಧೈರ್ಯ ನೀಡಿದರು.

ಸಮಾಜದಲ್ಲಿ ಪ್ರಸ್ತುತ ಇಷ್ಟೆಲ್ಲಾ ಕಾನೂನು ಸುವ್ಯವಸ್ಥೆ ಇದ್ದರೂ ಸಹ, ತಮ್ಮ ಮಕ್ಕಳ ಲಾಲನೆ- ಪಾಲನೆ ಮಾಡಿ ಸರ್ವಸ್ವವನ್ನು ಧಾರೆ ಎರೆದ ಪೋಷಕರ ಬಗ್ಗೆ ಕಾಳಜಿ ವಹಿಸದೇ ಇರುವುದು ಬೇಸರದ ಸಂಗತಿ ಎಂದರು.ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್. ರಂಗಪ್ಪರೆಡ್ಡಿ ಮಾತನಾಡಿ, ಹಿರಿಯ ನಾಗರಿಕರಿಗಾಗಿ ಸರ್ಕಾರವು ಮತ್ತಷ್ಟು ವಿವಿಧ ರೀತಿಯ ಯೋಜನೆಗಳನ್ನು ರೂಪಿಸಬೇಕು. ಯುವ ಪೀಳಿಗೆ ಹಿರಿಯರ ಬಗ್ಗೆ ಗೌರವಯುತವಾದ ಮನೋಭಾವ ಹೊಂದಿರಬೇಕು. ಸರ್ಕಾರಿ ಕಚೇರಿಗಳಲ್ಲಿ ಹಿರಿಯ ನಾಗರೀಕರನ್ನು ಆತ್ಮೀಯತೆಯಿಂದ ಕಾಣಬೇಕು ಎಂದು ಮನವಿ ಮಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್. ಬಣಕಾರ್ ಮಾತನಾಡಿ, ಹಿರಿಯ ನಾಗರಿಕರು ತಮ್ಮ ಕುಟುಂಬ, ಸಮಾಜ, ಸಮುದಾಯಕ್ಕೆ ನೀಡಿದ ಕೊಡುಗೆಗಳ ಪ್ರತೀಕವಾಗಿ 1991 ರಿಂದ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಆಚರಿಸಲಾಗುತ್ತಿದೆ. ಹಿರಿಯ ನಾಗರೀಕರಿಗೆ ವಯಸ್ಸಾದಂತೆ ದೈಹಿಕ, ಮಾನಸಿಕ ಒತ್ತಡ ಹೆಚ್ಚಾಗುತ್ತದೆ. ಆದ್ದರಿಂದ ಪ್ರಸ್ತುತ ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣದ ಜತೆಗೆ ಉತ್ತಮವಾದ ಸಂಸ್ಕಾರವನ್ನು ರೂಢಿಸಿದರೆ ಮುಂದಿನ ಜೀವನ ಸುಖಕರವಾಗುವುದು ಎಂದರು.ಇದೇ ಸಂದರ್ಭದಲ್ಲಿ ಇತ್ತೀಚೆಗೆ ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಹಿರಿಯ ನಾಗರೀಕರ ಕ್ರೀಡಾಕೂಟ ಹಾಗೂ ಸಾಂಸ್ಕೃತಿ ಕಾರ್ಯಕ್ರಮದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ಹಾಗೂ ಪಾರಿತೋಷಕಗಳನ್ನು ನೀಡಿ ಗೌರವಿಸಲಾಯಿತು.ವಿಕಲಚೇನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಡಿ.ಸಿ. ಸೋಮಶೇಖರಯ್ಯ ಸ್ವಾಗತಿಸಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಂದಿಸಿದರು. ಮೂರ್ತಿ ಹಾಗೂ ತಂಡದವರು ಗೀತ ಗಾಯನ ನಡೆಸಿಕೊಟ್ಟರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ. ಕುಮಾರಸ್ವಾಮಿ, ಜಿಲ್ಲಾ ಪಂಚಾಯಿತಿ ಸಹ ಕಾರ್ಯದರ್ಶಿ ರವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ವಿಜಯ್ ಕುಮಾರ್, ಭರಮಸಾಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎನ್.ಸುಧಾ ಹಿರಿಯ ನಾಗರೀಕರು ಹಾಗೂ ವಿಶೇಷ ಚೇತನರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!